Featured

ಮೊದಲ ಬಾರಿಗೆ ಕನ್ನಡದ ಕೃತಿಗೆ ಬೂಕರ್ ಪ್ರಶಸ್ತಿ ; ಪ್ರತಿಷ್ಠಿತ ಅಂತರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಸಾಹಿತಿ ಬಾನು ಮುಷ್ತಾಕ್ – vishwanews24

ಮೊದಲ ಬಾರಿಗೆ ಕನ್ನಡದ ಕೃತಿಗೆ ಬೂಕರ್ ಪ್ರಶಸ್ತಿ ; ಪ್ರತಿಷ್ಠಿತ ಅಂತರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಸಾಹಿತಿ ಬಾನು ಮುಷ್ತಾಕ್

ಇದು ಕನ್ನಡ, ಕನ್ನಡಿಗ ಮತ್ತು ಕರ್ನಾಟಕ ಸಂಭ್ರಮಿಸುವ ಹೊತ್ತು : ಸಿಎಂ ಅಭಿನಂದನೆ

ಲಂಡನ್: ಕನ್ನಡದ ಪ್ರಸಿದ್ಧ ಸಾಹಿತಿ ಬಾನು ಮುಷ್ತಾಕ್ ಅವರು ಪ್ರತಿಷ್ಠಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಬಾನು ಮುಷ್ತಾಕ್ ಅವರ ‘ಹಸೀನಾ ಮತ್ತು ಇತರ ಕತೆಗಳು’ ಕೃತಿಯ ಇಂಗ್ಲಿಷ್ ಅನುವಾದಿತ ಹಾರ್ಟ್ ಲ್ಯಾಂಪ್‌ಗೆ ಪ್ರಶಸ್ತಿ ಸಿಕ್ಕಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಕನ್ನಡದ ಕೃತಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಲಭಿಸಿರುವುದು ವಿಶೇಷ.

ಬೂಕರ್ ಪ್ರಶಸ್ತಿ 50 ಸಾವಿರ ಪೌಂಡ್‌ (ಅಂದಾಜು 57.28 ಲಕ್ಷ ರೂ.) ಒಳಗೊಂಡಿದೆ. ಇದೇ ಅನುವಾದಿತ ಕೃತಿಗೆ ‘ಪೆನ್ ಟ್ರಾನ್ಸ್‌ಲೇಟ್ಸ್’ ಪ್ರಶಸ್ತಿಯೂ ಸಿಕ್ಕಿತ್ತು.

1990 ಮತ್ತು 2023ರ ನಡುವೆ ಪ್ರಕಟಗೊಂಡ 12 ಕತೆಗಳನ್ನೊಳಗೊಂಡ ಈ ಸಂಕಲನವನ್ನು ದೀಪಾ ಭಸ್ತಿ ಅವರು ಕನ್ನಡದಿಂದ ಇಂಗ್ಲಿಷ್‌ಗೆ ಅನುವಾದಿಸಿದ್ದರು. ಮುಸ್ಲಿಂ ಸಮುದಾಯದ ಬಾಲಕಿಯರು ಹಾಗೂ ಹೆಣ್ಣುಮಕ್ಕಳ ದೈನಂದಿನ ಬದುಕನ್ನು ಆಧಾರಿಸಿ ಈ ಕತೆಯನ್ನು ಬರೆಯಲಾಗಿತ್ತು.

ಮೇ 21ರಂದು ಲಂಡನ್‌ನಲ್ಲಿ ಟೇಟ್ ಮಾಡರ್ನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಪ್ರಶಸ್ತಿಯನ್ನು ಘೋಷಿಸಲಾಯಿತು. ಫ್ರೆಂಚ್‌ನಿಂದ ಅನುವಾದವಾದ ಎರಡು ಕೃತಿಗಳು, ಜಪಾನ್‌, ಇಟಾಲಿಯನ್‌ ಹಾಗೂ ಡ್ಯಾನಿಷ್‌ ಭಾಷೆಯ ತಲಾ ಒಂದು ಕೃತಿ ‘ಶಾರ್ಟ್‌ ಲಿಸ್ಟ್‌’ನಲ್ಲಿದ್ದವು. ಶಾರ್ಟ್ ಲಿಸ್ಟ್‌ನಲ್ಲಿ ಆಯ್ಕೆಯಾಗಿದ್ದ ಎಲ್ಲರನ್ನೂ ಲಂಡನ್‌ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು.

2025ನೇ ಸಾಲಿನ ಬೂಕರ್ ಪ್ರಶಸ್ತಿ ವಿಜೇತ ಖ್ಯಾತ ಲೇಖಕಿ ಬಾನು ಮುಷ್ತಾಕ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿನ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, “ಅಂತಾರಾಷ್ಟ್ರೀಯ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾಗಿರುವ ಕನ್ನಡದ ಹೆಮ್ಮೆಯ ಲೇಖಕಿ ಬಾನು ಮುಷ್ತಾಕ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಇದು ಕನ್ನಡ, ಕನ್ನಡಿಗ ಮತ್ತು ಕರ್ನಾಟಕ ಸಂಭ್ರಮಿಸುವ ಹೊತ್ತು” ಎಂದು ತಿಳಿಸಿದ್ದಾರೆ.

“ಈ ನೆಲದ ಸೌಹಾರ್ದತೆ, ಜಾತ್ಯತೀತತೆ ಮತ್ತು ಸೋದರತ್ವದ ನಿಜ ಮೌಲ್ಯಗಳನ್ನು ಮೈಗೂಡಿಸಿಕೊಂಡು ಬರೆಯುತ್ತಿರುವ ಬಾನು ಮುಷ್ತಾಕ್ ಅವರು ಕನ್ನಡದ ಹಿರಿಮೆಯ ಬಾವುಟವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರಿಸಿ ನಮಗೆಲ್ಲ ಗೌರವ ತಂದುಕೊಟ್ಟಿದ್ದಾರೆ. ಅವರು ಇನ್ನಷ್ಟು ಕಾಲ ಸತ್ವಯುತವಾಗಿ ಬರೆಯುತ್ತಾ ಕನ್ನಡದ ಕಂಪನ್ನು ಜಗದಗಲಕ್ಕೆ ಪಸರಿಸುತ್ತಾ ಇರಲಿ ಎಂದು ಹಾರೈಸುತ್ತೇನೆ”, ಎಂದು ಸಿಎಂ ಹೇಳಿದ್ದಾರೆ.

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

6 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

15 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

15 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

15 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

15 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago