Featured

ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಆರ್‌ಎಸ್‌ಎಸ್ ಮತ್ತು ಸಂಘಪರಿವಾರದ ಭರ್ಜರಿ ಸಿದ್ಧತೆ !!

ದೇಶಾದ್ಯಂತ ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ಎಲ್ಲಾ ರಾಜಕೀಯ ಪಕ್ಷಗಳು ಈಗಿಂದಲೇ ತಯಾರಿ ನಡೆಸುತ್ತಿದ್ದು, ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರಕಾರ ಮತ್ತೊಮ್ಮೆ ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡಿ ದೇಶದಲ್ಲಿ ಕೇಸರಿ ಪತಾಕೆ ಹಾರಿಸಲು ಭರ್ಜರಿ ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ ಇದೀಗ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಭಾರತೀಯ ಜನತಾ ಪಕ್ಷವನ್ನು ಮತ್ತೊಮ್ಮೆ ಗೆಲ್ಲಿಸಲು ಕಾರ್ಯಕರ್ತರ ಪಡೆಯನ್ನು ತಯಾರಿಸುವಲ್ಲಿ ನಿರತವಾಗಿದೆ. ಮೋದಿ ವಿರೋಧಿಗಳೆಲ್ಲಾ ಈಗಾಗಲೇ ಒಗ್ಗಟ್ಟಾಗುವ ಮುನ್ಸೂಚನೆ ನೀಡಿದ್ದು ಮೋದಿಯವರನ್ನು ಅಧಿಕಾರದಿಂದ ಕೆಳಗಿಳಿಸುವ ತಂತ್ರ ರೂಪಿಸಿದೆ.

ಇತ್ತ ಬಿಜೆಪಿ ಒಂಟಿ ಸಲಗದಂತೆ ಅಖಾಡಕ್ಕಿಳಿದಿದ್ದು ಸಂಘಪರಿವಾರದ ಬಲದ ಜೊತೆಗೆ ಚುನಾವಣೆಯಲ್ಲಿ ಮುನ್ನುಗ್ಗಲಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಾರ್ಗದರ್ಶನದಂತೆ ಭಾರತೀಯ ಜನತಾ ಪಕ್ಷದ ಮುಖಂಡರೂ ಕೂಡ ಕೆಲವೊಂದು ನಿರ್ಧಾರಗಳನ್ನು ತೆಗೆದುಕೊಳ್ಳುವುದರಿಂದ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಿ ಬಿಜೆಪಿಯನ್ನು ಮತ್ತೆ ಗದ್ದುಗೆ ಏರಿವಂತೆ ಮಾಡಲು ತಳಮಟ್ಟದಿಂದಲೇ ಪಕ್ಷ ಬಲವರ್ಧನೆ ಮಾಡಲು ಮುಂದಾಗಿದೆ.!

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಯಾವುದೇ ಯೋಜನೆಗಳು ಈವರೆಗೆ ವಿಫಲವಾದ ಉದಾಹರಣೆಯೇ ಇಲ್ಲ. ಯಾಕೆಂದರೆ ಕೇವಲ ಒಂದು ಶಾಖೆಯಿಂದ ಆರಂಭವಾದ ಆರ್‌ಎಸ್‌ಎಸ್ ಇಂದು ಜಗತ್ತಿನಾದ್ಯಂತ ವಿಸ್ತಾರಗೊಂಡ ಏಕೈಕ ಸಂಘಟನೆ ಎಂದರೆ ತಪ್ಪಾಗದು. ಭಾರತೀಯ ಜನತಾ ಪಕ್ಷದ ಗೆಲುವಿನ ಹಿಂದ ಈ ಸಂಘಟನೆ ಬೆನ್ನುಲುಬಾಗಿ ನಿಂತಿರುವಿದು ಸ್ವತಃ ಪಕ್ಷದ ನಾಯಕರೇ ಒಪ್ಪಿಕೊಂಡಿದ್ದಾರೆ. ಯಾಕೆಂದರೆ ಭಾರತೀಯ ಜನತಾ ಪಕ್ಷದಲ್ಲಿ ಹೆಚ್ಚಿನ ನಾಯಕರು ಸಂಘದ ಹಿನ್ನಲೆಯುಳ್ಳವರೇ ಆಗಿರುವುದರಿಂದ ಬಿಜೆಪಿ ಮತ್ತು ಆರ್‌ಎಸ್‌ಎಸ್ ಎಲ್ಲಾ ಸಂದರ್ಭದಲ್ಲೂ ಒಟ್ಟಾಗಿ ನಿರ್ಧಾರ ತೆಗೆದುಕೊಳ್ಳುತ್ತದೆ.!

ವಿಧಾನಸಭಾ ಚುನಾವಣೆಯಲ್ಲಿ ಆರ್‌ಎಸ್‌ಎಸ್ ಸಮೀಕ್ಷೆಯಂತೆ ಬಿಜೆಪಿ ನೂರರ ಗಡಿ ದಾಟಿತ್ತು. ಅದೇ ರೀತಿ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಗೆ ಕಳೆದ ಲೋಕಸಭಾ ಚುನಾವಣೆಗಿಂತಲೂ ಅಧಿಕ ಸ್ಥಾನಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ತಯಾರಿ ಆರಂಭಿಸಿರುವ ಸಂಘ , ಯಾವುದೇ ಕಾರಣಕ್ಕೂ ಯಾವ ರಾಜ್ಯದಲ್ಲೂ ಬಿಜೆಪಿಗೆ ಹಿನ್ನಡೆಯಾಗದಂತೆ ನೋಡಿಕೊಳ್ಳಲು ಮಾಸ್ಟರ್ ಪ್ಲಾನ್ ರೂಪಿಸಿದೆ.!

ಲೋಕಸಭಾ ಚುನಾವಣೆಗೆ ಈಗಾಗಲೇ ಬಿಜೆಪಿ ರಣಕಹಳೆ ಮೊಳಗಿಸಿದ್ದು ಕೇಂದ್ರ ನಾಯಕರು ಒಂದೊಂದೇ ರಾಜ್ಯಗಳಿಗೆ ಭೇಟಿ ನೀಡಿ ಚುನಾವಣಾ ಪೂರ್ತಿ ತಯಾರಿಯಲ್ಲಿ ತೊಡಗಿಕೊಂಡಿದ್ದಾರೆ. ಆದ್ದರಿಂದಲೇ ಆರ್‌ಎಸ್‌ಎಸ್ ಕೂಡ ಸಿದ್ಧತೆ ನಡೆಸುತ್ತಿದ್ದು, ಚುನಾವಣೆ ಯಾವ ಸಂದರ್ಭದಲ್ಲಿ ನಡೆದರೂ ಅದಕ್ಕೆ ಬೇಕಾದ ಎಲ್ಲಾ ತಯಾರಿ ಈಗಿಂದಲೇ ಆರಂಭಿಸಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡರು ಪಕ್ಷ ಬಲವರ್ಧನೆಗೆ ಬೇಕಾದ ತಳಮಟ್ಟದ ಸಿದ್ಧತೆ ನಡೆಸುತ್ತಿರುವುದರಿಂದ ಯಾವ ಕ್ಷಣದಲ್ಲಿ ಚುನಾವಣೆ ಘೋಷಣೆಯಾದರೂ ಕೂಡ ಪಕ್ಷವನ್ನು ಸಮರ್ಥವಾಗಿ ಮುನ್ನಡಿಸಲು ಸಹಾಯಕವಾಗುತ್ತದೆ.!

ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ಒಟ್ಟಾಗಿ ಕೈಜೋಡಿಸಿಕೊಂಡಿದ್ದವು. ಇದು ಕೇವಲ ರಾಜ್ಯ ರಾಜಕಾರಣಕ್ಕೆ ಸೀಮಿತವಾಗಿರಲಿಲ್ಲ, ಯಾಕೆಂದರೆ ಮುಂದಿನ ವರ್ಷ ನಡೆಯುವ ಲೋಕಸಭಾ ಚುನಾವಣೆಗೂ ಬಿಜೆಪಿಯ ವಿರೋಧ ಪಕ್ಷಗಳೆಲ್ಲಾ ಮತ್ತೊಮ್ಮೆ ಒಗ್ಗಟ್ಟಾಗುತ್ತದೆ ಎಂಬುದು ಸ್ಪಷ್ಟವಾಗಿದೆ. ಅದಲ್ಕಾಗಿಯೇ ಯಾವುದೇ ವಿರೋಧವನ್ನೂ ಮಟ್ಟಹಾಕಲು ಬಿಜೆಪಿ ಕೂಡ ಸಜ್ಜಾಗಿದ್ದು ಸಂಘಪರಿವಾರ ಕೂಡ ಜೊತೆಗೂಡಿಕೊಂಡಿದೆ.!

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

1 day ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

1 day ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

1 day ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

1 day ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago