ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಆಚರಣೆಗೆ ದಿನಾಂಕ ನಿಗದಿ ಪಡಿಸಲಾಗಿದೆ. ಮೈಸೂರು ದಸರಾ ನಿಮಿತ್ತ ನಡೆಯುವಂತ ಜಂಬೂಸವಾರಿಯನ್ನು ಅಕ್ಟೋಬರ್ 5ರಂದು ನಡೆಸಲು ದಿನಾಂಕ ನಿಗದಿ ಪಡಿಸಲಾಗಿದೆ.
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಮೈಸೂರು ಅರಮನೆಯಲ್ಲಿ ಸಿದ್ಧತೆ ಆರಂಭವಾಗಿದೆ. ಸೆ.20ರ ಮಂಗಳವಾರದಿಂದ ಸಿಂಹಾಸನ ಜೋಡಣೆ ಆರಂಭವಾಗಿದೆ. ಅಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರಗೆ ಅರಮನೆಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಸೆ.26ರಂದು ಖಾಸಗಿ ದರ್ಬಾರ್ ಹಾಗೂ ವಿವಿಧ ಪೂಜೆಗಳು, ಧಾರ್ಮಿಕ ವಿಧಿಗಳು ನೆರವೇರಲಿವೆ.
ಅಕ್ಟೋಬರ್ 4ರಂದು ಅರಮನೆಯಲ್ಲಿ ಆಯುಧಪೂಜೆ ನಡೆಯಲಿದೆ. ಅ.5ರಂದು ವಿಜಯದಶಮಿ ಆಚರಣೆ ಇರುತ್ತದೆ. ಅ.20ರಂದು ಸಿಂಹಾಸನ ವಿಸರ್ಜನೆ ಹಿನ್ನೆಲೆಯಲ್ಲಿ ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ಗಂಟೆವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಇರುತ್ತದೆ.
ಪ್ರಸಕ್ತ ಸಾಲಿನ ಮೈಸೂರು ದಸರಾ ಕಾರ್ಯಕ್ರಮವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟಿಸಲಿದ್ದಾರೆ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ…
ಪಾಸ್‌ಪೋರ್ಟ್ ನಿಯಮದಲ್ಲಿ ಬದಲಾವಣೆ : 15 ವರ್ಷದೊಳಗಿನ ಮಕ್ಕಳಿಗೆ ಹೊಸ ನೀತಿ, ಅರ್ಜಿ ಶುಲ್ಕ ಪರಿಷ್ಕರಣೆ ನವದೆಹಲಿ: ವಿದೇಶಾಂಗ ಸಚಿವಾಲಯವು…
ಉಡುಪಿ: ಹುಲಿ ಕುಣಿತಕ್ಕೆ ಮನಸೋತ ಯತ್ನಾಳ್ ; ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಉಡುಪಿ: ಹುಲಿ ಕುಣಿತಕ್ಕೆ ಮನಸೋತ ಶಾಸಕ ಬಸನಗೌಡ ಪಾಟೀಲ್…
ಮಂಗಳೂರು: ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳೂರಲ್ಲಿ ನಡೆಯಲಿರುವ ಸಚಿವ…
ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತ ಮೊಬೈಲ್ ನೆಟ್‌ವರ್ಕ್ ಸಮಸ್ಯೆ; ತಾಂತ್ರಿಕ ಪರಿಹಾರಕ್ಕೆ ಸರ್ಕಾರ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು…
ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗದ ಅಭಿವೃದ್ಧಿ, ಪ್ರವಾಸೋದ್ಯಮಕ್ಕೆ ಆದ್ಯತೆ : ಡಿಸಿಎಂ ಡಾ.ಜಿ.ಪರಮೇಶ್ವರ್ ಉಡುಪಿ : ಉಡುಪಿ ಜಿಲ್ಲೆಯ…