ಮೋದಿ ತಾಯಿಗೆ 100ರ ಸಂಭ್ರಮ :ತಾಯಿಯ ಆಶೀರ್ವಾದ ಪಡೆದ ಪ್ರಧಾನಿ ಮೋದಿ – Vishwanews24

Featured, ರಾಷ್ಟ್ರ ನ್ಯೂಸ್

ಮೋದಿ ತಾಯಿಗೆ 100ರ ಸಂಭ್ರಮ :ತಾಯಿಯ ಆಶೀರ್ವಾದ ಪಡೆದ ಪ್ರಧಾನಿ ಮೋದಿ

ಗಾಂಧೀನಗರ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್‌ ಮೋದಿ ಅವರು ಇಂದು 100ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ.

ಶತಾಯುಷಿಯಾದ ತಾಯಿ ಹೀರಾಬೆನ್‌ ಅವರನ್ನು ಪ್ರಧಾನಿ ಮೋದಿ ಭೇಟಿಯಾದರು. ಗುಜರಾತ್‌ ರಾಜಧಾನಿ ಗಾಂಧೀನಗರದಲ್ಲಿರುವ ತಮ್ಮ ನಿವಾಸಕ್ಕೆ ಭೇಟಿ ನೀಡಿದ ಮೋದಿ, ತಾಯಿಯ ಹುಟ್ಟುಹಬ್ಬವನ್ನು ಆಚರಿಸಿದರು.

ತಮ್ಮ ತಾಯಿಗೆ ಸಿಹಿ ತಿನಿಸಿ ಜನ್ಮದಿನದ ಶುಭಾಶಯ ತಿಳಿಸಿದ ಮೋದಿ ನಂತರ ತಾಯಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.

ಜನ್ಮದಿನದ ಸಂಭ್ರಮದಲ್ಲಿರುವ ಹೀರಾಬೆನ್ ಮೋದಿ ಅವರಿಗೆ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯ ಪ್ರಾಪ್ತವಾಗಲಿ ಎಂದು ಹಾರೈಸಿ ಮೋದಿ ಅವರ ಹುಟ್ಟೂರು ವಡನಗರದಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.

Leave a Reply