Featured

ಮೋದಿಯಿಂದ ಭ್ರಷ್ಟಾಚಾರ ರಹಿತ ಆಡಳಿತ ; ನಾಲ್ಕು ವರ್ಷಗಳ ಬಿಜೆಪಿ ಸರ್ಕಾರದ ಸಾಧನೆ ತೆರೆದಿಟ್ಟ ಸಂಸದ ನಳಿನ್ ಕುಮಾರ್

ಉಡುಪಿ: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ನಾಲ್ಕು ವರ್ಷಗಳನ್ನು ಪೂರೈಸಿದೆ. ಈ ಅವಧಿಯಲ್ಲಿ ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಎಂಬಂತೆ ಸಮಾಜದ ಎಲ್ಲ ವರ್ಗಗಳ ಅಭಿವೃದ್ಧಿಗೆ ಶ್ರಮಿಸಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.

ಬಿಜೆಪಿ ಸರ್ಕಾರ ಕೇಂದ್ರದಲ್ಲಿ ನಾಲ್ಕು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಸೋಮವಾರ ಪಕ್ಷದ ಕಚೇರಿಯಲ್ಲಿ  ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ವಿಶ್ವಮಟ್ಟದಲ್ಲಿ ಭಾರತದ ಗೌರವವನ್ನು ಹೆಚ್ಚಿಸಿದ್ದಾರೆ ಎಂದರು.

150ಕ್ಕೂ ಹೆಚ್ಚು ದೇಶಗಳು ಯೋಗ ದಿನವನ್ನು ಆಚರಿಸುವ ಮೂಲಕ ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಎತ್ತಿ ಹಿಡಿದಿವೆ. ಜಿಡಿಪಿ ಪ್ರಮಾಣ ಹೆಚ್ಚಳವಾಗಿದೆ. ದೇಶ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದ್ದು, ಜನರು ಮೋದಿ ಅವರ ಆಡಳಿತ ವೈಖರಿಯನ್ನು ಮೆಚ್ಚಿಕೊಂಡಿದ್ದಾರೆ ಎಂದರು.

ವಿದ್ಯುತ್ ರಹಿತ ಗ್ರಾಮಗಳಿಗೆ ವಿದ್ಯುತ್, ಸ್ವಚ್ಛ ಭಾರತ ಯೋಜನೆಯಡಿ ಏಳೂವರೆ ಕೋಟಿ ಶೌಚಾಲಯಗಳ ನಿರ್ಮಾಣ, 3.80 ಕೋಟಿ ಜನರಿಗೆ ಸಿಲಿಂಡರ್ ಭಾಗ್ಯ, 31.60 ಕೋಟಿ ಜನರಿಗೆ ಜನಧನ್ ಬ್ಯಾಂಕ್‌ ಖಾತೆ, ಉದ್ಯಮ ಶೀಲತೆ ತರಬೇತಿ, ಜನರಿಕ್ ಔಷಧ ಮಳಿಗೆಗಳ ನಿರ್ಮಾಣ, ಕಡಿಮೆ ದರದಲ್ಲಿ ಹೃದಯಕ್ಕೆ ಅಳವಡಿಸುವ ಸ್ಟಂಟ್‌ಗಳ ಪೂರೈಕೆ, ಆಯುಷ್ಮಾನ್ ಆರೋಗ್ಯ ಯೋಜನೆ, ಗ್ರಾಮೀಣ ಭಾಗಗಳ ಡಿಜಿಟಲೀಕರಣ, ಹೀಗೆ, ಹಲವು ಜನೋಪಯೋಗಿ ಯೋಜನೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಎಂದರು.‌

ಕೇಂದ್ರದಲ್ಲಿ ಸದೃಢ ಹಾಗೂ ಸ್ಥಿರ ಸರ್ಕಾರ ರಚನೆಯಾಗಿರುವುದರಿಂದ, ನೋಟು ಅಮಾನ್ಯೀಕರಣ, ಜಿಎಸ್‌ಟಿ, ಸರ್ಜಿಕಲ್‌ ಸ್ಟ್ರೈಕ್‌ನಂತಹ ದಿಟ್ಟ ನಿರ್ಧಾರಗಳನ್ನು ನರೇಂದ್ರ ಮೋದಿ ಅವರು ತೆಗೆದುಕೊಳ್ಳಲು ಸಾದ್ಯವಾಯಿತು. ಉಗ್ರರ ನುಸುಳಿವಿಕೆಗೆ ಕಡಿವಾಣ ಬಿದ್ದಂತಾಯಿತು. ನಾಲ್ಕು ವರ್ಷಗಳಲ್ಲಿ ಭ್ರಷ್ಟಾಚಾರ ರಹಿತ ಹಾಗೂ ಕಪ್ಪುಚುಕ್ಕೆ ಇಲ್ಲದ ಆಡಳಿತ ನೀಡಲು ಸಾಧ್ಯವಾಯಿತು. ಚುನಾವಣೆಗೂ ಮುನ್ನ ದೇಶದ ಜನರಿಗೆ ನೀಡಿದ್ದ ಭರವಸೆಗಳನ್ನು ಮೋದಿ ಈಡೇರಿಸಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗಡೆ, ಉದಯ ಕುಮಾರ್ ಶೆಟ್ಟಿ, ಪ್ರತಾಪ್ ಸಿಂಹ ನಾಯಕ್ ಕುಯಿಲಾಡಿ ಸುರೇಶ್ ನಾಯಕ್, ನವೀನ್ ಶೆಟ್ಟಿ ಅವರು ಇದ್ದರು.

 

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago