Featured

ಮೋದಿ ಬೆಂಬಲಿಗರು ಮೂರ್ಖರು : ರಮ್ಯಾ – Vishwanews24

ನವದೆಹಲಿ,: ಕಾಂಗ್ರೆಸ್‌ ಐಟಿ ಸೆಲ್‌ ಮುಖ್ಯಸ್ಥ ರಮ್ಯಾ ಅವರು ಪ್ರಧಾನಿ ನರೇಂದ್ರ ಮೋದಿ ಬೆಂಬಲಿಗರನ್ನು ಮೂರ್ಖರು ಎಂದು ಅಣಕಿಸಿದ್ದಾರೆ.

‘ನಿಮಗೆ ಗೊತ್ತೆ? ಮೋದಿ ಬೆಂಬಲಿಗರ ಪೈಕಿ ಮೂವರಲ್ಲಿ ಒಬ್ಬರು ಮತ್ತಿಬ್ಬರಂತೆ ಮೂರ್ಖರು’ ಎಂದಿರುವ ಮೇಮ್‌ಅನ್ನು ಟ್ವೀಟ್‌ ಮಾಡಿರುವ ರಮ್ಯಾ, ಇದು ನನ್ನ ಫೇವರೀಟ್‌ ಎಂದು ಬರೆದಿದ್ದಾರೆ. ಈ ಮೂಲಕ ಕಾಂಗ್ರೆಸ್‌ ನಾಯಕಿ ಕಳೆದ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಬೆಂಬಲಿಸಿ ಮತ ಹಾಕಿದವರನ್ನು ಮೂರ್ಖರು ಎಂದಿದ್ದಾರೆ. 2014 ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಶೇ.32ರಷ್ಟು ಮತಗಳನ್ನು ಪಡೆದಿತ್ತು. ಇದೀಗ ಅಷ್ಟೂ ಜನರನ್ನು ಮೂರ್ಖರು ಎಂದಂತಾಗಿದೆ.

ಇದಕ್ಕೆ ಬಿಜೆಪಿ ಪಾಳಯದಿಂದಲೂ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ರಮ್ಯಾ ನಟನೆಯಲ್ಲಿ ವೈಫಲ್ಯ ಹೊಂದಿದಂತೆ ಐಟಿ ಸೆಲ್‌ ಹೆಡ್‌ ಆಗಿಯೂ ವೈಫಲ್ಯ ಹೊಂದಿದ್ದಾರೆ ಎಂದು ನಿಮಗೆ ಅನಿಸುತ್ತಿಲ್ಲವೇ? ಎಂದು ಪ್ರಶ್ನಿಸಿದ್ದಾರೆ. ಮತ್ತೆ ಕೆಲವು ನೆಟ್ಟಿಗರು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಭಾವ ಚಿತ್ರವನ್ನು ಹಾಕಿ, ನಿಮಗೆ ಗೊತ್ತೆ? ರಾಹುಲ್‌ ಗಾಂಧಿಯ ಬೆಂಬಲಿಗರ ಪೈಕಿ ಮೂವರಲ್ಲಿ ಮೂವರು ರಾಹುಲ್‌ ಗಾಂಧಿ ಅವರಂತೆ ಮೂರ್ಖರು ಎಂದು ಕಾಲೆಳೆದಿದ್ದಾರೆ.

ಈ ಕುರಿತು ವರದಿ ಮಾಡಿದ ಎಎನ್‌ಐ ಟ್ವೀಟ್‌ಅನ್ನು ರೀಟ್ವೀಟ್‌ ಮಾಡಿರುವ ರಮ್ಯಾ ಬೆಂಬಲಿಸಿದ್ದಕ್ಕೆ ಧನ್ಯವಾದ ಎಂದಿದ್ದಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

9 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

9 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

9 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

9 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

10 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

10 hours ago