Featured

ಮೋದಿ ನಾಯಕತ್ವದಲ್ಲಿ ಮಹಾನ್ ರಾಷ್ಟ್ರವು ಎಲ್ಲಾ ನಾಗರಿಕರಿಗೆ ಶಾಂತಿ ಮತ್ತು ಸಮೃದ್ಧಿಯನ್ನು ತರಲಿ :  ಹುಟ್ಟುಹಬ್ಬಕ್ಕೆ ಶುಭ ಕೋರಿದ ಎಚ್‍ಡಿಡಿ -Vishwanews24

ಮೋದಿ ನಾಯಕತ್ವದಲ್ಲಿ ಮಹಾನ್ ರಾಷ್ಟ್ರವು ಎಲ್ಲಾ ನಾಗರಿಕರಿಗೆ ಶಾಂತಿ ಮತ್ತು ಸಮೃದ್ಧಿಯನ್ನು ತರಲಿ :  ಹುಟ್ಟುಹಬ್ಬಕ್ಕೆ ಶುಭ ಕೋರಿದ ಎಚ್‍ಡಿಡಿ -Vishwanews24

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು 71ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಶುಭ ಹಾರೈಸಿದ್ದಾರೆ.

ಮಾಜಿ ದೇವೇಗೌಡರು, 71ನೇ ಹುಟ್ಟುಹಬ್ಬದ ಶುಭಾಶಯಗಳು. ನರೇಂದ್ರ ಮೋದಿಯವರಿಗೆ ಉತ್ತಮ ಆರೋಗ್ಯವನ್ನು ಕರುಣಿಸಲಿ ಎಂದು ನಾನು ಸರ್ವಶಕ್ತ ದೇವರಲ್ಲಿ ಪ್ರಾರ್ಥಿಸುತ್ತೇನೆ. ಅವರ ನಾಯಕತ್ವದಲ್ಲಿ ಮಹಾನ್ ರಾಷ್ಟ್ರವು ಎಲ್ಲಾ ನಾಗರಿಕರಿಗೆ ಶಾಂತಿ ಮತ್ತು ಸಮೃದ್ಧಿಯನ್ನು ತರಲಿ ಎಂದು ಟ್ವೀಟ್ ಮಾಡಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ, ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಶುಭಾಶಯಗಳು. ರಾಷ್ಟ್ರದ ಸೇವೆ ಮಾಡಲು ಅವರಿಗೆ ಹೆಚ್ಚಿನ ಶಕ್ತಿ, ಸ್ಫೂರ್ತಿ ಮತ್ತು ಆರೋಗ್ಯವನ್ನು ಕರುಣಿಸಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ ಎಂದು ಬರೆದು ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಬಿಜೆಪಿ ಸೇವೆ ಮತ್ತು ಸಮರ್ಪಣಾ ಅಭಿಯಾನವನ್ನು ಆಯೋಜಿಸಿದೆ. ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಸೆ.17ರಿಂದ ಅ.7ರ ವರೆಗೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯದಲ್ಲಿ ಇಂದು ಒಂದೇ ದಿನ 30ಲಕ್ಷ ಜನರಿಗೆ ಲಸಿಕೆ ಹಾಕಿಸುವ ಸಂಕಲ್ಪ ಮಾಡಲಾಗಿದೆ. ಕರ್ನಾಟಕದ ಕಾವೇರಿ, ಮಲಪ್ರಭಾ, ಕೃಷ್ಣಾ ನದಿ ಸೇರಿ ಭಾರತದ ಎಲ್ಲ 71 ನದಿಗಳ ಸ್ವಚ್ಛತಾ ಕಾರ್ಯ ನಡೆಸಲು ಬಿಜೆಪಿ ಮುಂದಾಗಿದೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

1 day ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

1 day ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 day ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 day ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

1 day ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago