Featured

ಮೋದಿಯವರ ನಾಯಕತ್ವದಲ್ಲಿ ಭಾರತದಲ್ಲಿ ಸುನಾಮಿ ಅಲೆಯೊಂದು ಸೃಷ್ಠಿಯಾಗಿದ್ದು, ಬದಲಾವಣೆಯ ಪರ್ವ ಆರಂಭವಾಗಿದೆ : ಕುವೈತ್ ನಲ್ಲಿ ಅಣ್ಣಮಲೈ -Vishwanews24

ಕುವೈತ್: ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ  ಭಾರತದಲ್ಲಿ ಸುನಾಮಿ ಅಲೆಯೊಂದು ಸೃಷ್ಠಿಯಾಗಿದ್ದು, ಬದಲಾವಣೆಯ ಪರ್ವ ಆರಂಭವಾಗಿದೆ, ಜಾಗತಿಕ ಮಟ್ಟದಲ್ಲಿ ಭಾರತ ಗುರುತಿಸಿಕೊಳ್ಳುವಂತೆ ಆಗಿದೆ ಎಂದು ಕರ್ನಾಟಕದ ಸಿಂಘಂ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಮಲೈ ಹೇಳಿದ್ದಾರೆ.

ಅವರು, ಕುವೈತ್ ನ, ಅಮೆರಿಕ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಭಾರತೀಯ ಪ್ರವಾಸಿ ಪರಿಷತ್ ಆಯೋಜಿಸಿದ್ದ ”ಕರುನಾಡ ಡಿಂಡಿಮಾ” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದಾರೆ.

ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಜಾಗತಿಕ ಮಟ್ಟದಲ್ಲಿ ವಿದೇಶಿ ರಾಷ್ಟ್ರಗಳ ಜೊತೆ ಉತ್ತಮ ಬಾಂಧವ್ಯ ಬೆಸೆಯುವ ಕಾರ್ಯ ಆಗುತ್ತಿದ್ದು ವಿಶ್ವದಾದ್ಯಂತ ಭಾರತವನ್ನು ಗುರುತಿಸಿಕೊಳ್ಳುವಂತೆ ಆಗಿದೆ. ಮೋದಿಯವರ ನೇತೃತ್ವದಲ್ಲಿ ಭಾರತದಲ್ಲಿ ಸುನಾಮಿ ಅಲೆಯೊಂದು ಸೃಷ್ಠಿಯಾಗಿದ್ದು, ಬದಲಾವಣೆಯ ಪರ್ವ ಆರಂಭವಾಗಿದೆ. ಹೀಗಾಗಿ ಈ ಒಂದು ರಾಷ್ಟ್ರಕ್ಕೆ ಈ ರೀತಿಯ ಆಡಳಿತ ಮುಖ್ಯ, ಈ ರೀತಿ ಬೆಳವಣಿಗೆ ನಡೆದಾಗ ಹಲವಾರು ಟೀಕೆ, ಅಡೆ ತಡೆಗಳು ಬರುತ್ತಿದ್ದು, ಅಂತಹ ಸಂಗತಿಗಳು ಅಶೋಕ, ಮೌರ್ಯ, ಬಾಬರ್ ಮತ್ತು ಅಕ್ಬರ್ ಭಾರತದಲ್ಲಿ ಆಳ್ವಿಕೆ ನಡೆಸಿದಾಗ ಗಮನಿಸಬಹುವುದು. ಮೊದಲು ಜನಸೇವಕರಾಗಿದ್ದ ಮೋದಿ ಇಂದು ದೇಶದ ಪ್ರಧಾನಿಯಾಗಿದ್ದು, ದೇಶದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ, ಈ ಮೂಲಕ ಸಕರಾತ್ಮಕ ಬದಲಾವಣೆಯತ್ತ ಭಾರತ ಸಾಗುತ್ತಿದೆ ಎಂದು ಹೇಳುವ ಮೂಲಕ ಪ್ರಧಾನಿ ಮೋದಿಯನ್ನು ಶ್ಲಾಘಿಸಿದ್ದಾರೆ.

ಕರ್ನಾಟಕದಲ್ಲಿ ಜನಿಸದಿದ್ದರೂ ಕನ್ನಡಿಗರು ನನಗೆ ನೀಡುವ ಪ್ರೀತಿ ಅಭಿಮಾನ ಗೌರವಕ್ಕೆ ನಾನು ಚಿರಋಣಿ. ಹಾಗಾಗಿ ಎಲ್ಲೇ ಇದ್ದರೂ ಕನ್ನಡಿಗರು ತಮ್ಮ ತಾಯ್ನಾಡಿನ ಬಗ್ಗೆ ಹೆಮ್ಮೆ ಪಡಬೇಕೆಂದು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಮಲೈ ಕೇಂದ್ರಬಿಂದುವಾಗಿದ್ದು, ಅಲ್ಲಿನ ಜನ ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು. ಅವರನ್ನು ಸನ್ಮಾನಿಸುವಾಗ ಎದ್ದು ನಿಂತು ಗೌರವಿಸಿದರು. ಕಾರ್ಯಕ್ರಮದಲ್ಲಿ ವಕೀಲ ಸುಮೋದ್, ಸತೀಶ್ಚಂದ್ರ ಶೆಟ್ಟಿ, ಫ್ರಾ.ಡೊಮಿನಿಕ್ ಸಿಕ್ವೆರಾ, ರಣವೀರ್ ಭಾರತಿ, ಮುಲ್ಕಿ ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್, ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ, ಪ್ರೊ.ಕೃಷ್ಣೇ ಗೌಡ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

14 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

14 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

14 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

14 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

14 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

16 hours ago