Featured

ಮೊಂಥಾ ಚಂಡಮಾರುತ ಎಫೆಕ್ಟ್: ಕರ್ನಾಟಕ, ಆಂಧ್ರ, ತೆಲಂಗಾಣದ ಗಡಿಜಿಲ್ಲೆಗಳಲ್ಲಿ ವರುರ್ಣಾಭಟ – vishwanews24

ಮೊಂಥಾ ಚಂಡಮಾರುತ ಎಫೆಕ್ಟ್: ಕರ್ನಾಟಕ, ಆಂಧ್ರ, ತೆಲಂಗಾಣದ ಗಡಿಜಿಲ್ಲೆಗಳಲ್ಲಿ ವರುರ್ಣಾಭಟ

ದೇಶದ ವಿವಿಧೆಡೆ ಅ.28, 29ರಂದು ಭಾರೀ ಮಳೆ

ನವದೆಹಲಿ: ಬಂಗಾಳಕೊಲ್ಲಿಯಲ್ಲಿ ಮೊಂಥಾ ಚಂಡಮಾರುತದ ಪರಿಣಾಮ ಕರ್ನಾಟಕ, ಆಂಧ್ರ, ತೆಲಂಗಾಣದ ಗಡಿ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆಂಧ್ರಪ್ರದೇಶ ಹಾಗೂ ಒಡಿಶಾದ ಕರಾವಳಿಯತ್ತ ಚಂಡಮಾರುತ ಮುನ್ನುಗ್ಗುತ್ತಿರುವ ಹಿನ್ನೆಲೆ ದೇಶದ ವಿವಿಧೆಡೆ ಅ.28 ಹಾಗೂ ಅ.29ರಂದು ವ್ಯಾಪಕ ಮಳೆಯಾಗಲಿದೆ. ಕರ್ನಾಟಕದ ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಇನ್ನೂ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಂಡಮಾರುತದಿಂದಾಗಿ ಈಗಾಗಲೇ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳವಾರ (ಅ.28) ಬೆಂಗಳೂರಿನಿಂದ ಹೊರಡಲಿರುವ ಕೆಲವು ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲಿ ವಾತಾವರಣ ತಂಪಾಗಿದ್ದು, ಅಲ್ಲಲ್ಲಿ ಜಿಟಿಜಿಟಿ ಮಳೆಯಾಗುತ್ತಿದೆ. ನಗರದ SMVTಯಿಂದ ಹೊರಡುವ ಏಳು ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಿದ್ದು, ಹೊರಡುವ ಸಮಯಕ್ಕಿಂತ 12 ಗಂಟೆ ತಡವಾಗಿ ಹೊರಡಲಿವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಆಂಧ್ರ ಕರಾವಳಿ ತೀರ ಪ್ರದೇಶಕ್ಕೆ ಉತ್ತರ-ವಾಯುವ್ಯ ದಿಕ್ಕಿನಲ್ಲಿ ಚಲಿಸುತ್ತಾ ಇಂದು ಸಂಜೆ ಅಥವಾ ರಾತ್ರಿಯ ವೇಳೆಗೆ ಆಂಧ್ರಪ್ರದೇಶದ ಮಚಲಿಪಟ್ಟಣ ಮತ್ತು ಕಳಿಂಗಪಟ್ಟಣ ನಡುವೆ, ಕಾಕಿನಾಡದ ಸುತ್ತಮುತ್ತಲಿನ ಕರಾವಳಿಯನ್ನು ದಾಟಲಿದೆ. ಈ ಚಂಡಮಾರುತವು ಗಂಟೆಗೆ 90 ರಿಂದ 100 ಕಿ.ಮೀ ವೇಗದಲ್ಲಿ ಚಲಿಸುವ ಸಾಧ್ಯತೆಯಿದೆ. ಅಲ್ಲದೇ ಚಂಡಮಾರುತವು 2-4.6 ಮೀಟರ್ ಎತ್ತರದ ಅಲೆಗಳೊಂದಿಗೆ ಬಂದು ಅಪ್ಪಳಿಸಿದ್ದು, ಆಂಧ್ರದ 1,419 ಹಳ್ಳಿಗಳು ಮತ್ತು 44 ಪಟ್ಟಣಗಳ ಮೇಲೆ ಪರಿಣಾಮ ಬೀರುವ ನಿರೀಕ್ಷೆಯಿದೆ. ಜೊತೆಗೆ ಆಂಧ್ರಪ್ರದೇಶ, ಒಡಿಶಾ, ಪುದುಚೇರಿ, ತಮಿಳುನಾಡು ಮತ್ತು ಛತ್ತೀಸ್‌ಗಢಗಳಲ್ಲಿ ರಾಷ್ಟ್ರೀಯ ವಿಪತ್ತು ಪಡೆಯ 22 ತಂಡಗಳನ್ನು ಸರ್ಕಾರ ನಿಯೋಜಿಸಿದೆ.

ಈಗಾಗಲೇ ಆಂಧ್ರದ ಹಲವು ನಗರಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಪರಿಸ್ಥಿತಿ ಅಸ್ತವ್ಯಸ್ಥವಾಗಿದೆ. ಆಂಧ್ರಪ್ರದೇಶದ ಅನಕಾಪಲ್ಲಿ, ಕಾಕಿನಾಡ, ಕೋನಾಸೀಮಾ, ಶ್ರೀಕಾಕುಳಂ, ನೆಲ್ಲೂರು, ವಿಶಾಖಪಟ್ಟಣಂ, ತಿರುಪತಿ, ಪಶ್ಚಿಮ ಗೋದಾವರಿಯಲ್ಲಿ ಮುಂದಿನ 10 ದಿನಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆ ಆಂಧ್ರಪ್ರದೇಶದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಹಲವು ಗ್ರಾಮಗಳು ಜಲಾವೃತಗೊಂಡಿದ್ದು, ಜನರನ್ನು ನಿರಾಶ್ರಿತ ಕೇಂದ್ರಗಳಿಗೆ ಶಿಫ್ಟ್ ಮಾಡಲಾಗಿದೆ. ಇನ್ನೂ ಆಂಧ್ರಪ್ರದೇಶದ ಪೂರ್ವ ಕರಾವಳಿಯಲ್ಲಿ ಸಂಚರಿಸುವ 65 ರೈಲುಗಳ ಓಡಾಟ ಸ್ಥಗಿತಗೊಂಡಿದೆ.

ಮೊಂಥಾ ಚಂಡಮಾರುತದ ಹಿನ್ನೆಲೆ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು  ಅವರು ತಡರಾತ್ರಿ ರಾಜ್ಯದ ಪರಿಸ್ಥಿತಿಯನ್ನು ಪರಿಶೀಲಿಸಲು ವೀಡಿಯೋ ಕಾನ್ಫರೆನ್ಸ್ ಮೂಲಕ ಪರಿಶೀಲನಾ ಸಭೆ ನಡೆಸಿದ್ದು, ಯಾವುದೇ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಜನರಿಗೆ ಸ್ಪಂದಿಸಲು ಜಿಲ್ಲೆಗೊಬ್ಬರು ಅಧಿಕಾರಿಯನ್ನು ನೇಮಕ ಮಾಡಿ ಎಂದು ಸೂಚನೆ ನೀಡಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago