ಮೈಸೂರು: ಸತತ 10 ದಿನಗಳಿಂದ ಬಿದ್ದ ಭಾರೀ ಮಳೆಯ ಪರಿಣಾಮ ಬುಧವಾರ ರಾತ್ರಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ ಉಂಟಾಗಿದೆ.
ಚಾಮುಂಡಿ ಬೆಟ್ಟದಿಂದ ನಂದಿಗೆ ಹೋಗುವ ಮಾರ್ಗದಲ್ಲಿ ಈ ಗುಡ್ಡ ಕುಸಿತ ಸಂಭವಿಸಿದೆ. ಹೆಚ್ಚು ಕಡಿಮೆ 60 ಅಡಿಗಳಷ್ಟು ಗುಡ್ಡ ಕುಸಿದಿದೆ. ಗುಡ್ಡ ಕುಸಿತದಿಂದ ಪ್ರವಾಸಿಗರ ಸಂಚಾರಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ.
ಮೈಸೂರಿನಲ್ಲಿ ಧಾರಾಕಾರ ಮಳೆ ಬಂದಿದ್ದು ಕಳೆದ 10 ದಿನಗಳಿಗೆ ಹೋಲಿಸಿದರೆ ನಿನ್ನೆ ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ. ಹೀಗಾಗಿ ದೊಡ್ಡ ಮಟ್ಟದಲ್ಲಿ ಗುಡ್ಡ ಕುಸಿತವಾಗಿದೆ. ಎರಡು ವರ್ಷದ ಹಿಂದೆಯೂ ಇದೇ ಮಾರ್ಗದ ಮತ್ತೊಂದು ಭಾಗದಲ್ಲಿ ಗುಡ್ಡ ಕುಸಿತವಾಗಿತ್ತು.
ಕಳೆದ ಕೆಲದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಬೆಂಗಳೂರು ಸಹಿತ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಹಿಂಗಾರು ಮಾರುತಗಳಿಂದ ಅಕ್ಟೋಬರ್ ಕೊನೆಯ ವಾರದಲ್ಲಿ ಮತ್ತೆ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…