ಹ್ಯೂಸ್ಟನ್,: ಉತ್ತರ ಕನ್ನಡ ಜಿಲ್ಲೆ ಮೂಲದ ಈ ಬಾಲಕ ಸಾತ್ವಿಕ್ ಹೆಗಡೆ ಅಮೆರಿಕದ ಟೆಕ್ಸಾಸ್ ನಗರದಲ್ಲಿ ನಡೆದ ಹೌಡಿ-ಮೋದಿ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಹಾಗೂ ಪ್ರೆಸಿಡೆಂಟ್ ಡೊನಾಲ್ಡ್ ಟ್ರಂಪ್ ಜೊತೆಗೆ ಸೆಲ್ಪಿ ವಿಶ್ವದಾದ್ಯಂತ ವೈರಲ್ ಆಗಿದೆ.
ಮೋದಿಯವರ ಸ್ವಾಗತ ಕಾರ್ಯಕ್ರಮದಲ್ಲಿ ಸಾತ್ವಿಕ್ ಹೆಗಡೆ ಭಾಗವಹಿಸಿದ್ದನು. ಕಾರ್ಯಕ್ರಮದಲ್ಲಿ ಸೂರ್ಯ ನಮಸ್ಕಾರ ಪ್ರದರ್ಶನವನ್ನ ಕೂಡ ಸಾತ್ವಿಕ್ ನೀಡಿದ್ದನು. ನಂತರ ಅಮೆರಿಕ ಅಧ್ಯಕ್ಷ ಟ್ರಂಪ್ ಹಾಗೂ ಪ್ರಧಾನಿ ಮೋದಿಯವರ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದನು. ಅಮೆರಿಕದ ದಿ ವೈಟ್ ಹೌಸ್ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ಫೋಟೋವನ್ನು ಹಂಚಿಕೊಳ್ಳಲಾಗಿತ್ತು. ಈಗ ಮೋದಿ, ಟ್ರಂಪ್ ಜೊತೆಗೆ ಸಾತ್ವಿಕ್ ಇರುವ ಫೋಟೋ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದೆ.
ಬಳಿಕ ಅಲ್ಲೇ ನಿಂತಿದ್ದ ಸಾತ್ವಿಕ್ ಹೆಗಡೆ ತಂಡ ಅಮೆರಿಕ ಅಧ್ಯಕ್ಷ ಟ್ರಂಪ್ ಹಾಗೂ ಪ್ರಧಾನಿ ಮೋದಿಯವರ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದ.
ದಿ ವೈಟ್ ಹೌಸ್ ಅಧಿಕೃತ ಟ್ವಿಟರ್ ಖಾತೆ ಈ ಫೋಟೋ ಸಹ ಪ್ರಕಟಿಸಿದೆ. ಅದಾದ ಬಳಿಗ ಆ ಫೋಟೊ ಎಲ್ಲೆಡೆ ವೈರಲ್ ಆಗಿದೆ. ಟೆಕ್ಸಾಸ್ನ ಲೂಯಿಸ್ ಡಿ ಬ್ರಾಂಡಿಸ್ ಶಾಲೆಯಲ್ಲಿ 6 ನೇ ತರಗತಿಯಲ್ಲಿ ವ್ಯಾಸಂಗ ಮಾಡ್ತಿರುವ 13 ವರ್ಷ ವಯಸ್ಸಿನ ಸಾತ್ವಿಕ್ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕರ್ಕಿಸವಲ್ನ ಮೇಧಾ ಮತ್ತು ಪ್ರಭಾಕರ ಹೆಗಡೆ ದಂಪತಿಯ ಮಗ. ಈ ದಂಪತಿಗಳು ಕಳೆದ 17 ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿದ್ದಾರೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…