Featured

ಮೈಸೂರು ನಗರದೊಳಗೆ ಫ್ಲೈಓವರ್ ನಿರ್ಮಾಣಕ್ಕೆ ಸಂಸದ ಯದುವೀರ್ ವಿರೋಧ – vishwanews24

ಮೈಸೂರು ನಗರದೊಳಗೆ ಫ್ಲೈಓವರ್ ನಿರ್ಮಾಣಕ್ಕೆ ಸಂಸದ ಯದುವೀರ್ ವಿರೋಧ

ಮೈಸೂರು: ಮೈಸೂರು ನಗರದೊಳಗೆ ಎರಡು ಫ್ಲೈಓವರ್  ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವ ಕ್ರಮಕ್ಕೆ ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ವಿರೋಧ ವ್ಯಕ್ತಪಡಿಸಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಅವರು, ಜೆಎಲ್‌ಬಿ ರಸ್ತೆ, ವಿನೋಬಾ ರಸ್ತೆಗಳು ಪಾರಂಪರಿಕ ರಸ್ತೆಗಳಾಗಿವೆ. ಈ ರಸ್ತೆಗಳನ್ನು ಹಾಗೆಯೇ ಉಳಿಸಿಕೊಳ್ಳಬೇಕು. ಜನಾಭಿಪ್ರಾಯ ಪಡೆಯದೇ ಈ ಮಾರ್ಗದಲ್ಲಿ ಫ್ಲೈಓವರ್ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದಾರೆ. ಡಿಪಿಆರ್ ಕೂಡ ಸಿದ್ಧಪಡಿಸುತ್ತಿದ್ದಾರೆ. ಇದಕ್ಕೆ ನಮ್ಮ ತೀವ್ರ ವಿರೋಧವಿದೆ ಎಂದಿದ್ದಾರೆ.

ವಿನೋಬಾ ರಸ್ತೆಯಲ್ಲಿ ಫ್ಲೈ ಓವರ್ ನಿರ್ಮಿಸಲು ಮುಂದಾದರೆ ಮರಗಳ ಹನನ ಆಗಲಿದೆ. ಹಾಗಾಗಿ ಈ ಮಾರ್ಗದಲ್ಲಿ ಫ್ಲೈಓವರ್ ನಿರ್ಮಾಣ ಮಾಡಬಾರದು. ಅಭಿವೃದ್ಧಿ ನೆಪದಲ್ಲಿ ಮೈಸೂರಿನ ಸೌಂದರ್ಯ ಹಾಳು ಮಾಡಬಾರದು. ಪಾರಂಪರಿಕ ನಗರಿಯ ಗುರುತು ಉಳಿಸಿಕೊಳ್ಳಬೇಕು. ಸಿಎಂ ಕೂಡ ಗ್ರೇಟರ್ ಮೈಸೂರು ಸಭೆಯಲ್ಲಿ ಮೈಸೂರಿನ ಪಾರಂಪರಿಕತೆ ಉಳಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಸಿಎಂ ಅವರ ಸಲಹೆಯಂತೆ ಅಧಿಕಾರಿಗಳು ನಡೆದುಕೊಳ್ಳಬೇಕು ಎಂದು ಹೇಳಿದ್ದಾರೆ.

ಫ್ಲೈಓವರ್ ನಿರ್ಮಾಣವೇ ಶಾಶ್ವತ ಪರಿಹಾರವಲ್ಲ. ಮೆಟ್ರೋ ಮಾರ್ಗ ನಿರ್ಮಾಣಕ್ಕೆ ನಮ್ಮ ವಿರೋಧವಿಲ್ಲ. ಮುಂಬೈ ಮಾದರಿಯಲ್ಲಿ ಅಂಡರ್ ಗ್ರೌಂಡ್ ನಲ್ಲಿ ಮೆಟ್ರೋ ನಿರ್ಮಾಣ ಮಾಡಲಿ. ಮೈಸೂರಿನ ಜನಸಂಖ್ಯೆಗೆ ಅನುಗುಣವಾಗಿ ಕಾಮಗಾರಿ ಕೈಗೊಳ್ಳಲಿ. ಗ್ರೇಟರ್ ಮೈಸೂರು ನಿರ್ಮಾಣ ಮಾಡುವಾಗ ಸ್ಥಳೀಯರಿಗೆ ಅನುಕೂಲವಾಗುವಂತೆ ಅಭಿವೃದ್ಧಿ ಕಾಮಗಾರಿ ಮಾಡಲಿ. ಜನರ ವಿರೋಧದ ನಡುವೆ ಫ್ಲೈ ಓವರ್ ಕಾಮಗಾರಿ ಕೈಗೆತ್ತಿಕೊಂಡರೆ ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಹಾಗೂ ಜನರ ಸಹಕಾರದೊಂದಿಗೆ ಹೋರಾಟ ರೂಪಿಸುತ್ತೇವೆ ಎಂದು ಎಚ್ಚರಿಸಿದ್ದಾರೆ.

ಗ್ರೇಟರ್ ಮೈಸೂರಿನಿಂದ ಒಳಿತಾಗಲಿದೆ. ಆದರೆ ಗ್ರೇಟರ್ ಮೈಸೂರು ನಿರ್ಮಾಣ ಮಾಡುವಾಗ ಪೂರ್ವ ತಯಾರಿ ಮಾಡಿಕೊಳ್ಳಬೇಕು. ಬೆಂಗಳೂರು ಮಾದರಿಯಲ್ಲಿ ಅವೈಜ್ಞಾನಿಕವಾಗಿ ನಿರ್ಮಾಣ ಮಾಡಬಾರದು ಎಂದು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ.

 

 

 

 

 

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

21 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago