ಬಂಟ್ವಾಳ,: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಿರುಗಾಳಿ ಇದ್ದಂತೆ. ತನ್ನ ಸರ್ವಸ್ವವನ್ನೂ ತ್ಯಾಗ ಮಾಡಿ ದೇಶಕ್ಕಾಗಿ ದುಡಿಯುತ್ತಿದ್ದಾರೆ. ನನ್ನ ಸಹೋದರನಷ್ಟೇ ಅಲ್ಲ, ಅವರು ಇಡೀ ದೇಶದ ಆಸ್ತಿ ಎಂದು ಪ್ರಧಾನಿ ಸಹೋದರ ಸೋಮಾಭಾಯಿ ದಾಮೋದರದಾಸ್ ಮೋದಿ ಹೇಳಿದ್ದಾರೆ.
ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಮಂಗಳವಾರ ಭೇಟಿ ನೀಡಿ ಶೈಕ್ಷಣಿಕ ಚಟುವಟಿಕೆಗಳನ್ನು ವೀಕ್ಷಿಸಿ, ವಿದ್ಯಾಸಂಸ್ಥೆಯ ಕಾರ್ಯಗಳನ್ನು ಶ್ಲಾಘಿಸಿದರು. ಬಳಿಕ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಸಂದರ್ಭ ಪ್ರಧಾನಿಯಾಗಿರುವ ನರೇಂದ್ರ ಮೋದಿ ಜೊತೆಗಿನ ಒಡನಾಟವನ್ನು ಸ್ಮರಿಸಿಕೊಂಡರು. ಅಂಥಹ ಸಹೋದರನನ್ನು ಪಡೆದ ನಾನು ಧನ್ಯನಾಗಿದ್ದು, ದೇಶವನ್ನು ಎತ್ತರಕ್ಕೇರಿಸುವ ಕಾರ್ಯವನ್ನು ನಡೆಸುತ್ತಿದ್ದಾರೆ ಎಂದರು.
ಇನ್ನು ಈ ನಡುವೆ ಶಾಲೆಯ ಶಿಕ್ಷಕ ವೃಂದದ ಕಾರ್ಯವನ್ನು ಶ್ಲಾಘಿಸಿದ ಅವರು, ವಿದ್ಯಾರ್ಥಿಗಳು ಉನ್ನತ ಸಾಧನೆ ಮಾಡಿ ಪ್ರಧಾನಿಯೊಂದಿಗೆ ಭೇಟಿಯಾಗುವ ಅವಕಾಶವನ್ನು ಪಡೆಯಿರಿ ಎಂದು ಕಿವಿಮಾತು ಹೇಳಿದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…