ವಯನಾಡ್: ಮೋದಿಯವರು ನಿರ್ಮಿಸಿದ ದ್ವೇಷದ ವಾತಾವರಣದಿಂದ ನಿಮ್ಮನ್ನು ರಕ್ಷಿಸುವುದು ನಮ್ಮ ಜವಾಬ್ಧಾರಿಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಹೇಳಿದ್ದಾರೆ.
ಶುಕ್ರವಾರ 3 ದಿನಗಳ ಕೇರಳ ಪ್ರವಾಸವನ್ನು ಆರಂಭಿಸಿರುವ ರಾಹುಲ್, ತಮ್ಮ ಲೋಕಸಭಾ ಕ್ಷೇತ್ರವಾದ ವಯನಾಡ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಈ ಮಾತುಗಳನ್ನಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದಲ್ಲಿ ದ್ವೇಷದ ವಾತಾವರಣ ನಿರ್ಮಿಸುತ್ತಿದ್ದಾರೆ. ಆದರೆ, ದ್ವೇಷವನ್ನು ಪ್ರೀತಿಯಿಂದಷ್ಟೇ ಎದುರಿಸಲು ಸಾಧ್ಯ. ಮೋದಿಯವರ ನೀತಿಯಿಂದಾಗಿ ಸಮಸ್ಯೆ ಎದುರಿಸುತ್ತಿರುವ ನಿಮ್ಮೆಲ್ಲರನ್ನೂ ರಕ್ಷಿಸುವುದು ನಮ್ಮ ಜವಾಬ್ದಾರಿಯಾಗಿದೆ. ಅದಕ್ಕೆ ನಾವು ಬದ್ಧರಾಗಿದ್ದೇವೆ’ ಎಂದು ಹೇಳಿದ್ದಾರೆ.
ಭಾನುವಾರದವರೆಗೂ ಕೇರಳದಲ್ಲೇ ಇರಲಿರುವ ರಾಹುಲ್, ಸುಮಾರು 15ರಷ್ಟು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಕಲಿಕಾವು, ನೀಲಂಬೂರ್, ಎಡವಣ್ಣ ಮತ್ತು ಅರೀಕೋಡೆಯಲ್ಲಿ ಸಾರ್ವಜನಿಕ ಸಭೆ ಹಾಗೂ ರೋಡ್‌ಶೋಗಳಲ್ಲೂ ಪಾಲ್ಗೊಳ್ಳಲಿದ್ದಾರೆ.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…