Featured

ಮೈಸೂರು :ನಂದಿನಿ ಹೆಸರಿನ ನಕಲಿ ತುಪ್ಪ ಜಾಲ ಪತ್ತೆ – Vishwanews24

ಮೈಸೂರು :ನಂದಿನಿ ಹೆಸರಿನ ನಕಲಿ ತುಪ್ಪ ಜಾಲ ಪತ್ತೆ – Vishwanews24

ಮೈಸೂರು : ಕೆಎಂಎಫ್ನ ಜನಪ್ರಿಯ ಬ್ರ್ಯಾಂಡ್‌ ಆದ ನಂದಿನಿ ಹೆಸರಿನ ನಕಲಿ ತುಪ್ಪ ಜಾಲ ಗುರುವಾರ ಪತ್ತೆಯಾಗಿದೆ.

ನಗರದ ಚಾಮುಂಡಿಬೆಟ್ಟದ ತಪ್ಪಲಿನ ಹೊಸಹುಂಡಿ ಗ್ರಾಮದ ನಕಲಿ ನಂದಿನಿ ತುಪ್ಪ ತಯಾರಿಕಾ ಗೋದಾಮ ಮೇಲೆ ಹ್ಯೂಮನ್‌ ರೈಟ್ಸ್‌ ತಂಡದ ಉಪಾಧ್ಯಕ್ಷ ಪ್ರದೀಪ್‌ ನೇತೃತ್ವದಲ್ಲಿ ದಾಳಿ ಮಾಡಿದ್ದು, ಈ ಅಕ್ರಮ ಬೆಳಕಿಗೆ ಬಂದಿದೆ.

ನಕಲಿ ನಂದಿನಿ ತುಪ್ಪ ತಯಾರಿಸಿ ಲೋಡ್‌ ಮಾಡಿ ಬೇರೆ ಕಡೆಗೆ ವಿತರಣೆ ಮಾಡಲಾಗುತ್ತಿದೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಈ ತಂಡ ದಾಳಿ ನಡೆಸಿದೆ. ಮೈಮುಲ್‌ ವ್ಯವಸ್ಥಾಪಕ ನಿರ್ದೇಶಕ ಬಿ.ಎನ್‌.ವಿಜಯಕುಮಾರ್‌ ನೇತೃತ್ವದ ಅಧಿಕಾರಿಗಳು ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದೆ.

ನಂದಿನಿ ತುಪ್ಪದ ರೂಪವೇ ಬರಲೆಂದು ಅದಕ್ಕೆ ಡಾಲ್ಡಾ ಮಿಶ್ರಣ ಮಾಡಿ, ನಕಲಿ ತುಪ್ಪ ತಯಾರಿ ಮಾಡಲಾಗುತ್ತಿತ್ತು. ಈ ಸಂದರ್ಭದಲ್ಲಿ ನಕಲಿ ತುಪ್ಪ, ನಂದಿನಿ ಲೇಬಲ್‌ಗ‌ಳು, ಪ್ಯಾಕಿಂಗ್‌ ಯಂತ್ರ ಪತ್ತೆಯಾಗಿವೆ.ಪೊಲೀಸರು,ಆಹಾರನಿಯಂತ್ರಣಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago