ನವದೆಹಲಿ: ಮೋದಿ ಪ್ರಧಾನಿಯಾಗಿರುವವರೆಗೆ ಯಾವ ಕಾರ್ಪೊರೇಟ್ ಕಂಪನಿಯೂ ರೈತರ ಜಮೀನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ.
ಕಿಸಾನ್‌ಗಡ ಗ್ರಾಮದ ರೈತರನ್ನು ಉದ್ದೇಶಿಸಿ ಇಲ್ಲಿ ಮಾತನಾಡಿದ ಅವರು, ‘ನೂತನ ಕೃಷಿ ಕಾಯ್ದೆಗಳು ಜಾರಿಯಾದರೂ ಬೆಂಬಲ ಬೆಲೆ ಮುಂದುವರಿಯಲಿದ್ದು, ಮಂಡಿಗಳು ಸಹ ಕಾರ್ಯ ನಿರ್ವಹಿಸಲಿವೆ’ ಎಂದು ಹೇಳಿದರು.
‘ನೂತನ ಕೃಷಿ ಕಾಯ್ದೆಗಳು ರೈತರ ಹಿತವನ್ನು ಕಾಪಾಡುವುದಿಲ್ಲ, ಅವುಗಳು ರೈತ ವಿರೋಧಿ ಎಂಬ ಅನುಮಾನಗಳು ಇದ್ದರೆ, ಈ ಎಲ್ಲ ಸಂದೇಹಗಳ ನಿವಾರಣೆಗಾಗಿ ರೈತರೊಂದಿಗೆ ತೆರೆದ ಮನಸ್ಸಿನಿಂದ ಚರ್ಚೆ ನಡೆಸಲು ಕೇಂದ್ರ ಸರ್ಕಾರ ಸಿದ್ಧವಿದೆ’ ಎಂದೂ ಹೇಳಿದರು.
‘ಬೆಂಬಲ ಬೆಲೆ ಸೇರಿದಂತೆ ನೂತನ ಕಾಯ್ದೆಗಳಲ್ಲಿ ಅಡಕವಾಗಿರುವ ಅಂಶಗಳ ಬಗ್ಗೆ ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷಗಳು ಸುಳ್ಳು ಹೇಳುತ್ತಿವೆ. ರೈತರ ಅಭಿವೃದ್ಧಿಯೇ ಮೋದಿ ನೇತೃತ್ವದ ಸರ್ಕಾರದ ಆದ್ಯತೆಯಾಗಿದೆ’ ಎಂದು ಹೇಳುವ ಮೂಲಕ ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಂಡರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…