Featured

ಮೋದಿಯವರ ವರ್ಚಸ್ಸಿಗೆ ಧಕ್ಕೆ ತರಲು ರೈತರ ಹೆಸರಿನಲ್ಲಿ ಪ್ರತಿಭಟನೆ  : ಬಿ.ವೈ ರಾಘವೇಂದ್ರ  -Vishwanews24

ಮೋದಿಯವರ ವರ್ಚಸ್ಸಿಗೆ ಧಕ್ಕೆ ತರಲು ರೈತರ ಹೆಸರಿನಲ್ಲಿ ಪ್ರತಿಭಟನೆ  : ಬಿ.ವೈ ರಾಘವೇಂದ್ರ  -Vishwanews24

ಶಿವಮೊಗ್ಗ: ಕೆಲವು ರಾಜಕೀಯ ಪಕ್ಷಗಳು ತಮ್ಮ ಅಸ್ತಿತ್ವ ಉಳಿವಿಗಾಗಿ ರೈತರ ಹೆಸರಿನಲ್ಲಿ ಹೋರಾಟ ಮಾಡುತ್ತಿವೆ. ರೈತರು ಈ ಕುತಂತ್ರವನ್ನು ಅರಿತುಕೊಳ್ಳಬೇಕು ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರೈತರ ಅನುಕೂಲಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ರೈತ ಪರವಾದ ಕಾಯ್ದೆಗಳನ್ನು ಜಾರಿಗೊಳಿಸಿದ್ದಾರೆ. ಆದರೆ ಎಡ ಪಕ್ಷಗಳು ಹಾಗೂ ಇತರೆ ಪಕ್ಷಗಳು ರಾಜಕೀಯ ಕುತಂತ್ರದಿಂದಾಗಿ ರೈತರ ಹೆಸರಿನಲ್ಲಿ ಪ್ರತಿಭಟನೆ, ಬಂದ್ ನಡೆಸುತ್ತಿವೆ ಎಂದು ಕಿಡಿಕಾರಿದಾರು.

ರೈತರಿಗಾಗಿ ಕಾಂಗ್ರೆಸ್ ಹಾಗೂ ಎಡ ಪಕ್ಷಗಳು ಏನನ್ನೂ ಮಾಡಿಲ್ಲ. ಮೋದಿಯವರ ವರ್ಚಸ್ಸಿಗೆ ಧಕ್ಕೆ ತರಲು ರೈತರ ಹೆಸರಿನಲ್ಲಿ ಪ್ರತಿಭಟನೆ ನಡೆಸುತ್ತಿವೆ ಎಂದು ವಾಗ್ದಾಳಿ ನಡೆಸಿದರು.

ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಗೆ ಶಿವಮೊಗ್ಗದ ಎಪಿಎಂಸಿ ಮಾರುಕಟ್ಟೆಯ ವರ್ತಕರು ಬೆಂಬಲ ವ್ಯಕ್ತಪಡಿಸಿದ್ದಾರೆ.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago