ಜಿಲ್ಲೆ

ಮೋದಿ ಭರವಸೆ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ: ಸದಾನಂದಗೌಡ

ಕಳೆದ ನಾಲ್ಕು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಭರವಸೆಗಳನ್ನು ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. 5 ವರ್ಷದ ಆಡಳಿತಾವಧಿ ಪೂರ್ಣಗೊಳ್ಳುವ ವೇಳಗೆ ಎಲ್ಲಾ ಭರವಸೆಗಳನ್ನೂ ಸಂಪೂರ್ಣವಾಗಿ ಈಡೇರಿಸುತ್ತೇವೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ಅವರು ತಿಳಿಸಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು ಕಳೆದ ನಾಲ್ಕು ವರ್ಷಗಳಲ್ಲಿ ಜಗತ್ತು ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳುವಾಗ ಭಾರತದ ಸಲಹೆ ಕೇಳುವ ಹಂತಕ್ಕೆ ನಮ್ಮ ದೇಶ ಬೆಳೆದಿದೆ. ಜಾಗತಿಕ ಮಟ್ಟದಲ್ಲಿ ದೇಶದ ಘನತೆಯನ್ನು ಹೆಚ್ಚಿಸುವ ಪ್ರಯತ್ನ ಮಾಡಿದ್ದೇವೆ. ವಿದೇಶಿ ವಿನಿಮಯ ಗಣನೀಯವಾಗಿ ಹೆಚ್ಚಿದ್ದು, 41,700 ಕೋಟಿ ಡಾಲರ್​ಗೆ ತಲುಪಿದೆ. ನಾಲ್ಕು ವರ್ಷಗಳಲ್ಲಿ ಭ್ರಷ್ಟಾಚಾರರಹಿತ ಪಾರದರ್ಶಕ ಆಡಳಿತ ತರುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ತಿಳಿಸಿದರು.

ಈ ಮೊದಲು ನಮ್ಮ ಭಿಕ್ಷಾ ಪಾತ್ರೆಯನ್ನು ಎತ್ತಿಕೊಂಡು ಸಾಲ ಕೇಳುವ ಪರಿಸ್ಥಿತಿ ಇತ್ತು. ಈಗ ಆ ಪರಿಸ್ಥಿತಿ ಇಲ್ಲ. ದೇಶದ ಆರ್ಥಿಕ ಬೆಳವಣಿಗೆ ಉತ್ತಮವಾಗಿದೆ. ನಮ್ಮ ದೇಶದ ಅತ್ಯಂತ ವೇಗವಾಗಿ ಬೆಳವಣಿಗೆ ಕಂಡಿದ್ದು, ಜಿಡಿಪಿ ಬೆಳವಣಿಗೆ ದರ ಉತ್ತಮವಾಗಿದೆ.

ನಮ್ಮ ಸರ್ಕಾರ ಕಾವೇರಿ ನದಿ ನೀರಿನ ವಿಚಾರವಾಗಿ ಕೋರ್ಟ್​ ಮೊರೆ ಹೋಗಿ ಆಯಾ ರಾಜ್ಯಕ್ಕೆ ಸಿಗಬೇಕಾದ ಹಕ್ಕು ಸಿಗುವಂತೆ ನೋಡಿಕೊಂಡಿದ್ದೇವೆ. ಜತೆಗೆ ಮಹದಾಯಿ ವಿಚಾರವಾಗಿ ಸಹ ಕೋರ್ಟ್ ಹೊರಗೆ ಸಮಸ್ಯೆ ಪರಿಹರಿಸಲು ಪ್ರಯತ್ನಿಸದ್ದೇವೆ. ಆದರೆ, ಮಹದಾಯಿ ವಿಚಾರ ರಾಜಕೀಯ ತಿರುವು ಪಡೆದಿದೆ. ಮಹದಾಯಿ ವಿಚಾರವಾಗಿ ಗೋವಾ ಸರ್ಕಾರವನ್ನು ಉರುಳಿಸುವ ಬೆದರಿಕೆ ಒಡ್ಡಿ ಅಡ್ಡಗಾಲು ಹಾಕಿದವರು ಕಾಗ್ರೆಸ್​ನವರು ಬಿಜೆಪಿಯಲ್ಲ ಎಂದು ತಿಳಿಸಿದರು.

ಪೇಜಾವರ ಶ್ರೀಗಳು ಗಂಗಾ ನದಿ ಮತ್ತು ಕಪ್ಪು ಹಣದ ಬಗ್ಗೆ ಮಾತ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾವು ಅವರ ಸಲಹೆ ಪಡೆದು ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುತ್ತೇವೆ ಎಂದು ಭರವಸೆ ನೀಡಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago