ಬೆಂಗಳೂರು : ಪ್ರಧಾನಿ ಮೋದಿ ಅವರ ಜನ್ಮದಿನದಂದು ನಡೆದ ಕೋವಿಡ್ ಲಸಿಕೆ ಅಭಿಯಾನದಲ್ಲಿ ಭಾರತ ಶುಕ್ರವಾರ ಹೊಸ ಮೈಲುಗಲ್ಲು ಸಾಧಿಸಿದ್ದು, ಒಂದೇ ದಿನ ದೇಶಾದ್ಯಂತ ದಾಖಲೆಯ ಎರಡೂವರೆ ಕೋಟಿಗೂ ಹೆಚ್ಚು ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ.
ಶುಕ್ರವಾರ ಬೆಳಗ್ಗೆ ಆರಂಭವಾದ ಲಸಿಕೆ ವಿತರಣೆ ಪ್ರಕ್ರಿಯೆ ರಾತ್ರಿ 12 ರ ವೇಳೆಗೆ ಅಂತ್ಯವಾಯಿತು. ಆರೋಗ್ಯ ಕಾರ್ಯಕರ್ತರು ಮತ್ತು ದೇಶದ ಜನರ ಪರವಾಗಿ ಪ್ರಧಾನಿಗೆ ಇದು ಉಡುಗೊರೆ. ಇಂದು ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದಂದು, ಭಾರತವು ಒಂದೇ ದಿನದಲ್ಲಿ ಎರಡೂವರೆ ಕೋಟಿ ಡೋಸ್ ಲಸಿಕೆ ನೀಡುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸಿದೆ.
ಕೋ-ವಿನ್ ಪೋರ್ಟಲ್‌ನ ಮಾಹಿತಿಯ ಪ್ರಕಾರ, ಶುಕ್ರವಾರ ಮಧ್ಯರಾತ್ರಿ 12ರವರೆಗೆ ದೇಶದಲ್ಲಿ 2,50,10,112 ಲಸಿಕೆ ವಿತರಣೆ ಮಾಡಲಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಲಸಿಕೆ ವಿತರಣೆ ಸಂಖ್ಯೆ 79.33 ಕೋಟಿ ಡೋಸ್ ತಲುಪಿದೆ.
ಅಭಿಯಾನದಲ್ಲಿ ದೇಶದಲ್ಲಿಯೇ ಅತೀ ಹೆಚ್ಚು 29 ಲಕ್ಷ ಮಂದಿಗೆ ಲಸಿಕೆ ನೀಡಿದ ಹೆಗ್ಗಳಿಕೆ ಕರ್ನಾಟಕ ಪಾತ್ರವಾಗಿದೆ. ಈ ಮೂಲಕ ಲಸಿಕೆ ಡೋಸ್ ಪಡೆದವರಒಟ್ಟು ಸಂಖ್ಯೆ 5 ಕೋಟಿಗೆ ಏರಿಕೆಯಾಗಿದೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…