ಬೆಂಗಳೂರು: ಆನೇಕಲ್ ತಾಲೂಕಿನ ಹೆಬ್ಬಗೋಡಿ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಭಾವನಾ ಜನವರಿ 20ರಂದು ದೆಹಲಿಯಲ್ಲಿ ನಡೆಯಲಿರುವ ‘ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಭಾಗವಹಿಸಲು ಆಯ್ಕೆಯಾಗಿದ್ದಾಳೆ.
ಬೆಂಗಳೂರು ನಗರ ಜಿಲ್ಲೆಯಿಂದ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಈ ಪೈಕಿ ಆನೇಕಲ್ ತಾಲೂಕಿನ ಹೆಬ್ಬಗೋಡಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಭಾವನಾ ಕೂಡ ಒಬ್ಬಳು. ಆನ್‍ಲೈನ್‍ನಲ್ಲಿ ನೀಡಲಾದ ಪ್ರಶ್ನೆಗಳಿಗೆ ಸಮರ್ಥ ಉತ್ತರ ನೀಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯನ್ನು ಆಯ್ಕೆ ಮಾಡಲಾಗಿದೆ.
ಭಾವನಾ ತಂದೆ ರಮೇಶ್ ಆಟೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದು, ತಾಯಿ ಭಾರತಿ ಶಾಲೆಯೊಂದರಲ್ಲಿ ಆಯಾ ಆಗಿ ಕೆಲಸ ಮಾಡುತ್ತಿದ್ದಾರೆ. ಈ ಕುಟುಂಬದ ಬಾಲಕಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಪಡೆದಿರುವುದು ಹೆತ್ತವರಿಗೆ ಹಾಗೂ ಗ್ರಾಮಕ್ಕೆ ಹೆಮ್ಮೆ ತಂದಿದೆ.
ವಿದ್ಯಾರ್ಥಿನಿ ‘ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮಕ್ಕೆ ಆಯ್ಕೆಯಾಗಿರುವುದು ಆಕೆ ಓದುತ್ತಿರುವ ಶಾಲೆಯ ಶಿಕ್ಷಕರಲ್ಲಿ ಸಂತಸ ತಂದಿದೆ. ವಿದ್ಯಾರ್ಥಿನಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಆರ್ ರಾಮಮೂರ್ತಿ ಮತ್ತು ಮುಖ್ಯೋಪಾಧ್ಯಾಯ ಸಿ. ನಾರಾಯಣಸ್ವಾಮಿ ಅಭಿನಂದಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…