Featured

ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ ಅಧಿಕೃತವಾಗಿ ಸೇರ್ಪಡೆ – vishwanews24

ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ..

ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ ಅಧಿಕೃತವಾಗಿ ಸೇರ್ಪಡೆ

ನವದೆಹಲಿ: ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ ನಡೆದಿದೆ. ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ತನ್ನ 9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ 1975ರ ರಾಷ್ಟ್ರೀಯ ತುರ್ತು ಪರಿಸ್ಥಿತಿ  ಕುರಿತಾದ ಪ್ರತ್ಯೇಕ ಅಧ್ಯಾಯವನ್ನು ಮೊದಲ ಬಾರಿಗೆ ಅಧಿಕೃತವಾಗಿ ಸೇರ್ಪಡೆಗೊಳಿಸಿದೆ.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (NEP 2020) ಅಡಿಯಲ್ಲಿ ಇಡೀ ದೇಶಾದ್ಯಂತ ಪರಿಷ್ಕರಿಸಲಾದ ಹೊಸ ಪಠ್ಯಪುಸ್ತಕಗಳು ಜಾರಿಗೆ ಬರುತ್ತಿದ್ದು, ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ (2026-27) ವಿದ್ಯಾರ್ಥಿಗಳು ಇದನ್ನು ಓದಲಿದ್ದಾರೆ.

ಇದನ್ನೂ ಓದಿ:

ಹೊಸ ಪಠ್ಯದಲ್ಲಿ ಏನಿದೆ?
9ನೇ ತರಗತಿಯ ಪ್ರಜಾಪ್ರಭುತ್ವ ರಾಜಕೀಯ 1  ಪಠ್ಯಪುಸ್ತಕದ 5ನೇ ಅಧ್ಯಾಯದಲ್ಲಿ ತುರ್ತು ಪರಿಸ್ಥಿತಿಯನ್ನು “ಪ್ರಜಾಪ್ರಭುತ್ವಕ್ಕೆ ಎದುರಾದ ಸವಾಲು” ಎಂದು ವ್ಯಾಖ್ಯಾನಿಸಲಾಗಿದೆ. 1975 ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ಜಾರಿಗೊಳಿಸಿದ 21 ತಿಂಗಳುಗಳ ತುರ್ತು ಪರಿಸ್ಥಿತಿಯ ಅವಧಿಯಲ್ಲಿ ನಾಗರಿಕರ ವಾಕ್ ಸ್ವಾತಂತ್ರ್ಯ ಮತ್ತು ಮೂಲಭೂತ ಹಕ್ಕುಗಳನ್ನು ಹೇಗೆ ಕಸಿದುಕೊಳ್ಳಲಾಯಿತು ಎಂಬುದನ್ನು ವಿವರಿಸಲಾಗಿದೆ.

ಪತ್ರಿಕೋದ್ಯಮದ ಕತ್ತು ಹಿಸುಕಿ, ಮಾಧ್ಯಮಗಳ ಮೇಲೆ ಅಂದಿನ ಸರ್ಕಾರ ಹೇರಿದ್ದ ಕಠಿಣ ‘ಸೆನ್ಸಾರ್‌ಶಿಪ್’ ಹಾಗೂ ವಿರೋಧ ಪಕ್ಷದ ನಾಯಕರ ಸರಣಿ ಬಂಧನಗಳ ಇತಿಹಾಸವನ್ನು ತಿಳಿಸಲಾಗಿದೆ. ಈ ಕಪ್ಪು ಅವಧಿಯಲ್ಲಿ ಸರ್ಕಾರದ ಕಾರ್ಯಾಂಗ ಮತ್ತು ನ್ಯಾಯಾಂಗದ ನಡುವೆ ಉಂಟಾದ ಸಂಘರ್ಷಗಳು ಹಾಗೂ ಗರಿಷ್ಠ ಮಟ್ಟದ ಅಧಿಕಾರ ದುರ್ಬಳಕೆಯ ಒಟ್ಟಾರೆ ಚಿತ್ರಣವನ್ನು ವಿದ್ಯಾರ್ಥಿಗಳಿಗೆ ಕಣ್ಣಿಗೆ ಕಟ್ಟುವಂತೆ ಪರಿಚಯಿಸಲಾಗಿದೆ.

ಇದನ್ನೂ ಓದಿ:

ಇಲ್ಲಿಯವರೆಗೆ ‘ತುರ್ತು ಪರಿಸ್ಥಿತಿ’ಯ ಇತಿಹಾಸ ಮತ್ತು ಅದರ ರಾಜಕೀಯ ಪರಿಣಾಮಗಳ ಕುರಿತಾದ ಅಧ್ಯಾಯಗಳು ಕೇವಲ 12ನೇ ತರಗತಿಯ ರಾಜಕೀಯ ವಿಜ್ಞಾನ  ಪಠ್ಯಪುಸ್ತಕದಲ್ಲಿ ಮಾತ್ರ ಇರುತ್ತಿದ್ದವು.

ಪ್ರಜಾಪ್ರಭುತ್ವದ ಮೌಲ್ಯಗಳು, ಸಂವಿಧಾನದ ಮಹತ್ವ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗೆ ಬರಬಹುದಾದ ಆಪತ್ತುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಚಿಕ್ಕ ವಯಸ್ಸಿನಲ್ಲೇ (ಹೈಸ್ಕೂಲ್ ಹಂತದಲ್ಲೇ) ರಾಜಕೀಯ ಪ್ರಜ್ಞೆ ಮೂಡಿಸುವುದು ಅತ್ಯಗತ್ಯ. ಇದೇ ಕಾರಣಕ್ಕೆ ಇದನ್ನು 9ನೇ ತರಗತಿಯ ಪಠ್ಯಕ್ರಮಕ್ಕೆ ತರಲಾಗಿದೆ.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

20 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

21 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

21 hours ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

24 hours ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

24 hours ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago