ಬೆಂಗಳೂರು: ಹಾಲಿನ ದರ ಏರಿಕೆ ಬೆನ್ನಲ್ಲೇ ಮೊಸರಿನ ಬೆಲೆಯೂ ಲೀಟರ್‌ಗೆ 14 ರೂ. ಹೆಚ್ಚಳ ಮಾಡಲಾಗಿದ್ದು, ನವೆಂಬರ್ 1ರಿಂದಲೇ ಈ ಪರಿಷ್ಕೃತ ದರ ಜಾರಿಗೆ ಬರಲಿದೆ ಎಂದು ಕರ್ನಾಟಕ ಹಾಲು ಮಹಾಮಂಡಳಿ(ಕೆಎಂಎಫ್) ಶುಕ್ರವಾರ ಆದೇಶ ಹೊರಡಿಸಿದೆ.
ಅರ್ಧ ಲೀಟರ್ ಮೊಸರಿನ ದರವನ್ನ 28 ರೂ. ನಿಂದ 34 ರೂ.ಗೆ ಹಾಗೂ 1 ಲೀಟರ್ ಮೊಸರಿನ ದರವನ್ನು 54 ರೂ. ನಿಂದ 68 ರೂ.ಗೆ ಹೆಚ್ಚಿಸಲಾಗಿದೆ. ರಾಜ್ಯ ಸಚಿವ ಸಂಪುಟ ಸಭೆಯ ನಿರ್ಧಾರದಂತೆ ನಂದಿನಿ ಹಾಲು ಮತ್ತು ಮೊಸರಿನ ದರವನ್ನು ಏರಿಕೆ ಮಾಡಲಾಗಿದೆ ಎಂದು ಕೆಎಂಎಫ್ ಆದೇಶಿಸಿದೆ.
ಕರ್ನಾಟಕ ಹಾಲು ಮಹಾಮಂಡಳಿಯು (ಕೆಎಂಎಫ್) ಕಳೆದ 5 ದಶಕಗಳಿಂದ ‘ರೈತರಿಂದ, ರೈತರಿಗಾಗಿ ಮತ್ತು ರೈತರಿಗೋಸ್ಕರ’ ಎಂಬ ಸಹಕಾರ ತತ್ವದಡಿ ಕಾರ್ಯನಿರ್ವಹಿಸುತ್ತಿದೆ. ರಾಜ್ಯದ ಲಕ್ಷಾಂತರ ಹೈನುಗಾರ ರೈತರ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಪ್ರಸ್ತುತ ರಾಜ್ಯದಲ್ಲಿ ಸುಮಾರು 26.89 ಲಕ್ಷ ಹೈನುಗಾರ ರೈತ ಸದಸ್ಯರಿದ್ದು, ಸುಮಾರು 8.9 ಲಕ್ಷ ರೈತರು ಪ್ರತಿದಿನ ಹಾಲನ್ನು ಸಹಕಾರ ಸಂಘಗಳಿಗೆ ಪೂರೈಸುತ್ತಿದ್ದಾರೆ. ಹಾಲು ಉತ್ಪಾದಕರಿಗೆ ಪ್ರತಿದಿನ ಸರಾಸರಿ 28.60 ಕೋಟಿ ರೂ. ಪಾವತಿಸಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ವರ್ಷ ಸಕಾಲದಲ್ಲಿ ಉತ್ತಮ ಮಳೆಯಾಗದ ಕಾರಣ ನೀರು ಮತ್ತು ಮೇವು ಕೊರತೆ ಉಂಟಾಗಿದ್ದು, ಬರದ ಪರಿಸ್ಥಿತಿ ಎದುರಾಗಿದೆ. ಹಾಲು ಉತ್ಪಾದಕ ರೈತರು ಪಶುಗಳ ನಿರ್ವಹಣೆ, ಔಷಧೋಪಚಾರ ಮತ್ತು ಮೇವು ಪೂರೈಕೆಗೆ ಹೆಚ್ಚಿನ ವೆಚ್ಚವಾಗುತ್ತಿದ್ದು, ಹೈನುಗಾರಿಗೆ ಮುಂದುವರಿಸುವುದು ಕಷ್ಟಕರವಾಗುತ್ತಿದೆ. ಹೀಗಾಗಿ ತುರ್ತಾಗಿ ಹಾಲು ಖರೀದಿ ದರವನ್ನ ಪ್ರತಿ ಲೀಟರ್‌ಗೆ ಕನಿಷ್ಠ 10 ರಿಂದ 12 ರೂ. ಹೆಚ್ಚಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ, ಹಾಲು ಉತ್ಪಾದಕ ರೈತರ ಹಿತಾಸಕ್ತಿಯನ್ನು ಪರಿಗಣಿಸಿ ಸೂಕ್ತ ಪ್ರೋತ್ಸಾಹ ನೀಡುವ ಹಾಗೂ ಹೈನುಗಾರಿಕೆ ಕ್ಷೇತ್ರವನ್ನು ಸುಸ್ಥಿರವಾಗಿ ಬೆಳೆಸುವ ಉದ್ದೇಶದಿಂದ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ‘ನಂದಿನಿ’ ಟೋನ್ಡ್ ಹಾಲಿನ ದರ ಪ್ರತಿ ಲೀಟರ್‌ಗೆ 8 ರೂ. ನಂತೆ ದರ ಪರಿಷ್ಕರಣೆಗೆ ಮತ್ತು ಪರಿಷ್ಕರಣೆಯಾದ ಮೊತ್ತದಲ್ಲಿ 7 ರೂ. ಹಾಲು ಉತ್ಪಾದಕರಿಗೆ ವರ್ಗಾಹಿಸುವಂತೆ ಕೆಎಂಎಫ್ ನಿರ್ದೇಶಿಸಿದೆ.
ಇದರ ಜೊತೆಗೆ ನ.1 ರಿಂದ ಜಾರಿಗೆ ಬರುವಂತೆ ಜಿಡ್ಡಿನಾಂಶ (ಫ್ಯಾಟ್) ಪ್ರಮಾಣದ ಆಧಾರದ ಮೇಲೆ ‘ನಂದಿನಿ’ಯ ಎಲ್ಲಾ ಮಾದರಿಯ ಹಾಲು ಮತ್ತು ಮೊಸರಿನ ಮಾರಾಟ ದರಗಳನ್ನೂ ಪರಿಷ್ಕರಿಸಲಾಗಿದೆ.
ರಾ.ಹೆ. ಸಮಸ್ಯೆ ಬಗೆಹರಿಸದಿದ್ದಲ್ಲಿ ಟೋಲ್ ಕಟ್ಟದಂತೆ ಜಿಲ್ಲೆಯ ಜನರಿಗೆ ಕರೆ : ಸಂಸದ ಕೋಟ ಎಚ್ಚರಿಕೆ ಮಣಿಪಾಲ: ರಾಷ್ಟ್ರೀಯ ಹೆದ್ದಾರಿಯಲ್ಲಿ…
ಶಿರ್ವ: ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ನೂತನ ಧ್ವಜಮರ ಸಮರ್ಪಣೆ ಶಿರ್ವ: ಕುತ್ಯಾರು- ಪಾದೂರು-ಕಳತ್ತೂರು ಗ್ರಾಮಾಧಿಪತಿ ಕಳತ್ತೂರು ಶ್ರೀ ಮಹಾಲಿಂಗೇಶ್ವರ…
ಕುಂದಾಪುರ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಸ್ಕೂಟರ್‌ಗೆ ಡಿಕ್ಕಿ; ಇಬ್ಬರಿಗೆ ಗಾಯ, ಮೂವರ ಬಂಧನ ಕುಂದಾಪುರ: ಅತಿವೇಗ ಮತ್ತು ನಿರ್ಲಕ್ಷ್ಯದ…
ಉಡುಪಿ: ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ಯುವಕ ಆತ್ಮಹತ್ಯೆ ಉಡುಪಿ : ಉಡುಪಿ ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅ.30…
ಉಡುಪಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ವಹಿಸಿ : ಕೋಟ ಶ್ರೀನಿವಾಸ ಪೂಜಾರಿ ಉಡುಪಿ…
ಮಂಗಳೂರು: ಕಂಬಳದಲ್ಲಿ ಗೆದ್ದ ಚಿನ್ನದ ಪದಕ ಅನಾರೋಗ್ಯಪೀಡಿತ ಮಾಜಿ ಕಾರ್ಮಿಕನಿಗೆ ಉಡುಗೊರೆ: ಪದವು ಕಾನಡ್ಕ ತಂಡದ ಮಾನವೀಯ ಕಾರ್ಯಕ್ಕೆ ಮೆಚ್ಚುಗೆ…