ಮೋದಿಗೆ ಸೋಲಿನ ಭಯ ಕಾಡುತ್ತಿದೆ : ಗುಂಡೂರಾವ್

Featured, ರಾಜ್ಯ ನ್ಯೂಸ್

ಬೆಂಗಳೂರು : ದೇಶದಲ್ಲಿ ಮೋದಿಯವರಂತಹ ಭ್ರಷ್ಟ ಪ್ರಧಾನಿಯನ್ನು ನೋಡಿಲ್ಲ, ಅವರಿಗೆ ಸೋಲಿನ ಭಯ ಕಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಾಗ್ಧಾಳಿ ನಡೆಸಿದ್ದಾರೆ.

ಸಂಕ್ರಾಂತಿ ಬಳಿಕ ಮೈತ್ರಿ ಸರ್ಕಾರವನ್ನು ಬಿಜೆಪಿ ಉರುಳಿಸಲಿದೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ‘ ಬಿಜೆಪಿಯವರು ಮೊದಲಿನಿಂದಲೂ ಡೆಡ್ ಲೈನ್ ಕೊಡುತ್ತಲೇ ಬಂದಿದ್ದಾರೆ. ಹಿಂದಿನ ಬಾಗಿಲಿನ ಮೂಲಕ ಸರ್ಕಾರ ರಚಿಸಲು ಪ್ರಯತ್ನಿಸಿದ್ದಾರೆ. ಹಿಂಬಾಗಿಲ ಮೂಲಕ ಸರ್ಕಾರ ರಚಿಸಲು ನಿರಂತರ ಪ್ರಯತ್ನಿಸ್ತಿದ್ದಾರೆ. ಅದನ್ನು ಬಿಟ್ಟು ಅವರು ಗೌರವಯುತ ವಿರೋಧಪಕ್ಷವಾಗಿ ಕೆಲಸ ಮಾಡುವುದು ಒಳ್ಳೆಯದು ಎಂದು ಹೇಳಿದರು.

‘ಮೈತ್ರಿ ಸರ್ಕಾರದಲ್ಲಿ ಏನೇ ಭಿನ್ನಾಭಿಪ್ರಾಯ ಇದ್ದರೂ ಕುಳಿತು ಮಾತನಾಡಬೇಕು, ನಮ್ಮ ಪಕ್ಷದವರಾಗಲಿ ಯಾರೇ ಆಗಲಿ ಬಹಿರಂಗವಾಗಿ ಮಾತನಾಡುವುದು ತಪ್ಪು ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.