ಭುವನೇಶ್ವರ್: ಇಂದು ಓಡಿಸ್ಸಾದ ಭುವನೇಶ್ವರ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಎಐಸಿಸಿ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಬಗ್ಗೆ ಮಾತನಾಡಿದ್ದು, ನಾನು ಅವರೊಂದಿಗೆ ಪ್ರಬಲವಾಗಿ ಸ್ಪರ್ಧಿಸಲು ಇಚ್ಛಿಸುತ್ತೇನೆ ಅವರನ್ನು ಮತ್ತೆ ಪ್ರಧಾನಿಯಾಗಲು ನಾನು ಬಿಡುವುದಿಲ್ಲ ಆದರೆ ಅವರನ್ನು ದ್ವೇಷಿಸುವುದಿಲ್ಲ ಎಂದಿದ್ದಾರೆ.
ಭುವನೇಶ್ವರದಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಮಾತನಾಡಿದ ರಾಹುಲ್, ನಾನು ಪ್ರತಿದಿನ ಅವರ ವಿರುದ್ಧ ವಾಗ್ದಾಳಿ ನಡೆಸುತ್ತೇನೆ. ಅವರೂ ಕೂಡ ನನ್ನ ವಿರುದ್ಧ ವಾಗ್ದಾಳಿ ನಡೆಸುತ್ತಾರೆ. ಅವರು ಮುಂದಿನ ಪ್ರಧಾನಿಯಾಗಬಾರದು, ದೇಶದಲ್ಲಿ ಕಾಂಗ್ರೆಸ್ ಜಯಗಳಿಸಬೇಕೆಂದು ಎಂಬುದು ಕೂಡ ನನ್ನ ಆಶಯ.ಆದರೆ ನಾನು ಪ್ರಧಾನಿಯನ್ನು ಎಂದೂ ದ್ವೇಷಿಸುವುದಿಲ್ಲ. ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ನೀಡುತ್ತೇನೆ’. ಪ್ರಧಾನಿ ಮೋದಿ ಅವರು ನನ್ನನ್ನು ನಿಂದಿಸಿದಷ್ಟೂ ನಾನು ಅವರನ್ನು ಅಪ್ಪಿಕೊಳ್ಳಲು ಇಷ್ಟ ಪಡುತ್ತೇನೆ ಎಂದು ರಾಹುಲ್ ಹೇಳಿದ್ದಾರೆ.
ಕಾಂಗ್ರೆಸ್ ವಿರೋಧ ಪಕ್ಷದೊಂದಿಗೆ ಪ್ರಬಲ ಸ್ಪರ್ಧೆ ನೀಡಲು ಬಯಸುತ್ತದೆ.ಆದರೆ ಕಾಂಗ್ರೆಸ್ಸಿಗರು ಯಾರನ್ನೂ ದ್ವೇಷಿಸುವುದಿಲ್ಲ ಎಂದಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…