Featured

ಮೋದಿಯಿಂದ ದೇಶ ವಿಭಜನೆ, ಬಿಎಸ್‍ವೈಯಿಂದ ರಾಜ್ಯ ವಿಭಜನೆ: ಆನಂದ್ ಅಸ್ನೋಟಿಕರ್

ಕಾರವಾರ: ಯುವಕರನ್ನು ಬಳಸಿ ಹಿಂದುತ್ವದ ಆಧಾರದ ಮೇಲೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ವಿಭಜನೆ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಇಲ್ಲಿ ಯಡಿಯೂರಪ್ಪನವರು ಕರ್ನಾಟಕವನ್ನು ವಿಭಜನೆ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಕಿಡಿಕಾರಿದ್ದಾರೆ.

ಪ್ರತ್ಯೇಕ ರಾಜ್ಯ ಕುರಿತು ಮಾತನಾಡಿದ ಅವರು ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಖ್ಯಾತಿಯನ್ನು ಸಹಿಸಲಾಗದೇ ಯಡಿಯೂರಪ್ಪನವರು ಹಾಗೂ ಬಿಜೆಪಿಯವರು ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡುವ ಕುರಿತು ರೈತರನ್ನು ಬಲಿ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಬಡ ರೈತರನ್ನು, ಯುವಕರನ್ನು ಬಳಸಿ ಹಿಂದುತ್ವದ ಆಧಾರದ ಮೇಲೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ವಿಭಜನೆ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಇಲ್ಲಿ ಯಡಿಯೂರಪ್ಪನವರು ಕರ್ನಾಟಕವನ್ನು ವಿಭಜನೆ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅಸ್ನೋಟಿಕರ್ ದೂರಿದರು.

ಯಡಿಯೂರಪ್ಪನವರು ಮುಖ್ಯಮಂತ್ರಿ ಆಗುವ ಸಾಧ್ಯತೆಗಳಿಲ್ಲ, ಕೇಂದ್ರದಲ್ಲಿ ಮಂತ್ರಿಯಾಗುತ್ತೇನೆ ಎನ್ನುವ ಉದ್ದೇಶವಿಟ್ಟುಕೊಂಡು ಹೀಗೆ ಮಾಡುತ್ತಿದ್ದಾರೆ. ಇವರ ಮೇಲಿರುವ ಕೇಸುಗಳನ್ನು ಮುಗಿಸಿಕೊಳ್ಳಬೇಕಿದೆ ಹೀಗಾಗಿ ಈ ರೀತಿ ಮಾಡುತ್ತಿದ್ದಾರೆ. ಇದೊಂದು ಪೊಲಿಟಿಕಲ್ ಗೇಮ್. ಮುಂಬರುವ ಲೋಕಸಭಾ ಚುನಾವಣೆಯೇ ಮುಖ್ಯ ಉದ್ದೇಶ ಎಂದು ತಿಳಿಸಿದರು.

ಅಮಿತ್ ಶಾ ರವರಿಗೆ ಕರ್ನಾಟಕದಲ್ಲಿ ತಾನೇನೋ ಮಾಡುತ ದ್ದೇನೆ ಎಂದು ತೋರಿಸಿಕೊಳ್ಳಲು ಯಡಿಯೂರಪ್ಪನವರು ಹೀಗೆ ಮಾಡುತ್ತಿದ್ದಾರೆ. ಅವರು ಇನ್ನು ಮುಂದೆ ರಾಜ್ಯದ ಮುಖ್ಯಮಂತ್ರಿಯಾಗುವುದಿಲ್ಲ. ಕುಮಾರಸ್ವಾಮಿಯವರ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರೈಸುತ್ತದೆ. ತಾವು ವಿರೋಧ ಪಕ್ಷದಲ್ಲಿದ್ದು ರಾಜ್ಯಕ್ಕಾಗಿ ಒಳ್ಳೆಯ ಹೋರಾಟ ಮಾಡಿ ಎಂದು ಯಡಿಯೂರಪ್ಪನವರಿಗೆ ಸಲಹೆ ನೀಡಿದರು.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

2 days ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

2 days ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

2 days ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

2 days ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

3 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

3 days ago