Featured

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ – vishwanews24

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಪ್ರಧಾನಿ ಕುರ್ಚಿಯ ಘನತೆ, ಗಾಂಭಿರ್ಯ ಮತ್ತು ಔಚಿತ್ಯವನ್ನು ನರೇಂದ್ರ ಮೋದಿಯವರು ತಮ್ಮ ಸುಳ್ಳು, ಕೀಳು ಅಭಿರುಚಿ, ದ್ವೇಷ, ಅಸೂಯೆಗಳನ್ನು ವ್ಯಕ್ತಪಡಿಸುವ ಭಾಷಣಗಳ ಮೂಲಕ ಮಣ್ಣುಪಾಲು ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ (ಮೇ 10) ಬೆಂಗಳೂರಿನಲ್ಲಿ ಭಾಷಣ ಮಾಡಿ, ಕರ್ನಾಟಕದ ಸಿಎಂ ಇನ್ನೆಷ್ಟು ದಿನ ಅಧಿಕಾರದಲ್ಲಿ ಇರ್ತಾರೋ ಎಂದಿದ್ದರು. ಇದಕ್ಕೆ ಸಿಎಂ ಸಿದ್ದರಾಮಯ್ಯ ಪತ್ರಿಕಾ ಹೇಳಿಕೆ ಮೂಲಕ ತಿರುಗೇಟು ಕೊಟ್ಟಿದ್ದಾರೆ. ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ಬೆಂಗಳೂರಿನಲ್ಲಿ ಮಾತನಾಡಿದ್ದು ದೇಶದ ಪ್ರಧಾನಿಯಾಗಿಯೋ? ಇಲ್ಲವೇ ರಾಜ್ಯ ಬಿಜೆಪಿ ಅಧ್ಯಕ್ಷರೋ? ಇಲ್ಲವೇ ರಾಜ್ಯದ ವಿರೋಧ ಪಕ್ಷದ ನಾಯಕರಾಗಿಯೋ? ಎನ್ನುವುದನ್ನು ಅವರೇ ಸ್ಪಷ್ಟಪಡಿಸಿ ಸಾರ್ವಜನಿಕರಲ್ಲಿ ಮೂಡಿರುವ ಗೊಂದಲವನ್ನು ಬಗೆಹರಿಸಬೇಕು ಎಂದು ಟಾಂಗ್‌ ಕೊಟ್ಟಿದ್ದಾರೆ.

ಇದನ್ನೂ ಓದಿ: 

ತನ್ನ ಎಲೆ ಮೇಲೆ ಆನೆ ಸತ್ತು ಬಿದ್ದಿದ್ದರೂ ಎದುರಿನವರ ಎಲೆ ಮೇಲೆ ಸತ್ತು ಬಿದ್ದ ನೊಣವನ್ನು ಹುಡುಕಾಡುವ ಢೋಂಗಿ ಬುದ್ಧಿಯೂ ಅವರ ಭಾಷಣದಲ್ಲಿ ಇತ್ತು. ನೆಹರೂ, ಇಂದಿರಾಗಾಂಧಿ, ವಾಜಪೇಯಿ ಸೇರಿದಂತೆ ದೇಶದ ಪ್ರಧಾನಮಂತ್ರಿಯಾದವರು ಎಂದೂ ಕೆಟ್ಟ ರಾಜಕಾರಣಿಗಳ ರೀತಿ ಬೀದಿ ಭಾಷಣ ಮಾಡಿ ವಿರೋಧ ಪಕ್ಷಗಳನ್ನು ಹಳಿಯಲು ಹೋಗಿಲ್ಲ. ಅವರೆಲ್ಲರೂ ಕಾಪಾಡಿಕೊಂಡು ಬಂದಿದ್ದ ಪ್ರಧಾನಿ ಕುರ್ಚಿಯ ಘನತೆ, ಗಾಂಭಿರ್ಯ ಮತ್ತು ಔಚಿತ್ಯವನ್ನು ನರೇಂದ್ರ ಮೋದಿಯವರು ಮಣ್ಣುಪಾಲು ಮಾಡುತ್ತಿದ್ದಾರೆ. ಬೆಂಗಳೂರಿಗೆ ಬಂದಿದ್ದ ಅವರು ಇನ್ನೂ ಪಂಚ ರಾಜ್ಯಗಳ ಚುನಾವಣಾ ರ‍್ಯಾಲಿಗಳ ಗುಂಗಿನಲ್ಲಿಯೇ ಇದ್ದಂತೆ ಕಂಡರು ಎಂದು ವ್ಯಂಗ್ಯವಾಡಿದ್ದಾರೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

15 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

15 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

16 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

16 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

16 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

18 hours ago