Featured

ಮೋದಿ ಭಾಷಣ ಮಾಡಿದ ತಕ್ಷಣ ಬಿಜೆಪಿ ಗೆಲ್ಲುವುದಿಲ್ಲ ,ಮೋದಿ ಬಂದರೆ ಜನ ಮೋಡಿ ಆಗುವುದಿಲ್ಲ : ಸಿದ್ದರಾಮಯ್ಯ – Vishwanews24

ನಾನು ಆರ್ ಎಸ್ ಎಸ್ ಬಗ್ಗೆ ಟೀಕೆ ಮಾಡುತ್ತೇನೆ ,ಸತ್ಯ ಹೇಳುತ್ತೇನೆ ಎಂದು ನನ್ನ ಕಂಡರೆ ಮೋದಿಗೆ ಭಯ

 ಹುಬ್ಬಳ್ಳಿ: ಕಂದಾಯ ಗ್ರಾಮ, ಅರಣ್ಯ ಇಲಾಖೆಯ ಕಾನೂನು ತಿದ್ದುಪಡಿ ಮಾಡಿದ್ದು ನಾವು. ತಾಂಡಾ, ಹಟ್ಟಿ, ದೊಡ್ಡಿಗಳನ್ನು ಕಂದಾಯ ಗ್ರಾಮಗಳನ್ನಾಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದವರು ನಾವು. ಈಗ ಚುನಾವಣೆ ಇರುವ ಹಿನ್ನೆಲೆ ಬಿಜೆಪಿಯವರು ಪ್ರಧಾನಿ ಮೋದಿಯವರನ್ನು ಕರೆಯಿಸಿ ನಾವೇ ಮಾಡಿದವರೆಂದು ಪ್ರಚಾರ ತೆಗೆದುಕೊಳ್ಳುತ್ತಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಂಬಾಣಿ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿಸಲು ಕಾನೂನು ಮಾಡಿದ್ದೆ. ಅಡುಗೆ ಮಾಡಿದವರು ನಾವು, ಊಟ ಮಾಡುವವರು ಬಿಜೆಪಿಯವರು. ಸೇವಾಲಾಲ ಜಯಂತಿ, ಲಂಬಾಣಿ ಅಭಿವೃದ್ಧಿ ನಿಗಮ ಆ‌ರಂಭಿಸಿದ್ದು ನಾವು. ಸೇವಾಲಾಲ ಹುಟ್ಟಿದ ಸ್ಥಳ ಅಭಿವೃದ್ಧಿಪಡಿಸಿದ್ದೇವೆ. 450 ಕೋಟಿ ರೂ. ಅನುದಾನ ನೀಡಿದ್ದೇವೆ. ಲಂಬಾಣಿ ಅಭಿವೃದ್ಧಿಗಾಗಿ ಬಿಜೆಪಿ ಸರ್ಕಾರ ಕೇವಲ ಮೂರು ವರ್ಷದಲ್ಲಿ ಕೇವಲ 70 ಕೋಟಿ ರೂ. ಕೊಟ್ಟಿದ್ದಾರೆ. ಹಕ್ಕು ಪತ್ರ ನಾವು ಸಿದ್ಧಪಡಿಸಿದ್ದೇವೆ. ಈಗ ಅವರು ವಿತರಣೆ ಮಾಡುತ್ತಿದ್ದಾರೆ ಎಂದರು.

ನಮ್ಮ ಸರ್ಕಾರದಲ್ಲಿ 30 ಸಾವಿರ ಕೋಟಿ ರೂ. ಎಸ್ಸಿಇಪಿಟಿ ಹಣವಿತ್ತು. ಈಗ ಅದು 42 ಸಾವಿರ ಕೋಟಿ ರೂ. ಆಗಬೇಕಿತ್ತು. ಆದರೆ 28 ಸಾವಿರ ಕೋಟಿಯಾಗಿದೆ. ಇದರ ಅರ್ಥ ಬಿಜೆಪಿ ಎಸ್ಸಿಇಸ್ಪಿಟಿ ಹಣವನ್ನು ಬೇರೆ ಕಡೆ ಡೈವರ್ಟ್ ಮಾಡಿದ್ದಾರೆ. ಬಿಜೆಪಿ ಎಂದರೆ ಸುಳ್ಳನ್ನು ಉತ್ಪಾದಿಸುವ ಫ್ಯಾಕ್ಟರಿ. ನೂರು ಬಾರಿ ಸುಳ್ಳು ಹೇಳಿ ಅದನ್ನೇ ಸತ್ಯ ಎಂದು ಬಿಂಬಿಸುತ್ತಾರೆ. ನರೇಂದ್ರ ಮೋದಿಯವರಿಂದ ಬರೀ ಸುಳ್ಳು ಹೇಳಿಸುತ್ತಿದ್ದಾರೆ ಎಂದರು.

ನನಗೆ ಮೋದಿ ಕಂಡರೆ ಭಯವಿಲ್ಲ. ಆದರೆ ನನ್ನ ಕಂಡರೆ ಅವರಿಗೆ ಭಯ. ಏಕೆಂದರೆ ನಾನು ಆರ್ ಎಸ್ ಎಸ್ ಬಗ್ಗೆ ಟೀಕೆ ಮಾಡುತ್ತೇನೆ. ಸತ್ಯ ಹೇಳುತ್ತೇನೆ ಎನ್ನುವ ಭಯ ಅವರಿಗೆ ಎಂದರು.

ಮೋದಿ ಭಾಷಣ ಮಾಡಿದ ತಕ್ಷಣ ಬಿಜೆಪಿ ಗೆಲ್ಲುವುದಿಲ್ಲ. ಸುಳ್ಳು ಹೇಳಿದರೆ ಜನ ನಂಬುವುದಿಲ್ಲ. ಮೋದಿ ಬಂದರೆ ಜನ ಮೋಡಿ ಆಗುವುದಿಲ್ಲ. ಯಾರು ಏನೆಂಬುದನ್ನು ಜನರೇ ತೀರ್ಮಾನ ಮಾಡುತ್ತಾರೆ ಎಂದರು

Vishwa News 24

Recent Posts

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

2 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

2 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

3 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

3 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

4 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

4 hours ago