ಉಡುಪಿ

ಮೋದಿ ತಮ್ಮ ಶ್ರಮದಿಂದ ಪ್ರಧಾನಿ ಹುದ್ದೇಗೇರಿದವರು ; ಅವರು ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ನಿಶ್ಚಿತ: ಸಿ.ಟಿ.ರವಿ

ಬೆಂಗಳೂರು: ಹಣ, ಜಾತಿ, ಕುಟುಂಬದ ರಾಜಕೀಯ ಹಿನ್ನೆಲೆಯುಳ್ಳ ಕೆಲವರು ಈ ಹಿಂದೆ ಪ್ರಧಾನಿಯಾಗಿದ್ದಾರೆ. ಆದರೆ, ತಮ್ಮ ಶ್ರಮದಿಂದ ಪ್ರಧಾನಿ ಹುದ್ದೇಗೇರಿದವರು ನರೇಂದ್ರ ಮೋದಿ’ ಎಂದು ಶಾಸಕ ಸಿ.ಟಿ.ರವಿ ಹೇಳಿದರು.

ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ರಾಷ್ಟ್ರಧರ್ಮ ಆಯೋಜಿಸಿದ್ದ “ಮೋದಿ ಮತ್ತೊಮ್ಮೆ” ವಿಡಿಯೋ ಹಾಡಿನ್ನು ಬಿಡುಗಡೆಗೊಳಿಸಿ ಮಾತನಾಡಿ, ದೇಶ ಕಂಡ ಅತ್ಯಂತ ಪ್ರಾಮಾಣಿಕ ಪ್ರಧಾನಿ  ನರೇಂದ್ರ ಮೋದಿ. ಜಾತಿ, ಹಣ ಹಾಗೂ ಕುಟುಂಬದ ರಾಜಕೀಯ ಹಿನ್ನಲೆ ಇಲ್ಲದೆ ತಮ್ಮ ಶ್ರಮದಿಂದ ಪ್ರಧಾನಿ ಹುದ್ದೇಗೇರಿದವರು ನರೇಂದ್ರ ಮೋದಿ ಎಂದರು.

‘ಅದೃಷ್ಟದ ಮೂಲಕ ಅಧಿಕಾರಕ್ಕೆ ಏರಿದರು ಮನಮೋಹನ್ ಸಿಂಗ್. ಆದರೆ, ಆಡಳಿತ ನಡೆಸಿದ್ದು ಮಾತ್ರ ಸೋನಿಯಾ ಗಾಂಧಿ. ಸಚಿವ ಸಂಪುಟಕ್ಕೆ ಕಿಮ್ಮತ್ತು ನೀಡದಂತಹ ಸ್ಥಿತಿ ಮನಮೋಹನ್ ಸಿಂಗ್ ಅವರ ಕಾಲದಲ್ಲಿತ್ತು. ಆದರೆ, ಸಂಪುಟವನ್ನು ಪ್ರಜಾಪ್ರಭುತ್ವದ ದೇಗುಲ ಎಂದು ಕರೆದವರು ಮೋದಿ’ ಎಂದು ಹೇಳಿದರು.

ದೇಶದ ಅಭಿವೃದ್ದಿಯ ಬಗ್ಗೆ ತಮ್ಮದೇ ಆದ ವಿಶಿಷ್ಟ ಕನಸನ್ನುಹೊಂದಿರುವ ಪ್ರಧಾನಿ ಪ್ರಾಮಾಣಿಕವಾಗಿ ತಮ್ಮ ಕೆಲಸವನ್ನು ಪ್ರಾರಂಭಿಸಿದರು. ಮೊದಲು ದೇಶದ ಅಭಿವೃದ್ದಿಗೆ ಸುಧಾರಣೆಗಳನ್ನು ಪ್ರಾರಂಭಿಸಿದರು. ನಂತರ ಫಸಲ ಬಿಮಾ ಯೋಜನೆ, ಜನಧನ ಯೋಜನೆ ಸೇರಿದಂತೆ ಹತ್ತು ಹಲವು ಕಾರ್ಯಕ್ರಮಗಳನ್ನು ನೀಡುವ ಮೂಲಕ ದೇಶದ ಜನಸಾಮಾನ್ಯರ ಅಭಿವೃದ್ದಿಗೆ ಕಾರಣೀಕರ್ತರಾಗಿದ್ದಾರೆ. ಇಂತಹ ಕನಸುಗಳನ್ನು ಹೊಂದಿರುವ ಪ್ರಧಾನಿಯವರು ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದರು.

ರಂಗಕರ್ಮಿ ಪ್ರಕಾಶ್ ಬೆಳವಾಡಿ ಮಾತನಾಡಿ, ದೇಶದ ಅಭಿವೃದ್ದಿಗೆ ಮೋದಿ ಅಪಾರ ಕೊಡುಗೆಯನ್ನು ನೀಡಿದ್ದಾರೆ. ಮೊದಿಯವರು ಘನತೆಯನ್ನು ಕಾಪಾಡುವ ಕರ್ತವ್ಯ ಬಿಜೆಪಿ ಕಾರ್ಯಕರ್ತರಿಗೆ ಇದೆ. ಅವರ ಕಾರ್ಯಗಳ ಬಗ್ಗೆ ಜನರಲ್ಲಿ ತಿಳುವಳಿಕೆ ಮೂಡಿಸುವ ಅಗತ್ಯ ವಿದೆ. ಕೇಂದ್ರ ಸರಕಾರ ಕಳೆದ 4 ವರ್ಷಗಳಿಂದ ದೇಶದ ಜನಸಾಮಾನ್ಯರ ಅಭಿವೃದ್ದಿಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದನ್ನು ಜನಸಾಮಾನ್ಯರಿಗೆ ತಲುಪಿಸುವುದು ನಮ್ಮ ಉದ್ದೇಶವಾಗಿದೆ ಎಂದು ತಿಳಿಸಿದರು.

ಮೋದಿ ಮತ್ತೊಮ್ಮೆ ಹಾಡನ್ನು ಚೇತನ್ ನಿರ್ದೇಶಿಸಿದ್ದು, ವಾಗೀಶ್ ಚನ್ನಗಿರಿ ಅವರ ಸಾಹಿತ್ಯವಿದೆ. ದೇಸಿ ಮೋಹನ್ ಮತ್ತು ಪಂಚಮ್ ಜೀವ ಸಂಗೀತ ನಿರ್ದೇಶನ ಮಾಡಿದ್ದಾರೆ. ಅಶೋಕ್ ನಾಡಿಗ್ ನೇತೃತ್ವದಲ್ಲಿ ಛಾಯಾಗ್ರಹಣ ಹಾಗೂ ಸಂಕಲನ ನಡೆದಿದೆ. ಈ ಹಾಡನ್ನು ಸಾಮಾಜಿಕ ಜಾಲತಾಣಗಳ ಮೂಲಕ ಜನರನ್ನು ತಲುಪಿಸಬೇಕೆಂಬುದು ತಂಡದ ಉದ್ದೇಶವಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago