Featured

ಮೋದಿಯನ್ನು ಸೋಲಿಸಿದರೆ ಅದು ಮೂರ್ಖತನ: ಸಾಹಿತಿ ಎಸ್.‌ಎಲ್. ಭೈರಪ್ಪ

ಮೈಸೂರು: ಕಳೆದ ನಾಲ್ಕು ವರ್ಷದಲ್ಲಿ ಭಾರತವನ್ನು ಪ್ರಧಾನಿ ನರೇಂದ್ರ ಮೋದಿ ಸಾಕಷ್ಟು ಅಭಿವೃದ್ಧಿ ‌ಮಾಡಿದ್ದಾರೆ. ಮುಂದಿನ ಭವಿಷ್ಯದ ಭಾರತವನ್ನು ಕಟ್ಟಲು ಶ್ರಮಿಸುತ್ತಿದ್ದಾರೆ ಎಂದು ಸಾಹಿತಿ ಎಸ್.‌ಎಲ್. ಭೈರಪ್ಪ ಹೇಳಿದ್ದಾರೆ.

ಆವರು  ಮೈಸೂರಿನ ಕುವೆಂಪುನಗರದ ತಮ್ಮ ನಿವಾಸದಲ್ಲಿ ಸಂಸದ ಪ್ರತಾಪ್‌ಸಿಂಹ ಅವರಿಂದ ಕೇಂದ್ರ ಸರಕಾರ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಮಾಡಿದ ಸಾಧನೆಗಳ ಪುಸ್ತಕ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಸಂಸದ ಪ್ರತಾಪ್‌ ಸಿಂಹ ಭೇಟಿ ವೇಳೆ ಮಾತನಾಡಿ, ಮೋದಿ ಒಂದು ಬಾರಿಯಲ್ಲ, ಮೂರು ಬಾರಿ ಗೆದ್ದರೆ ಮಾತ್ರ ಭಾರತಕ್ಕೆ ಉಳಿಗಾಲ. ಎರಡು ಮೂ‌ರು ಬಣಗಳು ಸೇರಿಕೊಂಡು ಮೋದಿ ಸೋಲಿಸಲು ಪಣ ತೊಟ್ಟಿವೆ. ಮೋದಿಯನ್ನು ಸೋಲಿಸಿದರೆ ಅದು ನಮ್ಮ ಮೂರ್ಖತನದ ಪರಮಾವಧಿ. ನಮ್ಮ‌ ಶತೃ ರಾಷ್ಟ್ರಗಳಾಗಿರುವ ನೆರೆಯ ಚೀನಾ‌ ಮತ್ತು ಪಾಕಿಸ್ತಾನ ಸುತ್ತಲಿನ ರಾಷ್ಟ್ರಗಳ ಪ್ರೀತಿ ವಿಶ್ವಾಸಗಳಿಸುವಲ್ಲೂ ಮೋದಿ ಯಶಸ್ವಿಯಾಗಿದ್ದಾರೆ ಎಂದರು. 

2023ರ ತನಕ ಮೋದಿ ಗೆಲ್ಲಬೇಕು, ಜನರು ಎಚ್ಚೆತ್ತುಕೊಳ್ಳಬೇಕು, ಮೋದಿಯನ್ನು ಸೋಲಿಸಬೇಕು ಅಂತ ಕೆಲವು ನಿರ್ಧಾರ ಮಾಡಿದ್ದಾರೆ.

ಈಗ ತಾನೇ ಮೋದಿ ಸರ್ಕಾರ ಟೇಕ್ ಆಫ್ ಆಗಿದೆ. ಅವರ ಕೆಲಸಗಳು ಸಾಕಷ್ಟು ಜನಪ್ರಿಯಗೊಳ್ಳುತ್ತಿವೆ ಅಂತ ಹೇಳಿದರು. ಭಾರತವನ್ನು ಉತ್ತಮವಾಗಿ ಅಭಿವೃದ್ಧಿ ಮಾಡಿದ್ದಾರೆ. ಭವಿಷ್ಯದಲ್ಲಿಯೂ ಇದೇ ರೀತಿ ಶ್ರಮಿಸಲಿದ್ದಾರೆ. ಹೀಗಿರುವಾಗ ಮೋದಿಯನ್ನು ಸೋಲಿಸಿದರೆ ಅದು ನಮ್ಮ ಮೂರ್ಖತನ ಪರಮಾವಧಿ ಎಂದರು.

ಮೋದಿ ಕೆಲಸವನ್ನು ಪ್ರೀತಿಸಿ :ಹಿಂದೆ ಇದ್ದ ಯುಪಿಎ ಸರ್ಕಾರದಲ್ಲಿ ಏನು ಸಾಧನೆ‌ ಮಾಡಿತ್ತು? ಯಾವುದೇ ಒಂದು ಕೆಲಸ ಮಾಡಬೇಕಾದರೂ ಮೇಡಂ ಅಂತ ಅವರ ಹಿಂದೆ‌ ಹೋಗುತ್ತಿದ್ದರು. ನಿಮಗೆ ಇಂತಹವರು ಬೇಕಾ? ದೇಶದ ಅಭಿವೃದ್ಧಿ ಮಾಡುವವರು ಬೇಕಾ? ಮೋದಿಯನ್ನು ದ್ವೇಷ ಮಾಡುವ ಬದಲು ಅವರ ಕೆಲಸವನ್ನು ಪ್ರೀತಿಸಿ ಎಂದು ಹೇಳಿದ್ದಾರೆ.

 

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

3 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

3 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

4 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

5 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

8 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

8 hours ago