ಬೆಂಗಳೂರು : ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಮೊದಲ ಪತ್ರಿಕಾಗೋಷ್ಟಿಯಲ್ಲಿ ಹಲವು ಮಹತ್ವದ ಘೋಷಣೆ ಮಾಡಿದ್ದು ರಾಜ್ಯದಲ್ಲಿ ದಕ್ಷ, ಪ್ರಮಾಣಿಕ, ಕಟ್ಟಕಡೆಯ ಸಮಾಜದ ಪರ ಸರ್ಕಾರ ಇರಬೇಕು ಎಂದು ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಪೂರ್ಣಪ್ರಮಾಣದಲ್ಲಿ ಸಚಿವ ಸಂಪುಟ ರಚನೆಯಾಗಿಲ್ಲ, ನಾನೊಬ್ಬನೇ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದೇನೆ. ಆದರೂ ಆಡಳಿತದಲ್ಲಿ ಯಾವುದೇ ಕೆಲಸಗಳು ನಿಲ್ಲುವುದಿಲ್ಲ.ಇಂದು ಅಧಿಕಾರಿಗಳ ಜೊತೆಗೆ ಸಭೆ ಮಾಡಿದ್ದೇನೆ. ಸಭೆಯಲ್ಲಿ ಸರ್ಕಾರದ ದಿಕ್ಸೂಚಿ ಬಗ್ಗೆ ಹೇಳಿದ್ದೇನೆ. ಟೀಂ ಆಗಿ ವರ್ಕ್ ಮಾಡಬೇಕು ಎಂದು ಸೂಚಿಸಿದ್ದೇನೆ ಎಂದರು.
ಇದೇ ವೇಳೆ ರೈತರ ಮಕ್ಕಳು ವಿದ್ಯೆಯಿಂದ ವಂಚಿತರಾಗದಂತೆ ನೋಡಿಕೊಳ್ಳಲು ಹೊಸ ಶಿಷ್ಯ ವೇತನ ಜಾರಿಗೆ ತರಲು ₹೧೦೦೦ ಕೋಟಿ ಅನುದಾನ ಮೀಸಲಿಸಿದ್ದು ರೈತರ ಮಕ್ಕಳಿಗೆ ಹೊಸ ಶಿಷ್ಯ ವೇತನ ಜಾರಿ ಮಾಡಲಾಗುವುದು ಎಂದರು.
ಇದರೊಂದಿಗೆ ವಿಧವಾ ವೇತನವನ್ನು 600 ರೂ.ನಿಂದ 800 ರೂ. ಕ್ಕೆ ಹೆಚ್ಚಿಸಲಾಗಿದೆ. ವಿಶೇಷ ಚೇತನರಿಗೆ ವೇತನ 600 ರೂ.ನಿಂದ 800 ರೂ. ಹೆಚ್ಚಳ, ಸಂದ್ಯ ಸುರಕ್ಷಾ ಯೋಜನೆ ಫಲಾನುಭವಿಗಳಿಗೆ 1000 ರೂನಿಂದ 1,200 ರೂ.ಗೆ ಹೆಚ್ಚಳ ಮಾಡಲಾಗಿದೆ ಎಂದು ಘೋಷಿಸಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…