Featured

ಮೋದಿ ಮತ್ತೆ ಪ್ರಧಾನಿಯಾಗಲು ಬಂಟ್ವಾಳ ರಾಮಾಂಜನೇಯ ಗೆಳೆಯರ ಬಳಗದ ವತಿಯಿಂದ ಮಹಾರುದ್ರಯಾಗ

ಬಂಟ್ವಾಳ: ದೇಶದ ಕೋಟ್ಯಂತರ ಜನರ ಆಶೋತ್ತರವಾಗಿ ಜಾಗತಿಕ ಮಟ್ಟದಲ್ಲಿ ದೇಶದ ಕೀರ್ತಿಯನ್ನು ಉತ್ತುಂಗಕ್ಕೇರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಲು ನಡೆಸಿದ ರುದ್ರಯಾಗ ಫಲಿಸುತ್ತದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಅವರು ಹೇಳಿದರು.

ಬಂಟ್ವಾಳ ತಾಲೂಕಿನ ಕಕ್ಕೆಪದವು ಎಂಬಲ್ಲಿ ಯಾಗ ನಡೆದಿದ್ದು ಸ್ಥಳೀಯ ಸಂಘಟನೆ ರಾಮಾಂಜನೇಯ ಗೆಳೆಯರ ಬಳಗದ ವತಿಯಿಂದ ಆಯೋಜನೆ ಮಾಡಲಾಗಿತ್ತು. ಶ್ರೀ ರಾಮಾಂಜನೇಯ ಭಜನಾ ಮಂದಿರದ 4ನೇ ವರ್ಷದ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಸಂಕಲ್ಪದಡಿ ಬುಧವಾರ ನಡೆದ ರುದ್ರಯಾಗದ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಯಾಗದ ಪೂರ್ಣಾಹುತಿ ಕಾರ್ಯ ನಿಗದಿಯಾಗಿತ್ತು. ಆದರೆ ಕೊನೆಕ್ಷಣದಲ್ಲಿ ಬಿಎಸ್ವೈ ಗೈರಾಗಿದ್ದರಿಂದ ಸಂಸದ ನಳಿನ್ ಕುಮಾರ್ ಯಾಗದ ಪೂರ್ಣಾಹುತಿ ನೆರವೇರಿಸಿದ್ದಾರೆ. ದೇಶಕ್ಕಾಗಿ ತನ್ನ ಜೀವನವನ್ನು ಮುಡಿಪಾಗಿರಿಸಿದ ನರೇಂದ್ರ ಮೋದಿ ಅವರು ಮುಂದಕ್ಕೂ ಪ್ರಧಾನಿಯಾಗುವಂತೆ ಕೈ ಜೋಡಿಸಬೇಕು ಎಂದರು.

ಬಲಿಷ್ಠ ಭಾರತ ನಿರ್ಮಿಸಲು ಶ್ರೀರಾಮಾಂಜನೇಯ ದೇವರ, ಶ್ರೀ ಕಾರಿಂಜೇಶ್ವರ ದೇವರ ಮತ್ತು ಮೈರ ಶ್ರೀ ಮಹಾಕಾಳಿ ಅಮ್ಮನವರ ಅನುಗ್ರಹ ಪ್ರಧಾನಿಗೆ ಇರಲೆಂಬ ಆಶಯದಲ್ಲಿ ಎಲ್ಲರೂ ಒಟ್ಟಾಗಿ ಈ ಯಾಗ ನೆರವೇರಿಸಲಾಗಿದೆ ಎಂದು ಗೆಳೆಯರ ಬಳಗದ ಮಾಜಿ ಅಧ್ಯಕ್ಷ ರಂಜಿತ್ ಮೈರ ತಿಳಿಸಿದ್ದಾರೆ.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಸೇರಿದಂತೆ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

vishwanews24

 

 

 

 

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

2 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

2 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

2 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

3 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

3 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

4 hours ago