Featured

ಮೈಸೂರು: ಹೆಚ್ಚುತ್ತಿರುವ ಕೊರೋನಾ ಪ್ರಕರಣ : ಮೇ.4ರವರೆಗೆ ಚಾಮುಂಡಿಬೆಟ್ಟಕ್ಕೆ ಪ್ರವೇಶ ನಿಷೇಧ -Vishwanews24

ಮೈಸೂರು: ಹೆಚ್ಚುತ್ತಿರುವ ಕೊರೋನಾ ಪ್ರಕರಣ : ಮೇ.4ರವರೆಗೆ ಚಾಮುಂಡಿಬೆಟ್ಟಕ್ಕೆ ಪ್ರವೇಶ ನಿಷೇಧ -Vishwanews24

ಮೈಸೂರು: ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು ಅದರಲ್ಲೂ ಮೈಸೂರಿನಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣ ಆತಂಕ ತಂದಿದೆ. ಹೀಗಾಗಿ ಹೆಚ್ಚುತ್ತಿರುವ ಸೋಂಕನ್ನು ತಡೆಯುವ ಸಲುವಾಗಿ ಸಾರ್ವಜನಿಕರು ಸಾಮೂಹಿಕವಾಗಿ ಸೇರುವುದನ್ನು ತಪ್ಪಿಸುವ ಸಲುವಾಗಿ ಪ್ರಖ್ಯಾತ ದೇಗುಲವಾದ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇಗುಲಕ್ಕೆ ಪ್ರವೇಶವನ್ನು ನಿಷೇಧಿಸಲಾಗಿದೆ.

ಕೆಲವು ಸಮಯಗಳ ಹಿಂದೆ ವಿಶೇಷ ದಿನಗಳಲ್ಲಿ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿತ್ತಾದರೂ ಸಾಮಾನ್ಯ ದಿನಗಳಲ್ಲಿ ಪ್ರವೇಶ ನೀಡಲಾಗಿತ್ತು. ಹೀಗಾಗಿ ಸ್ಥಳೀಯರು ಮಾತ್ರವಲ್ಲದೆ, ದೂರದ ಊರುಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ದೇಗುಲಕ್ಕೆ ಭಕ್ತರು ಭೇಟಿ ನೀಡುತ್ತಿದ್ದರು.

ಕೊರೊನಾ ಪಾಸಿಟಿವ್ ಬಂದ್ರೆ ಹೆದರಬೇಡಿ, ಧೃತಿಗೆಡಬೇಡಿ ; ಆತ್ಮವಿಶ್ವಾಸದಿಂದ ಇರಿ, ಸರ್ಕಾರ ನಿಮ್ಮ ಜೊತೆಗಿದೆ : ಸುಧಾಕರ್ -Vishwanews24

ಇದೀಗ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯು ಸರ್ಕಾರದ ಆದೇಶದಂತೆ ರಾಜ್ಯದಲ್ಲಿ ಕೋವಿಡ್-19 ಹರಡುವುದನ್ನು ತಡೆಗಟ್ಟುವ ಸಲುವಾಗಿ ಏ. 21ರ ರಾತ್ರಿ 9ಗಂಟೆಯಿಂದ ಮೇ 4ರ ಬೆಳಿಗ್ಗೆ 6 ಗಂಟೆಯವರೆಗೆ ಚಾಮುಂಡೇಶ್ವರಿ ದೇವಾಲಯಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ದೇವಾಲಯಕ್ಕೆ ಭೇಟಿ ನೀಡುವ ಭಕ್ತರು ಒಂದೆಡೆಯಾದರೆ ವಾರಾಂತ್ಯದಲ್ಲಿ ಪ್ರವಾಹೋಪಾದಿಯಲ್ಲಿ ಜನ ಮೆಟ್ಟಿಲುಗಳ ಮೂಲಕ ಬೆಟ್ಟವನ್ನೇರುತ್ತಿದ್ದರು. ಸಾಮಾನ್ಯವಾಗಿ ಪಾದದಿಂದ ಸುಮಾರು ಒಂದು ಸಾವಿರ ಮೆಟ್ಟಿಲುಗಳನ್ನೇರುವ ಮೂಲಕ ಮುಂಜಾನೆಯ ವ್ಯಾಯಾಮ ಮಾಡುವ ಜನರಿದ್ದಾರೆ. ಇವರು ಖಾಯಂ ಆಗಿ ಬರುತ್ತಾರೆ. ಮುಂಜಾನೆ ಐದು ಗಂಟೆಯಿಂದಲೇ ಬೆಟ್ಟವೇರಲು ಜನ ಬರುತ್ತಾರೆ. ಒಂದು ಸಾವಿರ ಮೆಟ್ಟಿಲೇರಿ ಚಾಮುಂಡೇಶ್ವರಿ ದೇಗುಲಕ್ಕೊಂದು ಸುತ್ತು ಹೊಡೆದು ಮರಳುವ ಅಭ್ಯಾಸವನ್ನು ಹಲವರು ಮಾಡಿಕೊಂಡಿದ್ದಾರೆ. ಆದರೆ ವಾರದಲ್ಲಿ ಮಂಗಳವಾರ, ಶುಕ್ರವಾರ ಮತ್ತು ವಾರಾಂತ್ಯದ ದಿನವಾದ ಶನಿವಾರ, ಭಾನುವಾರ ಹೆಚ್ಚಿನ ಸಂಖ್ಯೆಯಲ್ಲಿ ಜನ ಮೆಟ್ಟಿಲು ಹತ್ತುತ್ತಾರೆ.

ಹಳೆಯಂಗಡಿ : ಸಿಡಿಲು ಬಂಡಿದು ಗಂಭೀರ ಸ್ಥಿತಿಯಲ್ಲಿದ್ದ ಮತ್ತೋರ್ವ ಬಾಲಕ ಸಾವು -Vshwanews24

 

Vishwa News 24

Recent Posts

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ – vishwanews24

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…

10 minutes ago

ಉಡುಪಿ : ಜೂ.12 ರಂದು ನೇರ ಸಂದರ್ಶನ – vishwanews24

ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…

17 minutes ago

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ಭೇಟಿ – vishwanews24

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…

23 minutes ago

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ – vishwanews24

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…

46 minutes ago

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ – vishwanews24

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…

2 hours ago

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ – vishwanews24

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…

2 hours ago