Featured

ಮೊದಲನೇ ಗಂಡ ಸಾಯುತ್ತಾನೆ ಎಂಬ ಜ್ಯೋತಿಷಿ ಮಾತು ಕೇಳಿ ಪ್ರಿಯಕರನಿಗೆ ವಿಷ ಕೊಟ್ಟು ಸಾಯಿಸಿದ ಪ್ರೇಯಸಿ – Vishwanews24

ಮೊದಲನೇ ಗಂಡ ಸಾಯುತ್ತಾನೆ ಎಂಬ ಜ್ಯೋತಿಷಿ ಮಾತು ಕೇಳಿ ಪ್ರಿಯಕರನಿಗೆ ವಿಷ ಕೊಟ್ಟು ಸಾಯಿಸಿದ ಪ್ರೇಯಸಿ

ತಿರುವನಂತಪುರಂ: ಮೊದಲನೇ ಗಂಡ ಸಾಯುತ್ತಾನೆ ಎಂಬ ಜ್ಯೋತಿಷಿ ಮಾತು ಕೇಳಿ ಪ್ರೇಯಸಿಯೇ ಪ್ರಿಯಕರನಿಗೆ ವಿಷಪ್ರಾಶನ ನೀಡಿ ಹತ್ಯೆಗೈದಿರುವ ಘಟನೆ ಕೇರಳದ ತಿರುವನಂತಪುರಂನಲ್ಲಿ  ನಡೆದಿದೆ.

ಮೃತದುರ್ದೈವಿಯನ್ನು ರೇಡಿಯಾಲಜಿ ವಿದ್ಯಾರ್ಥಿ ಶರೋನ್ ರಾಜ್ (23) ಎಂದು ಗುರುತಿಸಲಾಗಿದ್ದು, ಅಕ್ಟೋಬರ್ 25ರಂದು ಈತ ಮೃತಪಟ್ಟಿದ್ದಾನೆ. ಅಕ್ಟೋಬರ್ 31ರಂದು ಎಂಟು ಗಂಟೆಗಳ ಕಾಲ ನಡೆದ ವಿಚಾರಣೆ ಬಳಿಕ ಪ್ರೇಯಸಿಯೇ ತನ್ನ ಪ್ರಿಯಕರನನ್ನು ಕೊಂದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾಳೆ.

ಆರೋಪಿಯನ್ನು ಗ್ರೀಷ್ಮಾ ಎಂದು ಗುರುತಿಸಲಾಗಿದ್ದು, ಲವ್ ಬ್ರೇಕ್ ಅಪ್ ಮಾಡಿಕೊಳ್ಳುವುದಕ್ಕಾಗಿ ಶರೋನ್ ರಾಜ್ ಅನ್ನು ಕೊಂದಿರುವುದಾಗಿ ಸತ್ಯ ಬಾಯ್ಬಿಟ್ಟಿದ್ದಾಳೆ. ಕೊಲೆ ಮಾಡಲು ಮೊದಲೇ ಪ್ರೀ ಪ್ಲಾನ್ ಮಾಡಿದ್ದ ಗ್ರೀಷ್ಮಾ ಅಕ್ಟೋಬರ್ 14 ರಂದು ಶರೋನ್ ರಾಜ್ ಅನ್ನು ಮನೆಗೆ ಕರೆಸಿಕೊಂಡಿದ್ದಳು. ಈ ವೇಳೆ ಕಷಾಯದೊಂದಿಗೆ ಕೀಟನಾಶಕವನ್ನು ಬೆರೆಸಿ ಕುಡಿಸಿದ್ದಾಳೆ. ಇದಾದ ಬಳಿಕ ಪ್ರಿಯಕರ ವಾಂತಿ ಮಾಡಿಕೊಳ್ಳಲು ಆರಂಭಿಸಿ, ಬಳಿಕ ಸ್ನೇಹಿತನೊಂದಿಗೆ ತೆರಳಿದನು. ಇದನ್ನೂ ಓದಿ: ಮಂಗಳೂರು: ಜ. 6ರಂದು ಕುದ್ರೋಳಿಯಿಂದ ಬೆಂಗಳೂರುವರೆಗೆ ಐತಿಹಾಸಿಕ ಪಾದಯಾತ್ರೆ

ಗ್ರೀಷ್ಮಾ ಮತ್ತು ಶರೋನ್ ಒಂದು ವರ್ಷದಿಂದ ರಿಲೇಶನ್ ಶಿಪ್‍ನಲ್ಲಿದ್ದರು. ಅಲ್ಲದೇ ಮನೆಯವರು ಗ್ರೀಷ್ಮಾಗೆ ಬೇರೆಯವರೊಂದಿಗೆ ಮದುವೆ ನಿಶ್ಚಯ ಮಾಡಿದ್ದರು. ಫೆಬ್ರವರಿಯಿಂದ ಗ್ರೀಷ್ಮಾ ಹಾಗೂ ಶರೋನ್ ನಡುವೆ ಕೆಲವು ಮನಸ್ತಾಪಗಳು ಪ್ರಾರಂಭವಾಯಿತು. ಹೀಗಿದ್ದರೂ ಇಬ್ಬರೂ ರಿಲೇಶನ್ ಶಿಪ್ ಮಂದುವರೆಸಿದರು. ಆದರೆ ಇತ್ತೀಚೆಗೆ ಇವರಿಬ್ಬರ ನಡುವೆ ಮನಸ್ತಾಪ ಹೆಚ್ಚಾಗಿದ್ದರಿಂದ ಶರೋನ್ ಅನ್ನು ಬಿಡುವ ಸಲುವಾಗಿ, ವಿಷ ನೀಡಿ ಕೊಲ್ಲಲು ನಿರ್ಧರಿಸಿದಳು. ಮೊದಲಿಗೆ ಸಮಾಧಾನದಿಂದ ಮೃದು ಸ್ವಭಾವದಿಂದ ಬ್ರೇಕ್ ಅಪ್ ಮಾಡಿಕೊಳ್ಳೋಣ ಎಂದು ತಿಳಿಸಿದಳು. ಆದರೆ ಇದಕ್ಕೆ ಶರೋನ್ ರಾಜ್ ನಿರಾಕರಿಸಿದ್ದಾನೆ. ಅಲ್ಲದೇ ಜ್ಯೋತಿಷಿ ಒಬ್ಬರು ಗ್ರೀಷ್ಮಾ ಜಾತಕದ ಪ್ರಕಾರ, ಆಕೆಯ ಮೊದಲ ಪತಿ ಸಾಯುತ್ತಾನೆ ಎಂದು ಹೇಳಿದ್ದರು. ಇದರಿಂದ ಭಯಗೊಂಡು ಆತನೊಂದಿಗೆ ಬ್ರೇಕ್ ಮಾಡಿಕೊಳ್ಳಲು ಪ್ರಯತ್ನಿಸಿದಳು.

ಶರೋನ್‍ಗೆ ಏನು ನೀಡಿದ್ದಾಳೆ ಎಂದು ತಿಳಿದುಕೊಳ್ಳಲು ಆತನ ಸಹೋದರ ಗ್ರೀಷ್ಮಾಗೆ ನಿರಂತರ ಕರೆ ಮಾಡುತ್ತಿದ್ದನು. ಆದರೆ ಭಯದಿಂದ ಏನನ್ನೂ ಕೂಡ ಆಕೆ ಹೇಳಿಕೊಳ್ಳಲಿಲ್ಲ. ಒಂದು ವೇಳೆ ಸತ್ಯ ತಿಳಿಸಿದ್ದರೆ ಆತನನ್ನು ಉಳಿಸಬಹುದಾಗಿತ್ತು. ಅಕ್ಟೋಬರ್ 25 ರಂದು ಶರೋನ್ ತಿರುವನಂತಪುರಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟನು. ಆತನ ಸಾವಿಗೆ ಪ್ರೇಯಸಿಯೇ ಕಾರಣ ಎಂದು ಶರೋನ್ ಕುಟುಂಬಸ್ಥರು ಆರೋಪಿಸಿದ್ದಾರೆ.ಇದನ್ನೂ ಓದಿ: ಸ್ಯಾಂಡಲ್ ವುಡ್ ಖ್ಯಾತ ಕಿರುತೆರೆ ನಿರ್ದೇಶಕ `ಸಯ್ಯದ್ ಅಶ್ರಫ್’ ಹೃದಯಾಘಾತದಿಂದ ನಿಧನ – Vishwanews24

ಈ ಪ್ರಕರಣ ಸಂಬಂಧ ಅಕ್ಟೋಬರ್ 20 ರಂದು ಶರೋನ್ ಪೊಲೀಸರಿಗೆ ಹೇಳಿಕೆ ನೀಡಿದ್ದು, ತಾನೂ ಯಾರ ಮೇಲೂ ಅನುಮಾನ ಹೊಂದಿಲ್ಲ ಎಂದು ತಿಳಿಸಿ ಕೊನೆಯುಸಿರೆಳೆದಿದ್ದಾನೆ. ಇದೀಗ 8 ಗಂಟೆಗಳ ವಿಚಾರಣೆಯ ಬಳಿಕ ತಪ್ಪೊಪ್ಪಿಕೊಂಡ ಗ್ರೀಷ್ಮಾಳನ್ನು ತಿರುವನಂತಪುರಂನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

15 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

15 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

15 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

16 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

16 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

16 hours ago