ಮೈಸೂರು : ಕೆಎಂಎಫ್ನ ಜನಪ್ರಿಯ ಬ್ರ್ಯಾಂಡ್ ಆದ ನಂದಿನಿ ಹೆಸರಿನ ನಕಲಿ ತುಪ್ಪ ಜಾಲ ಗುರುವಾರ ಪತ್ತೆಯಾಗಿದೆ.
ನಗರದ ಚಾಮುಂಡಿಬೆಟ್ಟದ ತಪ್ಪಲಿನ ಹೊಸಹುಂಡಿ ಗ್ರಾಮದ ನಕಲಿ ನಂದಿನಿ ತುಪ್ಪ ತಯಾರಿಕಾ ಗೋದಾಮ ಮೇಲೆ ಹ್ಯೂಮನ್ ರೈಟ್ಸ್ ತಂಡದ ಉಪಾಧ್ಯಕ್ಷ ಪ್ರದೀಪ್ ನೇತೃತ್ವದಲ್ಲಿ ದಾಳಿ ಮಾಡಿದ್ದು, ಈ ಅಕ್ರಮ ಬೆಳಕಿಗೆ ಬಂದಿದೆ.
ನಕಲಿ ನಂದಿನಿ ತುಪ್ಪ ತಯಾರಿಸಿ ಲೋಡ್ ಮಾಡಿ ಬೇರೆ ಕಡೆಗೆ ವಿತರಣೆ ಮಾಡಲಾಗುತ್ತಿದೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಈ ತಂಡ ದಾಳಿ ನಡೆಸಿದೆ. ಮೈಮುಲ್ ವ್ಯವಸ್ಥಾಪಕ ನಿರ್ದೇಶಕ ಬಿ.ಎನ್.ವಿಜಯಕುಮಾರ್ ನೇತೃತ್ವದ ಅಧಿಕಾರಿಗಳು ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದೆ.
ನಂದಿನಿ ತುಪ್ಪದ ರೂಪವೇ ಬರಲೆಂದು ಅದಕ್ಕೆ ಡಾಲ್ಡಾ ಮಿಶ್ರಣ ಮಾಡಿ, ನಕಲಿ ತುಪ್ಪ ತಯಾರಿ ಮಾಡಲಾಗುತ್ತಿತ್ತು. ಈ ಸಂದರ್ಭದಲ್ಲಿ ನಕಲಿ ತುಪ್ಪ, ನಂದಿನಿ ಲೇಬಲ್‌ಗಳು, ಪ್ಯಾಕಿಂಗ್ ಯಂತ್ರ ಪತ್ತೆಯಾಗಿವೆ.ಪೊಲೀಸರು,ಆಹಾರನಿಯಂತ್ರಣಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…