ಬೆಂಗಳೂರು: ನರೇಂದ್ರ ಮೋದಿ ಬರ್ತಾರೆ, ಗೆಲ್ಲಿಸ್ತಾರೆ ಎಂದು ನಂಬಿ ಕೂತಿರುವ ರಾಜ್ಯ ನಾಯಕರಿಗೆ ಬಿಗ್ ಶಾಕ್ ಸಿಕ್ಕಿದೆ. ಬಿಜೆಪಿ ನಾಯಕರ ವರ್ತನೆಯಿಂದ ಪ್ರಧಾನಿ ನರೇಂದ್ರ ಮೋದಿ ಎಂಬ ಚರ್ಚೆಗಳು ಶುರವಾಗಿವೆ.
ಮೋದಿಯ ಮೇಲೆ ಅತಿಯಾದ ಅವಲಂಬನೆ ಆಗಿ ರಾಜ್ಯದ ನಾಯಕರ ಶ್ರಮ ಕಡಿಮೆ ಆಗಿದೆಯಾ? ಎಂಬ ಪ್ರಶ್ನೆಗಳೆದ್ದಿವೆ. ಹಾಗಾದ್ರೆ ಬಿಜೆಪಿ ಹೈಕಮಾಂಡ್‌ಗೆ ತಲುಪಿದ ಆ ವರದಿಯಿಂದಲೇ ಮೋದಿ ಮಹಾ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ.
ಅಂದಹಾಗೆ 2024ರ ಚುನಾವಣೆಗೆ ಇನ್ನೂ 400 ದಿನ ಬಾಕಿ ಇದೆ. ಮಂಗಳವಾರ ದೆಹಲಿಯಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯ ಸಮಾರೋಪದಲ್ಲೇ ಪ್ರಧಾನಿ ನರೇಂದ್ರ ಮೋದಿ ಕಹಳೆ ಊದಿದ್ದಾರೆ. ಮೋದಿಯಿಂದ ಎಚ್ಚರಿಕೆಯ ಖಡಕ್ ಸಂದೇಶ ರವಾನೆಯಾಗಿದೆ ಎನ್ನಲಾಗಿದ್ದು, ಮೋದಿ ಭ್ರಮೆ ಬೇಡ, ಮೋದಿ ಹೆಸರೇಳಿಕೊಂಡು ಕೂರಬೇಡಿ ಎಂದು ಎಚ್ಚರಿಕೆ ಕೊಟ್ಟಿದ್ದಾರೆ. ಅತಿಯಾದ ಆತ್ಮವಿಶ್ವಾಸ ಬೇಡ, ಮೊದಲು ಮತದಾರರ ಮನ ಗೆಲ್ಲಿ ಎಂದು ಮೋದಿಯಿಂದ ಸಲಹೆ ಕೊಟ್ಟಿದ್ದು ಕರ್ನಾಟಕವೇ ಮೊದಲ ಟಾರ್ಗೆಟ್ ಎಂಬ ಚರ್ಚೆ ಆಗುತ್ತಿದೆ.
ಅಂದಹಾಗೆ ಕರ್ನಾಟಕ ಸೇರಿದಂತೆ ಮುಂಬರುವ ಚುನಾವಣೆಗಳ ತಂತ್ರಗಾರಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಬದಲಿಸುವ ಸುಳಿವು ಎನ್ನಲಾಗಿದೆ. 2024ರ ಲೋಕಸಭೆ ಚುನಾವಣೆಗೂ ಮುನ್ನ ಒಟ್ಟು 9 ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಮೇಘಾಲಯ, ನಾಗಲ್ಯಾಂಡ್, ತ್ರಿಪುರ ಬಳಿಕ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಕರ್ನಾಟಕದ ಬಳಿಕ ಮಿಝೋರಾಂ, ಛತ್ತೀಸ್‌ಗಢ್, ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ. ಆದ್ರೆ 25 ಸಂಸದರನ್ನು ಕೊಟ್ಟಿರುವ ಕರ್ನಾಟಕದ ಬಗ್ಗೆ ಬಿಜೆಪಿ ಹೈಕಮಾಂಡ್‌ಗೆ ಮೊದಲ ಸವಾಲಾಗಿದೆ.
Join our Whatsapp group by clicking the below link 👇👇
https://chat.whatsapp.com/KfUmhXQKZb114i4QHNvqEK
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…