Featured

ಮೋದಿ ಮತ್ತೆ ಪ್ರಧಾನಿ ಆದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ : ಹೆಚ್​.ಡಿ ರೇವಣ್ಣ – Vishwanews24

ಮೈಸೂರು: 2014ರಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿ ಆದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಹೇಳಿದ್ದರು. ಆದರೆ ನಿವೃತ್ತಿ ಪಡೆಯದೆ 2019ರಲ್ಲೂ ಹಾಸನ ಬಿಟ್ಟು ತುಮಕೂರಿನಲ್ಲಿ ಸ್ಪರ್ಧಿಸಿದ್ದಾರೆ. ಈಗ ರಾಜಕೀಯ ನಿವೃತ್ತಿ ಪಡೆಯುವ ವರಸೆ ದೇವೇಗೌಡರ ಹಿರಿಯ ಮಗ ಹೆಚ್ ಡಿ ರೇವಣ್ಣ ಅವರದ್ದು. ಹೌದು ಮೋದಿ ಮತ್ತೊಮ್ಮೆ ಪ್ರಧಾನಿ ಆದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲು ಹಾಕಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 6, 8, 22 ನಮಗೆ ಲಕ್ಕಿ, 18 ಅಂದರೆ 1+8=9. 2018 ಇತ್ತು 8+1=9 ಅದಕ್ಕೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದು,ಈ ಬಾರಿ ಕೂಡ 18 ರಂದು ಮತದಾನ ಇದೆ. ಹೀಗಾಗಿ ಮೊದಲ‌ ಹಂತದ 14 ಸ್ಥಾನ ಮೈತ್ರಿ ಅಭ್ಯರ್ಥಿ ಗೆಲ್ಲುತ್ತಾರೆ. ರಾಜ್ಯದಲ್ಲಿ ಅಚ್ಚರಿ ಫಲಿತಾಂಶ ಬರುತ್ತೆ.. 9 ಬಹಳ ಅದೃಷ್ಟ ಸಂಖ್ಯೆ. ನಾವು ರಾಜ್ಯದಲ್ಲಿ 22 ಲೋಕಸಭೆ ಸೀಟುಗಳನ್ನು ಗೆಲ್ಲುತ್ತೇವೆ. ಆ 22 ನಂಬರ್ ನಮಗೆ ಲಕ್ಕಿ. ಅದು ಯಡಿಯೂರಪ್ಪನವರಿಗೆ ಲಕ್ಕಿ ಆಗಲ್ಲ. .  ಈಗಲೂ 18ರಂದು ಚುನಾವಣೆ ಇದೆ. 1+8 ಈಗಲೂ ಯುಪಿಎ ಅಧಿಕಾರಕ್ಕೆ ಬರಲಿದೆ ಎಂದರು.

ಇದೇ ವೇಳೆ ಅಂಬರೀಶ್ ಅವರ ಬಗ್ಗೆ ನಾನು ಮಾತನಾಡಲು ಹೋಗಲ್ಲ. ಅಂಬರೀಶ್ ಬಗ್ಗೆ ನನಗೆ ಗೌರವ ಇದೆ. ಕಳೆದ ಬಾರಿ ಅವರ ಮನೆಗೆ ಬಂದ ಟಿಕೆಟ್ ತಗೊಂಡಿಲ್ಲ. ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬರುವ ಹೋಪ್ ಇರ್ಲಿಲ್ಲ ಎಂದು ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ಸಿಎಚ್ ವಿಜಯ್ ಶಂಕರ್, ಆರ್ ಧ್ರುವನಾರಾಯಣ್ ಗೆ ಮತ ಹಾಕಿ. ಸಿದ್ದರಾಮಯ್ಯ ಮತ್ತು ದೇವೇಗೌಡರು ಒಟ್ಟಾಗಿ ಪ್ರಚಾರ ಮಾಡಲಿದ್ದಾರೆ. ಮಂಡ್ಯ, ಹಾಸನ, ಮೈಸೂರು, ಚಾಮರಾಜನಗರದಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ. ಅವರ ಗೆಲುವಿಗೆ ನಮ್ಮ ದೋಸ್ತಿ ಪಕ್ಷದ ನಾಯಕರು ಶ್ರಮವಹಿಸಿದ್ದಾರೆ ಎಂದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

2 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

4 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

4 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

4 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

5 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

5 hours ago