ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ಮರಳಿ ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭವಿಷ್ಯ ನುಡಿದಿದ್ದಾರೆ.
ಕಳೆದ ಲೋಕಸಭಾ ಚುನಾವಣೆ ವೇಳೆ ಮತದಾರರಿಗೆ ನೀಡಿದ್ದ ಯಾವೊಂದು ಭರವಸೆಯನ್ನೂ ಈಡೇರಿಸಲು ಸಾಧ್ಯವಾಗಿಲ್ಲ. 2019ರ ಲೋಕಸಭಾ ಚುನಾವಣೆಯಲ್ಲಿ ಮರಳಿ ಅವರು ಅಧಿಕಾರಕ್ಕೆ ಬರುವುದು ಕನಸಿನ ಮಾತು ಎಂದು ಅಭಿಪ್ರಾಯಪಟ್ಟಿದ್ದಾರೆ.
ಆದಿಲಾಬಾದ್‌ನಲ್ಲಿ ಶನಿವಾರ ತೆಲಂಗಾಣ ವಿಧಾನಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
‘70 ವರ್ಷಗಳಲ್ಲಿ ಕಾಂಗ್ರೆಸ್ ಬಡವರಿಗಾಗಿ ಏನು ಮಾಡಿದೆ ಎಂದು ಮೋದಿ ಪದೇ ಪದೇ ಕೇಳುತ್ತಾರೆ. ಈ ದೇಶದ ಬಡವರ ಚೌಕಿದಾರರಾಗಬೇಕಿದ್ದ ಪ್ರಧಾನಿಯು ಕೇವಲ ಶ್ರೀಮಂತ ಉದ್ಯಮಿಗಳ ಚೌಕಿದಾರರಾಗಿರುವುದು ವಿಪರ್ಯಾಸ’ ಎಂದು ಲೇವಡಿ ಮಾಡಿದ್ದಾರೆ.
ತೆಲಂಗಾಣ ಪ್ರತ್ಯೇಕ ರಾಜ್ಯವಾದ ನಂತರ ಟಿಆರ್‌ಎಸ್ ಪಕ್ಷದ ಕೆ. ಚಂದ್ರಶೇಖರ್ ರಾವ್ ಕುಟುಂಬ ಮಾತ್ರ ಅದರ ಲಾಭ ಪಡೆಯುತ್ತಿದೆ ಎಂದು ರಾಹುಲ್ ಗಾಂಧಿ ಟೀಕಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…