Featured

ಮೊದಲು ಚುನಾವಣೆ ಗೆದ್ದು ಅಧಿಕಾರಕ್ಕೆ ಬನ್ನಿ , ನಂತರ ಸಿಎಂ ಅಭ್ಯರ್ಥಿ ಯಾರಾಗಬೇಕು ಎನ್ನುವ ಬಗ್ಗೆ ತೀರ್ಮಾನಿಸಿ : ಕಾಂಗ್ರೇಸ್ ಗೆ ಸಿ.ಟಿ.ರವಿ -Vishwanews24

ಮೊದಲು ಚುನಾವಣೆ ಗೆದ್ದು ಅಧಿಕಾರಕ್ಕೆ ಬನ್ನಿ , ನಂತರ ಸಿಎಂ ಅಭ್ಯರ್ಥಿ ಯಾರಾಗಬೇಕು ಎನ್ನುವ ಬಗ್ಗೆ ತೀರ್ಮಾನಿಸಿ : ಕಾಂಗ್ರೇಸ್ ಗೆ ಸಿ.ಟಿ.ರವಿ -Vishwanews24

ನವದೆಹಲಿ : “ಸೋತು ಸುಣ್ಣವಾಗಿರುವ ಕಾಂಗ್ರೆಸ್ ಚುನಾವಣೆ ಗೆಲ್ಲಲು ಹೆಣಗಾಡುತ್ತಿದೆ. ಚುನಾವಣೆಯಲ್ಲಿ ಸೋತು ಮೂಲೆಗುಂಪಾದವರೆಲ್ಲಾ ಸಿಎಂ ಸ್ಥಾನದ ಆಕಾಂಕ್ಷಿಗಳು” ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್‌ ಅಧಿಕಾರಕ್ಕಡ ಬರಲು ಏದುಸಿರುವ ಬಿಡುತ್ತಿದೆ. ಕಾಂಗ್ರೆಸ್‌‌ನಲ್ಲಿ ಸಿಎಂ ಆಕಾಂಕ್ಷಿಗಳ ಪಟ್ಟಿ ಹನುಮಂತದ ಬಾಲದಂತೆ ಬೆಳೆಯುತ್ತಿದೆ. ರಾಜ್ಯದಲ್ಲಿ ಚುನಾವಣೆ ನಡೆಯಲು ಇನ್ನೂ ಎರಡು ವರ್ಷ ಬೇಕು” ಎಂದಿದ್ದಾರೆ.

“ಅನೇಕ ಮಂದಿ ಚುನಾವಣೆಗೂ ಮುನ್ನ ಸಿಎಂ ಆಗಲು ಕುರ್ಚಿ ಮೇಲೆ ಟವಲ್‌ ಹಾಕಿದ್ದಾರೆ. ನಾವೇ 2018ರಲ್ಲಿ ಅಧಿಕಾರಕ್ಕೇರುತ್ತೇವೆ ಎಂದು ಕನಸು ಕಂಡವರ ಪರಿಸ್ಥಿತಿ ಈಗ ಏನಾಗಿದೆ. ಮೊದಲು ಚುನಾವಣೆ ಗೆದ್ದು ಅಧಿಕಾರಕ್ಕೆ ಬನ್ನಿ. ನಂತರ ಸಿಎಂ ಅಭ್ಯರ್ಥಿ ಯಾರಾಗಬೇಕು ಎನ್ನುವ ಬಗ್ಗೆ ತೀರ್ಮಾನಿಸಿ” ಎಂದು ಹೇಳಿದ್ದಾರೆ.

“ಕಾಂಗ್ರೆಸ್‌ನಲ್ಲಿ ದಿನಕ್ಕೊಬ್ಬರಂತೆ ಸಿಎಂ ಆಗಲು ತುದಿಗಾಲಿನಲ್ಲಿ ನಿಂತಿದ್ದಾರೆ. ರಾಜ್ಯದ ಜನತೆ ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಪಕ್ಷದ ಕೈ ಹಿಡಿಯುವುದಿಲ್ಲ. ಕಾಂಗ್ರೆಸ್‌ ಇಲ್ಲಿಯವರೆಗೂ ಅಲ್ಪಸಂಖ್ಯಾತರು ಹಾಗೂ ದಲಿತರನ್ನು ಓಟ್‌‌ಬ್ಯಾಂಕ್‌‌ ಮಾಡಿಕೊಂಡು ಮೂಗಿಗೆ ತುಪ್ಪ ಸವರಿತು” ಎಂದಿದ್ದಾರೆ.

“ಸಿ.ಎಂ. ಇಬ್ರಾಹಿಂ ನಾನು ಕೂಡಾ ಆಕಾಂಕ್ಷಿ ಎಂದು ಹೇಳಿದರಲ್ಲಿ ತಪ್ಪೇನಿಲ್ಲ. ನಾನು ಅವರ ಹೇಳಿಕೆಯನ್ನು ಸೂಕ್ಷ್ಮವಾಗಿ ಗಮನಿಸಿದ್ದೇನೆ. ಸಮುದಾಯಕ್ಕೆ ನ್ಯಾಯ ಒದಗಿಸುವುದಾದಲ್ಲಿ ಖಂಡಿತ ಆಗಲಿ. ಸದಕ್ಕೆ ನನ್ನ ಬೆಂಬಲ ಕೂಡಾ ಇದೆ” ಎಂದು ಹೇಳಿದ್ದಾರೆ.

“ದಲಿತರ ಹೆಸರು ಹೇಳಿಕೊಂಡು ಅವರ ಮೂಗಿಗೆ ತುಪ್ಪ ಸವರಿದ್ದೀರಿ. ಅಲ್ಪಸಂಖ್ಯಾತರಿಗಾದರೂ ಕಡೆ ಪಕ್ಷ ಅವಕಾಶ ನೀಡಿ. ತನ್ವೀರ್ ಸೇಠ್, ಸಿ.ಎಂ.ಇಬ್ರಾಹಿಂ, ಜಮೀರ್ ಅಹಮ್ಮದ್ ಯಾರೇ ಸಿಎಂ ಆದರೂ ನನ್ನ ಬೆಂಬಲಿವಿದೆ” ಎಂದು ತಿಳಿಸಿದ್ದಾರೆ.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

13 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

14 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

14 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

14 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

18 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

19 hours ago