ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪನವರ ಪಕ್ಷದಲ್ಲೇ ಹಲವು ಗೊಂದಲಗಳಿವೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದ್ದಾರೆ.
ಉತ್ತರಾಂಚಲ, ಛತ್ತೀಸ್ ಗಡ, ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ಇದೆ. ರಾಜ್ಯದಲ್ಲೂ ಅನೇಕ ಸಾವು-ನೋವು ಸಂಭವಿಸಿವೆ. ಸಿಎಂ ಯಡಿಯೂರಪ್ಪ, ನಿಯೋಗ ಕರೆದೊಯ್ದು ಅನುದಾನ ತರುವುದಾಗಿ ಹೇಳಿದ್ದಾರೆ. ಮೊದಲ ಬಾರಿಗೆ ಮೂವರು ಡಿಸಿಎಂ ಮಾಡಿದ್ದಾರೆ. ಯಾವ ಆಧಾರದಲ್ಲಿ ಮಾಡಿದ್ದಾರೆಂಬುದು ಗೊತ್ತಿಲ್ಲ. ಅವರ ಪಕ್ಷದಲ್ಲೇ ಹಲವು ಗೊಂದಲಗಳಿವೆ ಎಂದು ಟೀಕಿಸಿದರು.
ಈಗಾಗಲೇ ಲಭಿಸಿರುವ ಮಾಹಿತಿ ಅನ್ವಯ ಹಲವು ಸರ್ಕಾರಿ ಇಲಾಖೆಗಳ ನೌಕರರಿಗೆ ಸಂಬಳ ಆಗಿಲ್ಲ. ಸರ್ಕಾರಿ ಸ್ವಾಮ್ಯದ ಹಲವು ಸಂಸ್ಥೆಗಳನ್ನು ಖಾಸಗೀಕರಣ ಮಾಡುತ್ತಿದ್ದಾರೆ. ಆರ್ಥಿಕ ಸಂಕಷ್ಟದಿಂದಾಗಿ ಹಲವರು ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ. ಚುನಾವಣೆ ಬಳಿಕ 6 ಲಕ್ಷ ಜನ ಉದ್ಯೋಗ ಕಳೆದುಕೊಂಡಿದ್ದಾರೆ. ಪೀಣ್ಯಾ ಕೈಗಾರಿಕಾ ಪ್ರದೇಶದಲ್ಲಿ ಯಾವ ಪರಿಸ್ಥಿತಿ ನಿರ್ಮಾಣ ಆಗುತ್ತಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಇನ್ನೂ ಹಲವು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗಿಗೆ ಕೊಡುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಎದುರಾಗಿದ್ದು, ಇದಕ್ಕೆ ಕೇಂದ್ರ ಸರ್ಕಾರ ಅರ್’ಬಿಐನಿಂದ ದೊಡ್ಡ ಪ್ರಮಾಣದ ಹಣ ಪಡೆದಿರುವುದೇ ಸಾಕ್ಷಿ. ಭಾರತೀಯ ರಿಸರ್ವ್ ಬ್ಯಾಂಕಿನಿಂದ ದೊಡ್ಡ ಪ್ರಮಾಣದ ಹಣ ತೆಗೆದುಕೊಂಡಿದ್ದಾರೆ. ಕೇಂದ್ರ ಸರ್ಕಾರ ಹಿಂದೆಂದೂ ಈ ಪ್ರಮಾಣದಲ್ಲಿ ಹಣ ತೆಗೆದುಕೊಂಡಿರಲಿಲ್ಲ ಎಂದು ದೂರಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…