Featured

ಮೊಟ್ಟೆಯಲ್ಲಿ ಯಾವುದೇ ಕ್ಯಾನ್ಸರ್ ಕಾರಕ ಅಂಶವಿಲ್ಲ ;  ಆತಂಕಪಡಬೇಕಿಲ್ಲ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ಮೊಟ್ಟೆಯಲ್ಲಿ ಯಾವುದೇ ಕ್ಯಾನ್ಸರ್ ಕಾರಕ ಅಂಶವಿಲ್ಲ ;  ಆತಂಕಪಡಬೇಕಿಲ್ಲ : ದಿನೇಶ್ ಗುಂಡೂರಾವ್ ಸ್ಪಷ್ಟನೆ

ಬೆಂಗಳೂರು  : ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶವಿದೆ ಎಂಬ ವದಂತಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತೆರೆ ಎಳೆದಿದ್ದಾರೆ. ಯಾವುದೇ ಕ್ಯಾನ್ಸರ್ ಕಾರಕ ಅಂಶವಿಲ್ಲ. ಯಾರು ಆತಂಕಪಡಬೇಕಿಲ್ಲ, ತಿನ್ನಲು ಸುರಕ್ಷಿತವಾಗಿದೆ ಎಂದು ತಿಳಿಸಿದ್ದಾರೆ.

ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಈ ವಿಚಾರವನ್ನು ಪ್ರಸ್ತಾಪ ಮಾಡಿದ ಬಿಜೆಪಿ ಶಾಸಕ ಸುನೀಲ್ ಕುಮಾರ್, ಮೊಟ್ಟೆಯ ಬಗ್ಗೆ ಕೆಲವೊಂದು ಮಾಹಿತಿಗಳು ಕೇಳಿಬರುತ್ತಿವೆ. ಈ ಬಗ್ಗೆ ಆರೋಗ್ಯ ಸಚಿವರು ಸ್ಪಷ್ಟನೆ ನೀಡಲಿ ಎಂದು ಒತ್ತಾಯಿಸಿದರು. ಇದಕ್ಕೆ ಸರ್ಕಾರ ಸ್ಪಷ್ಟನೆ ನೀಡಿದೆ.

ಮೊಟ್ಟೆ ಸೇವನೆ ಬಗ್ಗೆ ಯಾವುದೇ ಆತಂಕಪಡುವ ಅಗತ್ಯವಿಲ್ಲ. ಕಳೆದ ವರ್ಷ 147 ಮೊಟ್ಟೆ ಮಾದರಿಗಳನ್ನು ಪರೀಕ್ಷಿಸಲಾಗಿತ್ತು. ಪರೀಕ್ಷಿಸಿದ ಮಾದರಿಗಳಲ್ಲಿ ಕೇವಲ ಒಂದು ಫೇಲ್ ಆಗಿದ್ದು, ಉಳಿದವು ಉತ್ತಮವಾಗಿದ್ದವು. ಮೊಟ್ಟೆ ಆರೋಗ್ಯಕ್ಕೆ ಒಳ್ಳೆಯದು, ಸೇವಿಸಬಹುದು ಎಂದು ಸಚಿವರು ಭರವಸೆ ನೀಡಿದ್ದಾರೆ. ಮೊಟ್ಟೆಯ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಮೊಟ್ಟೆಯನ್ನು ಶಾಲಾ ಮಕ್ಕಳಿಗೆ ಕೊಡಬಹುದು, ತಿನ್ನಬಹುದು, ಆರೋಗ್ಯಕರವಾಗಿದೆ ಎಂದು ಸ್ಪಷ್ಟಪಡಿಸಿದರು.

ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ನಿರ್ದಿಷ್ಟ ಬ್ರ್ಯಾಂಡ್‌ನ ಮೊಟ್ಟೆಗಳಲ್ಲಿ ಕ್ಯಾನ್ಸರ್ ಉಂಟುಮಾಡಬಲ್ಲ `ಜೀನೋಟಾಕ್ಸಿಕ್’ ಕೂಡಿದೆ ಎಂಬ ವಿಡಿಯೋ ಹರಿದಾಡುತ್ತಿತ್ತು. ಸಹಜವಾಗಿ ಇದು ಜನರಲ್ಲಿ ಆತಂಕಕ್ಕೆ ಉಂಟು ಮಾಡಿತ್ತು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

34 minutes ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 hour ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 hours ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 hours ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 hours ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 hours ago