ಬೆಂಗಳೂರು: ಅಡುಗೆ ಅನಿಲ ಸಿಲಿಂಡರ್ ಬಳಕೆ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ದಿನೇಶ್ ಗುಂಡೂರಾವ್, ಪ್ರಧಾನಿ ಮೋದಿಯವರ ಆಡಳಿತ. ಇದೊಂದು ರೀತಿ ದುಡ್ಡು ಕೊಟ್ಟು ದೆವ್ವ ಹಿಡಿಸಿಕೊಂಡಂತೆ ಎಂದು ವ್ಯಂಗ್ಯ ಮಾಡಿದ್ದಾರೆ.
ಕೇಂದ್ರ ಸರ್ಕಾರದ ಆಡಳಿತದ ಬಗ್ಗೆ ಟ್ವಿಟ್ಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ದಿನೇಶ್ ಗುಂಡೂರಾವ್, ಚೇಳಿಗೆ ಯಜಮಾನಿಕೆ ನೀಡಿ ಮನೆಯವರೆಲ್ಲಾ ಕುಟುಕಿಸಿಕೊಳ್ಳುವಂತಾಗಿದೆ ಪ್ರಧಾನಿ ಮೋದಿಯವರ ಆಡಳಿತ. ಇದೊಂದು ರೀತಿ ದುಡ್ಡು ಕೊಟ್ಟು ದೆವ್ವ ಹಿಡಿಸಿಕೊಂಡಂತೆ. ಸ್ವಘೋಷಿತ ‘ಚೌಕಿದಾರ’ ಮೋದಿಯವರು ನಿಜವಾದ ‘ಚೌಕಿದಾರ’ರಲ್ಲ. ಬದಲಿಗೆ ಜನಸಾಮಾನ್ಯರ ಪಾಲಿನ ‘ಕೆಟ್ಟ ಗ್ರಹಚಾರ’ವಾಗಿದ್ದಾರೆ. ಮೋದಿಯವರ ಅಚ್ಚೇದಿನ್‍ನ ಸತ್ಯ ಜನರಿಗೆ ಈಗ ಅರಿವಾಗುತ್ತಿದೆ. ಬೆಲೆಯೇರಿಸಿ ಜನರ ಜೇಬು ಖಾಲಿ ಮಾಡುವುದೇ ಕೇಂದ್ರ ಸರ್ಕಾರದ ಒಂದಂಶದ ಕಾರ್ಯಕ್ರಮವಿದ್ದಂತೆ ಭಾಸವಾಗುತ್ತಿದೆ ಎಂದು ಕಿಡಿಕಾರಿದ್ದಾರೆ.
ಬಿಜೆಪಿ ಸಂಸದ ನಂದ್ ಕುಮಾರ್ ಸಿಂಗ್ ಚೌಹಾಣ್ ನಿಧನ -Vishwanews24
ಒಂದೇ ತಿಂಗಳ ಅವಧಿಯಲ್ಲಿ 4 ಬಾರಿ ಎಲ್‍ಪಿಜಿ ಬೆಲೆಯೇರಿಕೆಯಾಗಿದೆ. ಒಂದೊಂದು ರೂಪಾಯಿಗೂ ಪರಿತಪಿಸುತ್ತಿರುವ ಬಡಜನತೆ ಈ ಬೆಲೆಯೇರಿಕೆ ತಾಪ ಸಹಿಸಿಕೊಳ್ಳಲು ಹೇಗೆ ಸಾಧ್ಯ? ಈ ಸರ್ಕಾರಕ್ಕೆ ಜನರ ಬಗ್ಗೆ ಕಿಂಚಿತ್ತಾದರೂ ಸಂವೇದನೆ ಬೇಡವೆ ಎಂದು ಪ್ರಶ್ನಿಸಿದ್ದಾರೆ.
ಹೊಟ್ಟೆ-ಬಟ್ಟೆ ಕಟ್ಟಿ ಜೀವನ ನಡೆಸುತ್ತಿರುವ ಜನ ಈ ಸರ್ಕಾರದ ದುಡ್ಡಿನ ದುರಾಸೆಗೆ ನೆಮ್ಮದಿಯನ್ನೇ ಕಳೆದುಕೊಂಡಿದ್ದಾರೆ. ಬೆಲೆಯೇರಿಕೆಯಿಂದ ದುಡಿದ ಹಣ ಉಳಿಸುವುದಿರಲಿ,ತಿಂಗಳ ಸಂಸಾರ ನಡೆಸುವುದೂ ಕಷ್ಟವಾಗಿದೆ. ಮಾತಲ್ಲೇ ಮಂಟಪ ಕಟ್ಟುವ ಬಣ್ಣದ ಮಾತುಗಳು ಜನರ ಹೊಟ್ಟೆ ತುಂಬಿಸುವುದಿಲ್ಲ. ಈ ಸತ್ಯವನ್ನು ಮೋದಿಯವರು ಇನ್ನಾದರೂ ಅರ್ಥ ಮಾಡಿಕೊಳ್ಳಲಿ ಎಂದು ಸಲಹೆ ನೀಡಿದ್ದಾರೆ.
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…