ನವದೆಹಲಿ: ಲೆಫ್ಟಿನೆಂಟ್ ಕರ್ನಲ್‌ಗಳಾಗಿದ್ದ ಭಾರತೀಯ ಸೇನೆಯ 108 ಮಂದಿ ಮಹಿಳಾ ಯೋಧರು ಕರ್ನಲ್ ಆಗಿ ಬಡ್ತಿ ಪಡೆದುಕೊಳ್ಳಲಿದ್ದಾರೆ. ಆ ಮೂಲಕ ಅವರೆಲ್ಲರೂ ತಂಡ ಮುನ್ನಡೆಸುವ ಜವಾಬ್ದಾರಿ ಪಡೆದುಕೊಳ್ಳಲಿದ್ದಾರೆ.
ಲೆಫ್ಟಿನೆಂಟ್ ಕರ್ನಲ್ ಸೇವೆಯಲ್ಲಿರುವ ಮಹಿಳೆಯರಿಗೆ ಬಡ್ತಿ ನೀಡುವ ಪ್ರಕ್ರಿಯೆ ಜನವರಿ 9ರಿಂದ ಆರಂಭವಾಗಿದ್ದು, 22ರವರೆಗೆ ನಡೆಯಲಿದೆ. 1992ರಿಂದ 2006ನೇ ಬ್ಯಾಚ್‌ನ ಒಟ್ಟು 108 ಮಂದಿ ಮಹಿಳೆಯರು ಲೆಫ್ಟಿನೆಂಟ್ ಕರ್ನಲ್ ಹುದ್ದೆಯಿಂದ ಕರ್ನಲ್ ಹುದ್ದೆಗೆ ಪದೋನ್ನತಿ ಹೊಂದಲಿದ್ದಾರೆ. ಆ ಮೂಲಕ ತಮ್ಮ ತಂಡಗಳನ್ನು ಮುನ್ನಡೆಸುವ ಜವಾಬ್ದಾರಿಯನ್ನು ಅವರು ಪಡೆದುಕೊಳ್ಳಲಿದ್ದಾರೆ.
ಎಂಜಿನಿಯರ್‍ಸ್, ಸಿಗ್ನಲ್‌ಗಳು, ಆರ್ಮಿ ಏರ್ ಡಿಫೆನ್ಸ್, ಇಂಟೆಲಿಜೆನ್ಸ್ ಕಾರ್ಪ್ಸ್, ಆರ್ಮಿ ಸರ್ವಿಸ್ ಕಾರ್ಪ್ಸ್, ಆರ್ಮಿ ಆರ್ಡನೆನ್ಸ್ ಕಾರ್ಪ್ಸ್, ಎಲೆಕ್ಟ್ರಿಕಲ್ ಆಂಡ್ ಮೆಕಾನಿಕಲ್ ಎಂಜಿನಿಯರ್‍ಸ್ ಸೇರಿದಂತೆ ಸೇನೆಯ ವಿವಿಧ ಶಸ್ತಾಸ್ತ್ರ ಮತ್ತು ಸೇವೆಗಳಲ್ಲಿರುವವರಿಗೆ ಬಡ್ತಿ ಪ್ರಕ್ರಿಯೆ ನಡೆಯುತ್ತಿದೆ. ಮೂರು ಹಂತದಲ್ಲಿ ಬಡ್ತಿ ಅವಕಾಶವಿದ್ದು, ಶೀಘ್ರ ಬಡ್ತಿ ಪಡೆದವರಿಗೆ ಮಾಹಿತಿ ನೀಡಲಾಗುತ್ತದೆ. 80 ಅಧಿಕಾರಿಗಳಿಗೆ ಈಗಾಗಲೇ ಬಡ್ತಿ ನೀಡಲಾಗಿದೆ ಎಂದು ಸೇನೆ ತಿಳಿಸಿರುವುದಾಗಿ ವರದಿಯಾಗಿದೆ.
ಆಯ್ಕೆ ಮಂಡಳಿ ಫಿಟ್ ಎಂದು ಘೋಷಿಸಲ್ಪಟ್ಟ ಬಳಿಕ ಮಹಿಳಾ ಅಧಿಕಾರಿಗಳನ್ನು ಕಮಾಂಡ್ ಅಸೈನ್‌ಮೆಂಟ್‌ಗಳಲ್ಲಿ ನಿಯೋಜನೆ ಮಾಡಲಾಗುತ್ತದೆ.
ಉಡುಪಿ ರಜತಮಹೋತ್ಸವ : ಮಲ್ಪೆ ಕಡಲ ಕಿನಾರೆಯಲ್ಲಿ ಸಮಾರಂಭ – Vishwanews24
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…