Featured

ಮೊದಲ ಬಾರಿಗೆ ಕರ್ನಲ್ ಆಗಿ ಬಡ್ತಿ ಪಡೆದ 108 ಮಹಿಳಾ ಯೋಧರು – Vishwanews24

ಲೆಫ್ಟಿನೆಂಟ್ ಕರ್ನಲ್ ಹುದ್ದೆಯಿಂದ ಕರ್ನಲ್ ಹುದ್ದೆಗೆ ಪದೋನ್ನತಿ ಹೊಂದಲಿದ್ದಾರೆ 108 ಮಹಿಳಾ ಯೋಧರು

ನವದೆಹಲಿ: ಲೆಫ್ಟಿನೆಂಟ್ ಕರ್ನಲ್‌ಗಳಾಗಿದ್ದ ಭಾರತೀಯ ಸೇನೆಯ 108 ಮಂದಿ ಮಹಿಳಾ ಯೋಧರು ಕರ್ನಲ್ ಆಗಿ ಬಡ್ತಿ ಪಡೆದುಕೊಳ್ಳಲಿದ್ದಾರೆ. ಆ ಮೂಲಕ ಅವರೆಲ್ಲರೂ ತಂಡ ಮುನ್ನಡೆಸುವ ಜವಾಬ್ದಾರಿ ಪಡೆದುಕೊಳ್ಳಲಿದ್ದಾರೆ.

ಲೆಫ್ಟಿನೆಂಟ್ ಕರ್ನಲ್ ಸೇವೆಯಲ್ಲಿರುವ ಮಹಿಳೆಯರಿಗೆ ಬಡ್ತಿ ನೀಡುವ ಪ್ರಕ್ರಿಯೆ ಜನವರಿ 9ರಿಂದ ಆರಂಭವಾಗಿದ್ದು, 22ರವರೆಗೆ ನಡೆಯಲಿದೆ. 1992ರಿಂದ 2006ನೇ ಬ್ಯಾಚ್‌ನ ಒಟ್ಟು 108 ಮಂದಿ ಮಹಿಳೆಯರು ಲೆಫ್ಟಿನೆಂಟ್ ಕರ್ನಲ್ ಹುದ್ದೆಯಿಂದ ಕರ್ನಲ್ ಹುದ್ದೆಗೆ ಪದೋನ್ನತಿ ಹೊಂದಲಿದ್ದಾರೆ. ಆ ಮೂಲಕ ತಮ್ಮ ತಂಡಗಳನ್ನು ಮುನ್ನಡೆಸುವ ಜವಾಬ್ದಾರಿಯನ್ನು ಅವರು ಪಡೆದುಕೊಳ್ಳಲಿದ್ದಾರೆ.

ಎಂಜಿನಿಯರ್‍ಸ್, ಸಿಗ್ನಲ್‌ಗಳು, ಆರ್ಮಿ ಏರ್ ಡಿಫೆನ್ಸ್, ಇಂಟೆಲಿಜೆನ್ಸ್ ಕಾರ್ಪ್ಸ್, ಆರ್ಮಿ ಸರ್ವಿಸ್ ಕಾರ್ಪ್ಸ್, ಆರ್ಮಿ ಆರ್ಡನೆನ್ಸ್‌ ಕಾರ್ಪ್ಸ್, ಎಲೆಕ್ಟ್ರಿಕಲ್‌ ಆಂಡ್‌ ಮೆಕಾನಿಕಲ್‌ ಎಂಜಿನಿಯರ್‍ಸ್ ಸೇರಿದಂತೆ ಸೇನೆಯ ವಿವಿಧ ಶಸ್ತಾಸ್ತ್ರ ಮತ್ತು ಸೇವೆಗಳಲ್ಲಿರುವವರಿಗೆ ಬಡ್ತಿ ಪ್ರಕ್ರಿಯೆ ನಡೆಯುತ್ತಿದೆ. ಮೂರು ಹಂತದಲ್ಲಿ ಬಡ್ತಿ ಅವಕಾಶವಿದ್ದು, ಶೀಘ್ರ ಬಡ್ತಿ ಪಡೆದವರಿಗೆ ಮಾಹಿತಿ ನೀಡಲಾಗುತ್ತದೆ. 80 ಅಧಿಕಾರಿಗಳಿಗೆ ಈಗಾಗಲೇ ಬಡ್ತಿ ನೀಡಲಾಗಿದೆ ಎಂದು ಸೇನೆ ತಿಳಿಸಿರುವುದಾಗಿ ವರದಿಯಾಗಿದೆ.

ಆಯ್ಕೆ ಮಂಡಳಿ ಫಿಟ್ ಎಂದು ಘೋಷಿಸಲ್ಪಟ್ಟ ಬಳಿಕ ಮಹಿಳಾ ಅಧಿಕಾರಿಗಳನ್ನು ಕಮಾಂಡ್ ಅಸೈನ್‌ಮೆಂಟ್‌ಗಳಲ್ಲಿ ನಿಯೋಜನೆ ಮಾಡಲಾಗುತ್ತದೆ.

ಉಡುಪಿ ರಜತಮಹೋತ್ಸವ : ಮಲ್ಪೆ ಕಡಲ ಕಿನಾರೆಯಲ್ಲಿ ಸಮಾರಂಭ – Vishwanews24

Vishwa News 24

Recent Posts

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

5 minutes ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

22 minutes ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

37 minutes ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

42 minutes ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

56 minutes ago

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

1 day ago