ಮೈಸೂರು: ನಾಳೆಯಿಂದ 21ರವರೆಗೆ ಪ್ರವಾಸಿಗರ ಅರಮನೆ ಪ್ರವೇಶ ನಿರ್ಬಂಧ – Vishwanews24

Featured, ರಾಜ್ಯ ನ್ಯೂಸ್

ಮೈಸೂರು: ನಾಳೆಯಿಂದ 21ರವರೆಗೆ ಪ್ರವಾಸಿಗರ ಅರಮನೆ ಪ್ರವೇಶ ನಿರ್ಬಂಧ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಯೋಗ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಹಿನ್ನೆಲೆಯಲ್ಲಿ, ಮೈಸೂರು ಅರಮನೆ ವೀಕ್ಷಣೆಗೆ ನಿರ್ಬಂಧ ವಿಧಿಸಲಾಗಿದೆ. ಜೂನ್ 19ರಿಂದ ಜೂನ್ 21ರ ಮಧ್ಯಾಹ್ನ 12ರವರೆಗೆ ಪ್ರವಾಸಿಗರ ಪ್ರವೇಶಕ್ಕೆ ತಾತ್ಕಾಲಿಕವಾಗಿ ‌ನಿರ್ಬಂಧವಿರಲಿದೆ.

ಅರಮನೆ ಆವರಣದಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಲಿದ್ದು, ಅದಕ್ಕಾಗಿ ಪೂರ್ವ ಸಿದ್ಧತೆ ಕೈಗೊಳ್ಳಬೇಕಿರುವುದರಿಂದಾಗಿ ನಿರ್ಬಂಧ ವಿಧಿಸಲಾಗಿದೆ. ಅರಮನೆ ಆವರಣದಲ್ಲಿ ನಡೆಯುವ ಧ್ವನಿ ಮತ್ತು ಬೆಳಕು ಕಾರ್ಯಕ್ರಮವನ್ನೂ ಶುಕ್ರವಾರದಿಂದ ಜೂನ್ 22ರವರೆಗೆ ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ ಎಂದು ಅರಮನೆ ಮಂಡಳಿ ತಿಳಿಸಿದೆ.

ಪ್ರತಿಭಟನೆ ಬೆನ್ನಲ್ಲೇ ಸಿಎಪಿಎಫ್ ನೇಮಕಾತಿಯಲ್ಲಿ ಮೀಸಲಾತಿ ಘೋಷಿಸಿದ ಕೇಂದ್ರ – Vishwanews24

Leave a Reply