ಮಂಗಳೂರು, :ಮಂಗಳೂರಿನ ನೆಹರು ಮೈದಾನದಲ್ಲಿ ನಡೆಯಲಿರುವ ಬೃಹತ್ ರ್ಯಾಲಿಗೆ ಭರ್ಜರಿ ಸಿದ್ಧತೆ ನಡೆದಿದೆ. ವಿಶೇಷ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಮೋದಿ, ಸಂಜೆ 4 ಗಂಟೆಗೆ ಮೈದಾನ ತಲುಪಲಿದ್ದಾರೆ.
ಈ ನಿಟ್ಟಿನಲ್ಲಿ ಬಿಜೆಪಿ ಜಿಲ್ಲಾ ಘಟಕ ಎಲ್ಲಾ ಸಿದ್ಧತೆಗಳನ್ನೂ ಮಾಡಿಕೊಂಡಿದೆ. ಕಾರ್ಯಕ್ರಮದಲ್ಲಿ ಪ್ರಧಾನಿ ಜೊತೆಗೆ ರಾಜ್ಯದ ಹಲವು ಪ್ರಬಲ ನಾಯಕರು ಸೇರಿಕೊಳ್ಳಲಿದ್ದಾರೆ.
ಮೋದಿ ಆಗಮನದ ಹಿನ್ನೆಲೆಯಲ್ಲಿ, ಬೆಳ್ತಂಗಡಿ ಬಿಜೆಪಿ ಘಟಕ ಮೈ ಭೀ ಚೌಕೀದಾರ್ ಅಭಿಯಾನ ನಡೆಸಲು ನಿರ್ಧರಿಸಿದ್ದು, ಇಂದು ಪ್ರಧಾನಿ ಮೋದಿಯೆದುರು ಈ ಅಭಿಯಾನವನ್ನು ವಿಶೇಷ ರೀತಿಯಲ್ಲಿ ಅನಾವರಣಗೊಳಿಸಲು ಸಿದ್ಧತೆ ನಡೆಸಿದ್ದಾರೆ.
ಕಡಲ ನಗರಿ ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರೂ ಸೇರಿದಂತೆ ಸಾವಿರಕ್ಕೂ ಬಿಜೆಪಿ ಕಾರ್ಯಕರ್ತರು ಇಂದು ಮೈ ಭೀ ಚೌಕೀದಾರ್ ಎನ್ನುವ ಹೆಸರು ಪಟ್ಟಿಯೊಂದಿಗೆ ಕಾವಲುಗಾರನ ಸಮವಸ್ತ್ರದಲ್ಲಿ ಮಿಂಚಲಿದ್ದಾರೆ.
ಈಗಾಗಲೇ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ತನ್ನ ಚೌಕೀದಾರ್ ಸಮವಸ್ತ್ರದ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು, ಭಾರೀ ವೈರಲ್ ಆಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…