ನವದೆಹಲಿ: ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ಉದ್ದೇಶದ ಮೋಟಾರು ವಾಹನ (ತಿದ್ದುಪಡಿ) ಮಸೂದೆ 2019ಕ್ಕೆ ಸಂಸತ್ತು ಬುಧವಾರ ಅನುಮೋದನೆ ನೀಡಿದೆ. ಸಂಚಾರ ನಿಯಮ ಉಲ್ಲಂಘನೆಗೆ ಭಾರಿ ದಂಡ ಮತ್ತು ತಂತ್ರಜ್ಞಾನ ಅಳವಡಿಕೆ ಮೂಲಕ ಭ್ರಷ್ಟಾಚಾರ ತಡೆ ಈ ಮಸೂದೆಯ ಗುರಿ.
ಸೀಟ್ ಬೆಲ್ಟ್, ಹೆಲ್ಮೆಟ್ ಇಲ್ಲ ಅಂದ್ರೆ ಬೀಳತ್ತೆ ₹1,000 ದಂಡ 3 ತಿಂಗಳವರೆಗೆ ಚಾಲನ ಪರವಾನಗಿ ರದ್ದು ಮಾಡುವಂತಹ, ಕುಡಿದು ವಾಹನ ಚಲಾಯಿಸಿದರೆ 6 ತಿಂಗಳ ಜೈಲು ಶಿಕ್ಷೆ ನೀಡುವ ಪ್ರಸ್ತಾವಗಳನ್ನು ತಿದ್ದುಪಡಿ ಮಸೂದೆ ಹೊಂದಿದೆ.
ಮಸೂದೆಗೆ ಲೋಕಸಭೆಯು ಕಳೆದ ವಾರ ಒಪ್ಪಿಗೆ ಕೊಟ್ಟಿತ್ತು. ರಾಜ್ಯಸಭೆಯಲ್ಲಿ ಮಸೂದೆ ಪರ 108 ಮತ್ತು ವಿರುದ್ಧ 13 ಮತಗಳು ಚಲಾವಣೆಯಾದವು.
ತೆರಿಗೆ ಸಂಗ್ರಹದ ವಿಚಾರದಲ್ಲಿ ರಾಜ್ಯಗಳ ಅಧಿಕಾರವನ್ನು ಈ ಮಸೂದೆಯು ಕಸಿದುಕೊಳ್ಳುತ್ತದೆ. ಹಾಗಾಗಿ, ಮಸೂದೆಯ ವಿವರವಾದ ಪರಿಶೀಲನೆ ಅಗತ್ಯ. ಹಾಗೆಯೇ, ಮಸೂದೆಯು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧಿಕಾರಗಳನ್ನು ಖಾಸಗಿ ಕಂಪನಿಗಳಿಗೆ ನೀಡುತ್ತದೆ ಎಂದು ವಿರೋಧ ಪಕ್ಷಗಳು ಪ್ರತಿಪಾದಿಸಿದವು. ಆದರೆ, ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಈ ಅಂಶಗಳನ್ನು ಅಲ್ಲಗಳೆದರು. ರಾಜ್ಯಗಳ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದರು.
ಮಸೂದೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದೆ. ಹಾಗಾಗಿ ಮಸೂದೆಗೆ ಲೋಕಸಭೆಯಲ್ಲಿ ಮತ್ತೊಮ್ಮೆ ಅನುಮತಿ ಪಡೆದುಕೊಳ್ಳಬೇಕಾಗಿದೆ.
ಪ್ರಸ್ತಾವಿತ ಸಂಚಾರ ನಿಯಮಗಳ ಉಲ್ಲಂಘನೆ ವಿಧಿಸಲಾಗುವ ದಂಡಗಳು
ತುರ್ತು ವಾಹನಗಳಿಗೆ ದಾರಿ ಬಿಡದಿದ್ದರೆ ₹ 10,000, 6 ತಿಂಗಳು ಜೈಲು
ಅತಿ ವೇಗದ ಚಾಲನೆ ₹ 1000- ₹ 2000, 3 ತಿಂಗಳು ಜೈಲು
ವಿಮೆ ಇಲ್ಲದ ಡ್ರೈವಿಂಗ್ ₹ 2000
ಹೆಲ್ಮೆಟ್ ಧರಿಸದೆ ಡ್ರೈವಿಂಗ್ ₹1000
ಬಾಲಪರಾಧಿಗಳ ರಸ್ತೆ ಅಪರಾಧ ಪ್ರಕರಣ ₹ 25,000
ಲೈಸೆನ್ಸ್ ಇಲ್ಲದೆ ಅನಧಿಕೃತ ವಾಹನ ಚಾಲನೆ ₹ 5000
ಕುಡಿದು ವಾಹನ ಚಾಲನೆ ₹ 10,000, 6 ತಿಂಗಳು ಜೈಲು
ಸಿಗ್ನಲ್ ಜಂಪ್, ಚಾಲನೆ ವೇಳೆ ಮೊಬೈಲ್ ಬಳಕೆ, ₹ 5000, 6 -12 ತಿಂಗಳು ಜೈಲು
ಇತ್ಯಾದಿ
ಲೋಕಸಭೆಯಲ್ಲಿ ಅಂಗೀಕಾರ ಆಗಿರುವ ಮಸೂದೆಗೆ ಕೆಲವು ಬದಲಾವಣೆ ಮಾಡಿ ರಾಜ್ಯಸಭೆಯಲ್ಲಿ ಮಂಡಿಸಲಾಗಿದೆ ಎಂದು ಕಾಂಗ್ರೆಸ್‌ನ ಬಿ.ಕೆ. ಹರಿಪ್ರಸಾದ್ ಆಕ್ಷೇಪ ವ್ಯಕ್ತಪಡಿಸಿದರು. ಲೋಕಸಭೆಯಲ್ಲಿ ಅಂಗೀಕಾರ ಆದ ಅದೇ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಲಾಗಿದೆ ಎಂದು ಗಡ್ಕರಿ ಆರಂಭದಲ್ಲಿ ಪ್ರತಿಪಾದಿಸಿದರು. ಲೋಕಸಭೆಯಲ್ಲಿ ಮಂಡಿಸಲಾದ ಮಸೂದೆಯಲ್ಲಿ ಕೆಲವು ಮುದ್ರಣ ದೋಷಗಳಿದ್ದವು. ಹಾಗಾಗಿ ಅವುಗಳಿಗೆ ತಿದ್ದುಪಡಿ ಮಾಡಲಾಗಿದೆ ಎಂದು ಬಳಿಕ ಹೇಳಿದರು. ಮಸೂದೆಗೆ ಕಾಂಗ್ರೆಸ್ ಬೆಂಬಲ ಕೊಟ್ಟಿತು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…