ಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಬಂದು ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿ, ಆವಾಗ ಗೊತ್ತಾಗುತ್ತೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಬಿಜೆಪಿಯನ್ನು ದೂರವಿಡುವ ಉದ್ದೇಶದಿಂದಲೇ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್-ಜೆಡಿಎಸ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿಯನ್ನು ಮಣಿಸಲು ತಯಾರಿ ನಡೆಸುತ್ತಿದೆ. ಮೈತ್ರಿ ನಾಯಕರು ಆಪರೇಷನ್ ಕಮಲ ವಿರೋಧಿಸಿ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ಧಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ 22 ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಪ್ರಧಾನಿ ಮೋದಿ ಅವರು ಬರೀ ಸುಳ್ಳು ಹೇಳುತ್ತಾರೆ. ಭಾನುವಾರ ರಫೇಲ್ ಬಗ್ಗೆ ದೇಶದ ಚೌಕಿದಾರ ಮಾತಾಡಿಲ್ಲ. ರೈತರ ಸಾಲವನ್ನು ಅವರೇಕೆ ಮನ್ನಾ ಮಾಡಿಲ್ಲ ಎಂದು ಪ್ರಶ್ನಿಸಿದರು. ನಾವು ಈ ವರ್ಷದ ಬಜೆಟ್ ನಲ್ಲಿ ರೈತರ ಸಾಲಮನ್ನಾಕ್ಕೆ ಹಣ ಇಟ್ಟಿದ್ದೇವೆ. ಮೋದಿಯವರಿಗೆ ಸುಳ್ಳು ಹೇಳುವುದನ್ನು ಬಿಟ್ಟು ಬೇರೇನು ಗೊತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…