ನಟಿ ಸಮಂತಾ ರುತ್ ಪ್ರಭು ತಾವು ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಮಾ ಇಂಟಿ ಬಂಗಾರಂ ಚಿತ್ರದ ಯಶಸ್ಸಿನ ಕಾರ್ಯಕ್ರಮದಲ್ಲಿ ಈ ಸಂತಸದ ಸುದ್ದಿಯನ್ನು ಹಂಚಿಕೊಂಡಿದ್ದಾರೆ.
ತೆಲುಗು ಚಿತ್ರರಂಗದ ಜನಪ್ರಿಯ ನಟಿ ಸಮಂತಾ ರುತ್ ಪ್ರಭು ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ತಾವು ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಬಹಿರಂಗಪಡಿಸಿ, ಗರ್ಭಧಾರಣೆ ಕುರಿತ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಇದನ್ನೂ ಓದಿ:
ಮಾ ಇಂಟಿ ಬಂಗಾರಂ ಚಿತ್ರದ ಯಶಸ್ಸಿನ ಸಮಾರಂಭದಲ್ಲಿ ಮಾತನಾಡಿದ ಸಮಂತಾ, ಸದ್ಯದ ಕೆಲಸಗಳನ್ನು ಪೂರ್ಣಗೊಳಿಸಿದ ಬಳಿಕ ಸ್ವಲ್ಪ ವಿರಾಮ ಪಡೆಯುವುದಾಗಿ ತಿಳಿಸಿದರು. ಮಾ ಇಂಟಿ ಬಂಗಾರಂ ಚಿತ್ರದ ಬಳಿಕ ನನ್ನ ಆರೋಗ್ಯದ ಕಾರಣದಿಂದ ಸ್ವಲ್ಪ ಬ್ರೇಕ್ ತೆಗೆದುಕೊಳ್ಳಬೇಕಿದೆ. ನನ್ನ ಮತ್ತು ಮಗುವಿನ ಆರೈಕೆ ತೆಗೆದುಕೊಳ್ಳಬೇಕು. ನಂತರ ಮತ್ತೆ ಅಭಿಮಾನಿಗಳಿಗಾಗಿ ಹೊಸ ಚಿತ್ರದೊಂದಿಗೆ ವಾಪಸ್ ಬರುತ್ತೇನೆ ಎಂದು ಸಮಂತಾ ಹೇಳಿದ್ದಾರೆ.
ಕಳೆದ ಕೆಲವು ದಿನಗಳಿಂದ ಸಮಂತಾ ಗರ್ಭಿಣಿ ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿತ್ತು. ಮಾ ಇಂಟಿ ಬಂಗಾರಂ ಚಿತ್ರದ ಯಶಸ್ಸಿನ ಸಂಭ್ರಮದ ವೇಳೆ ಹಂಚಿಕೊಂಡಿದ್ದ ಕೆಲವು ವಿಡಿಯೋಗಳು ಈ ಚರ್ಚೆಗೆ ಕಾರಣವಾಗಿದ್ದವು.
ಇದನ್ನೂ ಓದಿ:
ಸಮಂತಾ ಮತ್ತು ರಾಜ್ ನಿಡಿಮೋರು 2025ರ ಡಿಸೆಂಬರ್ 1ರಂದು ಕೊಯಮತ್ತೂರಿನ ಈಶಾ ಫೌಂಡೇಶನ್‌ನಲ್ಲಿ ಆತ್ಮೀಯರ ಸಮ್ಮುಖದಲ್ಲಿ ವಿವಾಹವಾಗಿದ್ದರು. ಮದುವೆಯ ಫೋಟೋಗಳನ್ನು ಕೂಡ ಸಮಂತಾ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇವರಿಬ್ಬರ ಸ್ನೇಹ ದಿ ಫ್ಯಾಮಿಲಿ ಮ್ಯಾನ್ 2 ವೆಬ್ ಸಿರೀಸ್ ವೇಳೆ ಆರಂಭವಾಗಿತ್ತು. ಬಳಿಕ ಹಲವು ಬಾರಿ ಒಟ್ಟಿಗೆ ಕಾಣಿಸಿಕೊಂಡಿದ್ದ ಈ ಜೋಡಿ, ಇತ್ತೀಚೆಗೆ ಮಾ ಇಂಟಿ ಬಂಗಾರಂ ಚಿತ್ರದಲ್ಲೂ ಜೊತೆಯಾಗಿ ಕೆಲಸ ಮಾಡಿದ್ದರು
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…