Featured

ಮೋದಿ ಉಡುಪಿ ಭೇಟಿ ಹಿನ್ನಲೆ: ವಾಹನ ಸಂಚಾರದಲ್ಲಿ ಬದಲಾವಣೆ – vishwanews24

ಮೋದಿ ಉಡುಪಿ ಭೇಟಿ ಹಿನ್ನಲೆ: ವಾಹನ ಸಂಚಾರದಲ್ಲಿ ಬದಲಾವಣೆ

ಉಡುಪಿ: ಭಾರತದ ಮಾನ್ಯ ಪ್ರಧಾನ ಮಂತ್ರಿಯವರು ನವೆಂಬರ್ 28 ರಂದು ಉಡುಪಿ ಜಿಲ್ಲೆಯ ಶ್ರೀ ಕೃಷ್ಣ ಮಠದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಹಿನ್ನೆಲೆ, ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಉಡುಪಿ ನಗರ ವ್ಯಾಪ್ತಿಯಲ್ಲಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ನಿಯಮ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಾಮವಳಿಗಳು 1989ರ ನಿಯಮ 221(ಎ)(2) & (5) ರನ್ವಯ ನವೆಂಬರ್ 28 ರಂದು ಬೆಳಗ್ಗೆ 6 ಗಂಟೆಯಿಂದ ಅಪರಾಹ್ನ 3 ಗಂಟೆಯ ವರೆಗೆ ಈ ಕೆಳಕಂಡಂತೆ ವಾಹನಗಳ ಸಂಚಾರ ನಿಷೇಧಿಸಿ ಮತ್ತು ಬದಲಿ ಮಾರ್ಗದಲ್ಲಿ ಸಂಚರಿಸುವ ಕುರಿತು ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಅದೇಶಿಸಿರುತ್ತಾರೆ.

ಕುಂದಾಪುರದಿಂದ ಬರುವ ವಾಹನಗಳು 

ಕುಂದಾಪುರದಿಂದ ಬರುವ ವಾಹನಗಳು ಗುಂಡಿಬೈಲು ಹತ್ತಿರ ಜನರನ್ನು ಇಳಿಸಿ ಯು ಟರ್ನ್ ಆಗಿ ಎಂಜಿಎಂ ಮೈದಾನಕ್ಕೆ ಹೋಗಬೇಕು.

ಕಾರ್ಕಳ ಬೆಳ್ವೆ ಮಾರ್ಗವಾಗಿ ಉಡುಪಿಗೆ ಬರುವ ವಾಹನಗಳು ಕ್ರಿಶ್ಚಿಯನ್ ಹೈಸ್ಕೂಲ್, ಪಿಯು ಕಾಲೇಜ್ ಮತ್ತು ಬೈಲೂರು ಮುದ್ದಣ ಎಸ್ಟೇಟ್ ನಲ್ಲಿ ಪಾರ್ಕ್ ಮಾಡಿ ರೋಡ್ ಶೋ ಗೆ ತೆರಳಬೇಕು.

ಮಂಗಳೂರು ಕಡೆಯಿಂದ ರೋಡ್ ಶೋ ಗೆ ಬರುವ ವಾಹನಗಳು ಬೈಲೂರು ಮುದ್ದಣ್ಣ ಎಸ್ಟೇಟ್ ನಲ್ಲಿ ಪಾರ್ಕ್ ಮಾಡಬೇಕು.

ಮಲ್ಪೆ ಕಡೆಯಿಂದ ರೋಡ್ ಶೋ ಗೆ ಬರುವ ವಾಹನಗಳು ಶಾಮೀಲಿ ಎದುರು ಗ್ರೌಂಡ್ ನಲ್ಲಿ ಪಾರ್ಕ್ ಮಾಡಬೇಕು.

ಕಾರ್ಕಳ ಹೆಬ್ರಿ ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ವಾಹನಗಳು ಶಾರದಾ ಕಲ್ಯಾಣ ಮಂಟಪ ಮಾರ್ಗವಾಗಿ ಬೀಡಿನಗುಡ್ಡೆಯಲ್ಲಿ ಪಾರ್ಕ್ ಮಾಡಬೇಕು.

ಮಲ್ಪೆ ಕಡೆಯಿಂದ ರೋಡ್ ಶೋ ಗೆ ಬರುವ ಜನರು ವಾಹನಗಳನ್ನು ವಿವೇಕಾನಂದ ಸ್ಕೂಲ್ ಪಾರ್ಕಿಂಗ್ ನಲ್ಲಿ ಪಾರ್ಕ್ ಮಾಡಬೇಕು.

ಬಸ್ಸುಗಳು ಮತ್ತು ಕಾರುಗಳು:

ಕೆ ಎಸ್ ಆರ್ ಟಿ ಸಿ ಮತ್ತು ಪ್ರೈವೇಟ್ ಬಸ್ ಗಳು ಉಡುಪಿ ಬಸ್ ಸ್ಟ್ಯಾಂಡ್ ಗೆ ಬರುವಂತಿಲ್ಲ.ಅವುಗಳು ನೇರವಾಗಿ ಅಂಬಾಗಿಲು ಮಾರ್ಗವಾಗಿ ಮಣಿಪಾಲ ಅಲೆವೂರು ಮಾರ್ಗವಾಗಿ ಕೊರಂಗ್ರಪಾಡಿ ಮಾರ್ಗವಾಗಿ ಬಲೈ ಪಾದೆಯಾಗಿ ಚಲಿಸಬೇಕು.

ಮಲ್ಪೆಯಿಂದ ಮಂಗಳೂರು ಕಡೆಗೆ ಹೋಗುವ ವಾಹನಗಳು ಪಡುಕೆರೆ ಪಿತ್ರೋಡಿ, ಉದ್ಯಾವರ ಮಾರ್ಗವಾಗಿ ಚಲಿಸಬೇಕು.

ಮಲ್ಪೆಯಿಂದ ಕುಂದಾಪುರ ಹೋಗುವ ವಾಹನಗಳು ಸಂತೆಕಟ್ಟೆ ಮತ್ತು ನೇಜಾರು ಮುಖೇನಾ ಚಲಿಸಬೇಕು.

ಮಂಗಳೂರಿನಿಂದ ಕುಂದಾಪುರ ಕಡೆಗೆ:

ಕಟಪಾಡಿಯಿಂದ-ಮಣಿಪುರ-ದೆಂದೂರಕಟ್ಟೆ ರಾಂಪುರ-ಅಲೆವೂರು, ಗುಡ್ಡೆ ಅಂಗಡಿ-ಮಣಿಪಾಲ-ಆರ್ಎಸ್ಬಿ ಸಭಾಭವನ-ಸಿಂಡಿಕೇಟ್ ಸರ್ಕಲ್, ಕಾಯಿನ್ ಸರ್ಕಲ್-ಪೆರಂಪಳ್ಳಿ-ಅಂಬಾಗಿಲು ಪೆರಂಪಳ್ಳಿ ಕ್ರಾಸ್- ಅಂಬಾಗಿಲು NH 66 ಮುಖಾಂತರ ಚಲಿಸಬೇಕು.

ಕಟಪಾಡಿ ಉದ್ಯಾವರ ಕಡೆಯಿಂದ ಬಂದ ವಾಹನಗಳು-ಬಲೈಪಾದೆ-ಗುಡ್ಡೆ ಅಂಗಡಿ ಕೊರಂಗ್ರಪಾಡಿ ಕ್ರಾಸ್-ಕೊರಂಗ್ರಪಾಡಿ-ಕುಕ್ಕಿಕಟ್ಟೆ- ಜೋಡು ರಸ್ತೆ ಅಲೆವೂರು ಗುಡ್ಡೆ, ಅಂಗಡಿ-ಮಣಿಪಾಲ-RSB ಸಭಾ ಭವನ-ಸಿಂಡಿಕೇಟ್ ಸರ್ಕಲ್-ಕಾಯಿನ್ ಸರ್ಕಲ್-ಪೆರಂಪಳ್ಳಿ-ಅಂಬಾಗಿಲು ಪೆರಂಪಳ್ಳಿ ಕ್ರಾಸ್-ಅಂಬಾಗಿಲು NH 66 ಮುಖಾಂತರ ಚಲಿಸಬೇಕು.

ಕುಂದಾಪುರದಿಂದ-ಮಂಗಳೂರು ಕಡೆಗೆ:

ಅಂಬಾಗಿಲು ಎನ್ ಹೆಚ್ 66- ಅಂಬಾಗಿಲು ಪೆರಂಪಳ್ಳಿ ಕ್ರಾಸ್- ಪೆರಂಪಳ್ಳಿ- ಕಾಯಿನ್ ಸರ್ಕಲ್- ಸಿಂಡಿಕೇಟ್ ಸರ್ಕಲ್-ಮಣಿಪಾಲ RSB ಸಭಾ ಭವನ-ಅಲೆವೂರು ಗುಡ್ಡೆ ಅಂಗಡಿ-ರಾಂಪುರ-ದೆಂದುರ್ಕಟ್ಟೆ-ಮಣಿಪುರ-ಕಟಪಾಡಿ ಮುಖಾಂತರ ಚಲಿಸಬೇಕು.

ಮಂಗಳೂರಿನಿಂದ ಮಲ್ಪೆ ಕಡೆಗೆ

NH 66 ಕಿಯಾ ಶೋ ರೂಂ ಉದ್ಯಾವರ ಜಂಕ್ಷನ್-ಉದ್ಯಾವರ ಪೇಟೆ-ಪಿತ್ರೋಡಿ-ಸಂಪಿಗೆ ನಗರ ಕುತ್ಪಾಡಿ-ಕಡೆಕಾರು-ಕಿದಿಯೂರು-ಮಲ್ಪೆ ಮುಖಾಂತರ ಚಲಿಸಬೇಕು.

ಅಂದು ಬೆಳಿಗೆ, 07.00 ಗಂಟೆಯಿಂದ ಮದ್ಯಾಹ್ನ 03.00 ಗಂಟೆಯವರೆಗೆ ಯಾವುದೇ ವಾಹನಗಳು ಕರಾವಳಿ ಕಡೆಯಿಂದ ಉಡುಪಿ ಸಿಟಿ ಬಸ್ ನಿಲ್ದಾಣ ಮತ್ತು ಉಡುಪಿ ಸಿಟಿ ಕಡೆಗೆ ಬರುವಂತಿಲ್ಲ ಎಂದು ಜಿಲ್ಲಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago