Featured

ಮೈಸೂರು: ಮಹಾರಾಣಿ ಕಾಲೇಜು ಕಟ್ಟಡದ ಮೇಲ್ಛಾವಣಿ ಕುಸಿತ ಪ್ರಕರಣ; ಅವಶೇಷಗಳಡಿ ಸಿಲುಕಿದ್ದ ಓರ್ವ ಕಾರ್ಮಿಕ ಸಾವು – vishwanews24

ಮೈಸೂರು: ಮಹಾರಾಣಿ ಕಾಲೇಜು ಕಟ್ಟಡದ ಮೇಲ್ಛಾವಣಿ ಕುಸಿತ ಪ್ರಕರಣ; ಅವಶೇಷಗಳಡಿ ಸಿಲುಕಿದ್ದ ಓರ್ವ ಕಾರ್ಮಿಕ ಸಾವು

ಮೈಸೂರು: ಮೂರು ವರ್ಷಗಳ ಹಿಂದೆ ಶಿಥಿಲಗೊಂಡು ಕುಸಿದಿದ್ದ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಕಟ್ಟಡದ ಮೇಲ್ಛಾವಣಿ ಮಂಗಳವಾರ ಪೂರ್ಣ ಕುಸಿದಿದ್ದು, ಅವಶೇಷಗಳಡಿಯಲ್ಲಿ ಸಿಲುಕಿದ್ದ ಓರ್ವ ಕಾರ್ಮಿಕ ಮೃತಪಟ್ಟಿದ್ದಾರೆ.

ಬುಧವಾರ ಮಹರಾಣಿ ಮಹಿಳಾ ಕಾಲೇಜಿನ ಮೇಲ್ಚಾವಣಿ ಕುಸಿದು 13 ಮಂದಿ ಕಾರ್ಮಿಕರು ಹೊರಬಂದಿದ್ದರು. ಓರ್ವ ಕಾರ್ಮಿಕ ಸದ್ದಾಂ ಕಟ್ಟಡದ ಒಳಗೆ ಸಿಲುಕಿಕೊಂಡಿದ್ದ. ಮಂಗಳವಾರ ಸಂಜೆಯಿಂದಲೇ ಅಗ್ನಿಶಾಮಕ ದಳ ಪೊಲೀಸರು ಮತ್ತು ನುರಿತ ಕೆಲಸಗಾರರು ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದ ವ್ಯಕ್ತಿಯನ್ನು ಹೊರತೆಗೆಯಲು ಕಾರ್ಯಾಚರಣೆ ಆರಂಭಿಸಿದ್ದರು. ಬುಧವಾರ ಬೆಳಗಿನ ಜಾವ ಅವಶೇಷಗಳಡಿಯಲ್ಲಿ ಸಿಲುಕಿದ್ದ ವ್ಯಕ್ತಿ ಮೃತಪಟ್ಟಿರುವುದು ದೃಡಪಟ್ಟಿದೆ.

ಮಂಗಳವಾರ ಸಂಜೆಯಿಂದಲೇ ಶಾಸಕ ಕೆ.ಹರೀಶ್ ಗೌಡ ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಸ್ಥಳದಲ್ಲೇ ಇದ್ದು, ಅವಶೇಷಗಳಡಿಯಲ್ಲಿ ಸಿಲುಕಿದ್ದ ವ್ಯಕ್ತಿಯ ರಕ್ಷಣೆಗೆ ಮುಂದಾಗಿದ್ದರು. ಆದರೆ ಅದು ಸಾಧ್ಯವಾಗದೆ ಅವಶೇಷಗಳಡಿ ಸಿಲುಕಿದ್ದ ವ್ಯಕ್ತಿ ಸಾವಿಗೀಡಾಗಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago